ದೊಡ್ಡಬಳ್ಳಾಪುರ: ರೈತರು ಬೆವರು ಸುರಿಸಿ ಬೆಳೆದ ಬೆಳೆಗಳಿಂದಲೇ ನಮ್ಮ ಬದುಕು ಸಾಗುತ್ತಿದೆ. ಪ್ರಕೃತಿ ಸವಾಲುಗಳು, ಮಾರುಕಟ್ಟೆ ಅಸ್ಥಿರತೆಗಳ ನಡುವೆಯೂ ಅವರು ಸಮಾಜದ ಆಹಾರ ಭದ್ರತೆಯನ್ನು ಕಾಪಾಡುತ್ತಿದ್ದಾರೆ. ಅವರ ಶ್ರಮವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದು, ಅವರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಚರ್ಚೆ ನಡೆಸುವುದು ಹಾಗೂ ಎತ್ತಿನ ಹೊಳೆ ಯೋಜನೆಯ ಪ್ರಸಕ್ತ ಕಾಮಗಾರಿ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಬಮೂಲ್ ನಿರ್ದೇಶಕ ಎಸ್ ಪಿ.ಮುನಿರಾಜು ಮಾತನಾಡಿ, ರೈತರ ಪರವಾಗಿ ಹಲವಾರು ಯೋಜನೆಗಳಲ್ಲಿ ಮೇವು ಕತ್ತರಿಸುವ ಯಂತ್ರ ,ಹಸು ಸಾಕಾಣಿಕರಗೆ ಸಬ್ಸಿಡಿಯಲ್ಲಿ ಧನಸಹಾಯ,ವಿದ್ಯಾವಂತ ಯುವ ರೈತರಿಗೆ ಯಾವುದೇ ಭೂಮಿ ಅಡ ಇಡದೇ ಧನಸಹಾಯ ಪಡೆಯಬಹುದು, ಕೆಐಡಿಬಿ ವಶವಾಗುತ್ತಿದ್ದ ರೈತರ ಭೂಮಿಯನ್ನು ಕಾಪಾಡುವಲ್ಲಿ ಸಚಿವರ ಶ್ರಮ ಅಗಾಧ. ಅವರು ರೈತರ ಹಿತ ಕಾಪಾಡುವಲ್ಲಿ ಸದಾಸಿದ್ಧ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ವತಿಯಿಂದ ಕೃಷಿಗೆ ಸಂಬಂಧಿತ ಮಾಹಿತಿ ನೀಡುವ ಮಳಿಗೆಗಳನ್ನು ಉದ್ಘಾಟಿಸಿ, ಜಿಲ್ಲೆಯ ರೈತರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅನಿಲ್ ಕುಮಾರ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿ.ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಎಸ್.ರವಿಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ತಾಲೂಕು ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಿತ್ತರಹಳ್ಳಿ ರಮೇಶ್, ಬಯಪ ನಿರ್ದೇಶಕ ಪ್ರಸನ್ನಕುಮಾರ್, ತಾಲೂಕು ಸಹಾಯಕ ನಿರ್ದೇಶಕಿ ಸುಶೀಲಮ್ಮ ಸೇರಿದಂತೆ ಮತ್ತು ರೈತರು ಉಪಸ್ಥಿತರಿದ್ದರು.23ಕೆಡಿಬಿಪಿ1- ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದಿಂದ ಆಯೋಜಿಸಿದ್ದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.