ಲಕ್ಷ್ಮೇಶ್ವರ: ಶಿಕ್ಷಕರು ಮಕ್ಕಳಲ್ಲಿ ಅಕ್ಷರದ ಜತೆಗೆ ಮಾನವೀಯ ಮೌಲ್ಯ ಬೆಳೆಸಬೇಕು ಎಂದು ಪುರಸಭೆ ಸದಸ್ಯೆ ಜಯಕ್ಕ ಕಳ್ಳಿ ಹೇಳಿದರು.
ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಪದ್ಧತಿಯಿಂದ ಹೆಚ್ಚು ಪ್ರತಿಭಾವಂತರಾಗುತ್ತಿದ್ದಾರೆ. ನಮ್ಮ ಮಕ್ಕಳು ಅತಿ ಹೆಚ್ಚು ಅಂಕಗಳಿಸಬೇಕು ಎನ್ನುವ ಮನೋಭಾವ ಪಾಲಕರಲ್ಲಿ ಬೆಳೆಯುತ್ತಿರುವುದು ಆರೋಗ್ಯಕರ ಲಕ್ಷಣವಲ್ಲ. ಮಕ್ಕಳಲ್ಲಿ ಅಕ್ಷರದ ಜತೆಯಲ್ಲಿ ಮಾನವೀಯ ಮೌಲ್ಯ ಹಾಗೂ ನಮ್ಮ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವ ಕಾರ್ಯ ಶಿಕ್ಷಕರು ಮಾಡಬೇಕು ಎಂದು ಹೇಳಿದರು.
ಶಾಲೆಯ ಆಡಳಿತ ಮಂಡಳಿಯ ಸದಸ್ಯ ಹಾಗೂ ಮುಖ್ಯೋಪಾಧ್ಯಾಯ ಗಂಗಾಧರ ಶಿರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ನಾವು ತಪ್ಪದೆ ಮಾಡುತ್ತೇವೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಗಲಿರುಳು ಶ್ರಮಿಸುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸುತ್ತಿರುವ ಮಕ್ಕಳ ಪ್ರತಿಭೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದರು.ಶಾಸಕ ಡಾ.ಚಂದ್ರು ಲಮಾಣಿ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದರು.
ಶಿಕ್ಷಕಿ ಮೇರಿ ಆಂಟೋನಿ ಸ್ವಾಗತಿಸಿದರು. ಶಿಕ್ಷಕಿ ಹಡಗಲಿ ಹಾಗೂ ಕೊಡ್ಲಿ ನಿರೂಪಿಸಿದರು.