- ಚನ್ನಗಿರಿ ತಾಲೂಕು ಕಚೇರಿಯಲ್ಲಿ ದೇವರಾಜ ಅರಸು ಜನ್ಮದಿನ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ, ಅರಸು ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇವರಾಜ ಅರಸು ಮುಖ್ಯಮಂತ್ರಿಯಾಗಿ 8 ವರ್ಷ ಅಧಿಕಾರ ನಡೆಸಿದ್ದರು. ಅವರ ಆಡಳಿತ ಅವಧಿಯಲ್ಲಿ ಶೋಷಿತರು, ದಲಿತರು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಭೂ ರಹಿತರಿಗೆ ಭೂಮಿ ಮಾಲೀಕತ್ವ ದೊರಕಿಸಿಕೊಟ್ಟ ಧೀಮಂತ ನಾಯಕರಾಗಿದ್ದರು ಎಂದರು.ಜಾತಿ ಹಿನ್ನಲೆ, ಆರ್ಥಿಕ ಬಲ ಇಲ್ಲದೇ ರಾಜಕೀಯಕ್ಕೆ ಬಂದಿದ್ದ ಅವರಸು, 2 ಬಾರಿ ಮುಖ್ಯಮಂತ್ರಿಯಾಗಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿಯೇ ತಮ್ಮ ಜೀವನ ಮುಡುಪಾಗಿಟ್ಟಿದ್ದರು. ತಮಗಾಗಿಯೇ ಬದುಕದೇ ಸಮಾಜದ ಉದ್ದಾರಕ್ಕಾಗಿ ಜೀವಿಸಿದವರು ಎಂದರು.
ಸಮಾರಂಭದಲ್ಲಿ ತಾಲೂಕು ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಸಿ.ಸಿದ್ದಪ್ಪ, ತಿಪ್ಪೇಶಪ್ಪ, ವೀರಶೈವ ಸಮಾಜದ ಗೌರವ ಅಧ್ಯಕ್ಷ ರಾಜಶೇಖರಯ್ಯ, ಗಂಗಾಧರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಧರ್, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಶಾಂತಕುಮಾರ್ ಎಚ್. ಮುದಿಹಾಳ್ ಮೊದಲಾದವರು ಹಾಜರಿದ್ದರು.
ಚನ್ನಗಿರಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಾಜಿ ಸಿಎಂ ಡಿ.ದೇವರಾಜ ಅರಸು 109ನೇ ಜನ್ಮದಿನ ಕಾರ್ಯಕ್ರಮದಲ್ಲಿ ಗಣ್ಯರು ಅರಸು ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ, ಗೌರವ ಸಮರ್ಮಿಸಿದರು.