ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಉತ್ತಮ ಅನುಷ್ಠಾನಕ್ಕಾಗಿ ವಾಶ್ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜತೆಗೆ ಗ್ರಾಮೀಣ ಜನರಲ್ಲಿ ಆರೋಗ್ಯಕರ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಬೇಕಾಗಿದೆ ಎಂದು ಹೇಳಿದರು.
ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಅನುಷ್ಠಾನದ ಮೂಲ ಉದ್ದೇಶ ಶುದ್ಧ ಕುಡಿಯುವ ನೀರು, ನೀರಿನ ಸಂರಕ್ಷಣೆ, ಪ್ರತಿಯೊಂದು ಗ್ರಾಮಗಳಲ್ಲಿ ಬಯಲು ಬರ್ಹಿದೆಸೆ ಮುಕ್ತ ಸ್ಥಿರತೆ ಕಾಯ್ದುಕೊಳ್ಳವುದು ಆಗಿದೆ. ಈ ನಿಟ್ಟಿನಲ್ಲಿ ನೂತನ ತಾಂತ್ರಿಕ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಐಇಸಿ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಗ್ರಾಮೀಣ ಸಮುದಾಯದಲ್ಲಿ ವ್ಯಾಪಕವಾದ ಅರಿವು ಮೂಡಿಸಬೇಕಾಗಿದೆ ಎಂದರು.ಪ್ರತಿ ಮನೆ ಮನೆಗೂ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಕಡೆಯಲ್ಲೂ ಓವರ್ ಹೆಡ್ ಟ್ಯಾಂಕ್‍ಗಳ ನಿರ್ಮಾಣ ಸೇರಿದಂತೆ ಜಲಜೀವನ್ ಮಿಷಯ್ ವತಿಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 2012ರಿಂದಲೂ ವೈಯಕ್ತಿಕ ಹಾಗೂ ಸಮುದಾಯ ಶೌಚಾಯಗಳನ್ನು ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಘನತ್ಯಾಜ್ಯ, ಬೂದು ನೀರು ಹಾಗೂ ಹೊಸದಾಗಿ ಮಲತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕುಡಿಯುವ ನೀರು ಸರಬರಾಜು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ರಚನೆ ಮಾಡಿ ಕಾರ್ಯಾಚರಣೆ ಜವಾಬ್ದಾರಿ ವಹಿಸಲಾಗಿದೆ. ನೈರ್ಮಲ್ಯ ಸುಸ್ಥಿರತೆ ಮತ್ತು ವಾಶ್ ಚಟುವಟಿಕೆಗಳ ಕುರಿತು ತಾಪಂ ಇಒಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರು, ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಹಾಗೂ ಗ್ರಾಪಂ ಚುನಾಯಿತ ಪ್ರತಿನಿಧಿಗಳು, ಪಿಡಿಒಗಳು ಕ್ಷೇತ್ರಮಟ್ಟದ ಸಿಬ್ಬಂದಿಗಳ ಸಾಮರ್ಥ್ಯ ಅಭಿವೃದ್ಧಿ ಮಾಡಬೇಕಾಗಿದೆ ಎಂದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ಜಿ.ಎಂ.ರೆಬೆಲ್ಲೋ, ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಅನುಷ್ಠಾನ ಮತ್ತು ಸುಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಾಚಾರಣೆ ಕುರಿತು ಮಾಹಿತಿ ನೀಡಿದರು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ರಚನೆ ಮತ್ತು ಕಾರ್ಯಾಚರಣೆ ಜವಾಬ್ದಾರಿಗಳು ಹಾಗೂ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆಕಡೆ ಗಮನ ಹರಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ನೀರು ಮತ್ತು ನೈರ್ಮಲ್ಯ ಸಂಬಂಧಿಸಿದ ಪರಿಕರಗಳ ವಿತರಿಸಲಾಯಿತು.