ಕನ್ನಡಪ್ರಭ ವಾರ್ತೆ ಶಿಕಾರಿಪುರ
ಮಂಗಳವಾರ ತಾ.ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಬದುಕಿದ್ದು ರೈತರ ಪಾಲಿಗೆ ಸತ್ತಂತಾಗಿದೆ ಎಂದು ಟೀಕಿಸಿದ ಅವರು, ಗಾಳಿ ಮಳೆಗೆ ಲಕ್ಷಾಂತರ ಅಡಿಕೆ ಮರ ಧರೆಗುರುಳಿದ್ದು ಸೂಕ್ತ ಪರಿಹಾರ, ವಿಮೆ ನೀಡಿ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಮುಖ್ಯಮಂತ್ರಿಗಳು, ಸಚಿವರನ್ನು ಕಳುಹಿಸಿ ರೈತರಿಗೆ ಸಾಂತ್ವನ ದೈರ್ಯ ತುಂಬಿ ಕಣ್ಣೀರು ಒರೆಸುವ ಬದಲು ಕುರ್ಚಿ ಉಳಿಸಿಕೊಳ್ಳಲು ಸಚಿವರ ಜತೆ ದೆಹಲಿಗೆ ತೆರಳಿ ಬೀಡು ಬಿಟ್ಟಿದ್ದಾರೆ. ಕುರ್ಚಿಗಾಗಿ ಹೋರಾಡುತ್ತಿರುವ ಮುಖ್ಯಮಂತ್ರಿಗಳು ರೈತರ ಕಣ್ಣೀರು ಒರೆಸಲು ಸಾದ್ಯವಾಯಿತಾ? ಎಂಬುದನ್ನು ಅರಿತುಕೊಳ್ಳಲಿ ತಪ್ಪಿದಲ್ಲಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.ಜನತೆ ಬೇಡ ಎಂದರೂ ಗ್ಯಾರೆಂಟಿಗಾಗಿ ರೈತರಿಗೆ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಾರಿಗೊಳಿಸಿದ್ದ ಕಿಸಾನ್ ಸಮ್ಮಾನ್ ಯೋಜನೆ ರು.4 ಸಾವಿರ, ಹೈನುಗಾರಿಕೆಗೆ ಪ್ರೋತ್ಸಾಹ ಧನ ಕಳೆದ 3 ವರ್ಷದಿಂದ ನೀಡದೆ ಅಂದಾಜು 800 ಕೋಟಿ ರು. ಖಜಾನೆಯಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆಗೆ ಪರಿಹಾರ ವಿತರಿಸದೆ, ಹದಗೆಟ್ಟ ಮಳೆ ಮಾಪನ ಕೇಂದ್ರದ ದುರಸ್ತಿ ಬಗ್ಗೆ ಬರೆದ ಪತ್ರಕ್ಕೆ ಯಾವುದೇ ಸ್ಪಂದನೆ ಇಲ್ಲ. ಮುಂಗಾರು ಆರಂಭವಾಗುತ್ತಿದ್ದು, ರಸಗೊಬ್ಬರ ಸಾಗುವಳಿದಾರರಿಗೆ ನೀಡಲು ಸಾದ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ರೈತರ ಪರ ಕಿಂಚಿತ್ತು ಕಾಳಜಿಯಿಲ್ಲದ ಸರ್ಕಾರ ತೀವ್ರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದರು.
ತಾ.ರೈತ ಮೋರ್ಚಾ ಅಧ್ಯಕ್ಷ ಎಚ್.ಆರ್ ಯೋಗೀಶಪ್ಪ ಮಾತನಾಡಿ, ತಾಲೂಕಿನಲ್ಲಿ ಅಕಾಲಿಕ ಮಳೆಗೆ ಹಾನಿಯಾದ ಅಡಿಕೆ ಮರದ ಬಗ್ಗೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ. ಈ ಪ್ರತಿಭಟನೆ ಕೇವಲ ಸಾಂಕೇತಿಕವಾಗಿದ್ದು, ಸರ್ಕಾರ ಸ್ಪಂದಿಸದಿದ್ದಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ರೈತರ ಕಣ್ಣೀರು ಒರೆಸುವ ಕೆಲಸ ಮಾಡಲಿ: ಸಂಸದ ಬಿವೈಆರ್
ತಾಲೂಕಿನಾದ್ಯಂತ ಶಾಶ್ವತ ನೀರಾವರಿ ಕಲ್ಪಿಸಲಾಗಿದ್ದು, ಇದೀಗ ಧರಿದ್ರ ಸರ್ಕಾರಕ್ಕೆ ವಿದ್ಯುತ್ ಬಿಲ್ ಪಾವತಿಸಲಾಗುತ್ತಿಲ್ಲ ಎಂದು ಆರೋಪಿಸಿದ ಅವರು, ರೈತರು ಮೆಕ್ಕೆಜೋಳ ಮಾರಿಕೊಂಡ ನಂತರದಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದ್ದು, ಅಧಿಕಾರ ದೊರೆತಾಗ ರೈತರ ಕಣ್ಣೀರು ಒರೆಸುವ ಕೆಲಸ ಮಾಡಿ. ಶಾಶ್ವತವಾಗಿ ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಇರಲು ಸಾದ್ಯವಿಲ್ಲ ಎಂಬ ಸತ್ಯ ಜ್ಞಾಪಕವಿರಲಿ ಎಂದು ಎಚ್ಚರಿಸಿದರು.