ಆಪರೇಷನ್ ಕಮಲಕ್ಕೆ ಬಲಿಯಾಗುವ ಜಾಯಮಾನ ನನ್ನದಲ್ಲ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Nov 18, 2024, 12:01 AM IST
17ಕೆಎಂಎನ್ ಡಿ16 | Kannada Prabha

ಸಾರಾಂಶ

ಚಿಕ್ಕವಯಸ್ಸಿನಲ್ಲಿಯೇ ಹಣ ನೋಡಿದ ವ್ಯಕ್ತಿ ನಾನು. ಈಗ ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದಿಲ್ಲ. ನಮ್ಮ ಪಕ್ಷದಲ್ಲೇ ಕೆಲವರು ಹಣ ಮಾಡುವ ಉದ್ದೇಶದಿಂದ ಆಪರೇಷನ್ ಕಮಲಕ್ಕೆ ಬಲಿಯಾಗುತ್ತಿರಬಹುದು. ನಾನು ಮಾತ್ರ ಬಿಜೆಪಿಯ ಆಮಿಷಕ್ಕೆ ಬಲಿಯಾಗುವುದಿಲ್ಲ.

ಕನ್ನಡಪ್ರಭ ವಾರ್ತೆ ಮದ್ದೂರು

ಹಣಕ್ಕಾಗಿ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವ ಜಾಯಮಾನ ನನ್ನದಲ್ಲ ಎಂದು ಶಾಸಕ ಕೆ.ಎಂ. ಉದಯ್ ಭಾನುವಾರ ಹೇಳಿದರು.

ತಾಲೂಕಿನ ಕದಲೂರು ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿದೊಡ್ಡಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಘನ ತ್ಯಾಜ್ಯ ವಸ್ತುಗಳ ಮರುಬಳಕೆ ಮತ್ತು ನಿರ್ವಹಣಾ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು.

ಚಿಕ್ಕವಯಸ್ಸಿನಲ್ಲಿಯೇ ಹಣ ನೋಡಿದ ವ್ಯಕ್ತಿ ನಾನು. ಈಗ ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದಿಲ್ಲ. ನಮ್ಮ ಪಕ್ಷದಲ್ಲೇ ಕೆಲವರು ಹಣ ಮಾಡುವ ಉದ್ದೇಶದಿಂದ ಆಪರೇಷನ್ ಕಮಲಕ್ಕೆ ಬಲಿಯಾಗುತ್ತಿರಬಹುದು. ನಾನು ಮಾತ್ರ ಬಿಜೆಪಿಯ ಆಮಿಷಕ್ಕೆ ಬಲಿಯಾಗುವುದಿಲ್ಲ ಎಂದರು.

ಸಚಿವ ಸಂಪುಟದ ವಿಸ್ತರಣೆಯಲ್ಲಿ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಶಾಸಕ ಸ್ಥಾನವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿಕೊಂಡು ಹೋಗುವ ಗುರಿ ಹೊಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಕದಲೂರು ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ. ಮುಖಂಡ ಶಿವಣ್ಣ ಸೇರಿದಂತೆ ಹಲವರು ಇದ್ದರು.

ಸರ್ಕಾರಿ ನೌಕರ ಸಂಘದ ನಿರ್ದೇಶಕರಾಗಿ ವೇದಮೂರ್ತಿ ಆಯ್ಕೆ

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವೇದಮೂರ್ತಿ ಆಯ್ಕೆಯಾದರು. ಶನಿವಾರ ನಡೆದ ಚುನಾವಣೆಯಲ್ಲಿ ವೇದಮೂರ್ತಿ 56 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ಡಿ.ಶಂಕರ್ 35 ಮತ ಪಡೆದಿದ್ದಾರೆ. ವೇದಮೂರ್ತಿ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಳವಳ್ಳಿ ಸರಗೂರು ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎನ್. ಕೃಷ್ಣಮೂರ್ತಿ (ಕಿರಣ್) ಹಾಗೂ ಇಲಾಖೆಯ ಅಧಿಕಾರಿ, ಸಿಬ್ಬಂದಿ ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ