ಮಕ್ಕಳಿಗೆ ಬಾಲ್ಯ ಅನುಭವಿಸಲು ಅವಕಾಶ ಕಲ್ಪಿಸುವುದು ಅಗತ್ಯ: ನ್ಯಾ.ಶುಭಾ

KannadaprabhaNewsNetwork |  
Published : Nov 20, 2026, 02:30 AM IST
ಚಿತ್ರ : 17ಎಂಡಿಕೆ1 : ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಿದರು.  | Kannada Prabha

ಸಾರಾಂಶ

ಮಕ್ಕಳಿಗೆ ಅವರ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸಬೇಕು. ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಹೇಳಿದ್ದಾರೆ.

ಮಡಿಕೇರಿ : ಮಕ್ಕಳಿಗೆ ಅವರ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸಬೇಕು. ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಹೇಳಿದ್ದಾರೆ.

ಜಿಲ್ಲಾಡಳಿತ, ಜಿ. ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ‘ಕೃಷಿ ಕ್ಷೇತ್ರದಲ್ಲಿ ಬಾಲಕಾರ್ಮಿಕರ ಸ್ಥಿತಿ, ವಲಸೆ ಕುಟುಂಬಗಳ ಸಮಸ್ಯೆಗಳು ಹಾಗೂ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016ರ ಕುರಿತು ಇಲಾಖಾಧಿಕಾರಿಗಳಿಗೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ, ಚೈಲ್ಡ್ ಲೇಬರ್ ಪ್ಲಾಟ್ ಫಾರಂ, ರಾಷ್ಟ್ರೀಯ ಯೋಜನಾ ಸಂಯೋಜಕರಾದ ರಂಜಿತ್ ಪ್ರಕಾಶ್ ಅವರು ಮಾತನಾಡಿ, ಮಕ್ಕಳ ಸಮಗ್ರ ಅಭಿವೃದ್ಧಿ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಉದ್ದೇಶದಿಂದ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಸಹಯೋಗದಲ್ಲಿ ‘ಚೈಲ್ಡ್ ಡೆವಲಪ್‌ಮೆಂಟ್ ಪ್ಲಾಟ್‌ಫಾರ್ಮ್ ಪ್ರೋಗ್ರಾಂ’ ಎಂಬ ನೂತನ ಕಾರ್ಯಕ್ರಮ ಆರಂಭಿಸಲಾಗಿದೆ ಎಂದರು.

ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಕೊಡಗು ಜಿಲ್ಲೆಯೂ ಯೋಜನೆಗೆ ಆಯ್ಕೆಯಾಗಿದೆ ಎಂದು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಯೋಗೇಶ್ ಅವರು ಮಾತನಾಡಿ, ಮಕ್ಕಳ ರಕ್ಷಣೆಯಲ್ಲಿ ಶಿಕ್ಷಣ ಇಲಾಖೆಯ ಪಾತ್ರ ಪ್ರಮುಖ ಎಂದರು.ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಎ.ಯತ್ನಟ್ಟಿ ಮಾತನಾಡಿ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕಾಗಿದ್ದು, ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ದೊರಕಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.

ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಸಬ್ ಇನ್‌ಸ್ಪೆಕ್ಟರ್‌ ಸಮತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿ.ಅಂಬಿಕಾ ಮಾತನಾಡಿದರು.

ಜಿ.ಪಂ.ಸಿಇಒ ದಿನೇಶ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಡಿ.ಆರ್.ಪ್ರಸನ್ನ ಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಎಚ್.ಸಿ.ಭಾಗೀರತಿ, ಪ್ರಮುಖರಾದ ಕುಡಿಯರ ಮುತ್ತಪ್ಪ, ಬಿ.ಆರ್.ಭರತ್, ನಿರ್ವಾಹಣಪ್ಪ, ಸರೋಜಿನಿ ಮತ್ತಿತರರಿದ್ದರು.ಯಶೋಧ ಪ್ರಾರ್ಥಿಸಿದರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ಶ್ರೀಧರ್ ಸ್ವಾಗತಿಸಿದರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಂಕ್ ಸೌಲಭ್ಯ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ: ಸದಾಶಿವ ಮೇತ್ರಿ
ಕಲಾ ಜಗತ್ತಿನಲ್ಲಿ ಪ್ರತಿಭೆ ಗುರುತಿಸಿಕೊಳ್ಳಿ