ಕೇಳಿ ಅಧಿಕಾರ ಪಡೆಯುವ ಜಾಯಮಾನ ನನ್ನದಲ್ಲ

KannadaprabhaNewsNetwork |  
Published : May 31, 2026, 03:15 AM IST
ಕಾಗಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕಾಗವಾಡ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಉತ್ತರ ಕರ್ನಾಟಕದ ಹಿರಿಯ ನಾಯಕ ಹಾಗೂ ಶಾಸಕ ರಾಜು ಕಾಗೆ ಸಚಿವ ಸ್ಥಾನದ ಕುರಿತು ತಮ್ಮ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾಗವಾಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಉತ್ತರ ಕರ್ನಾಟಕದ ಹಿರಿಯ ನಾಯಕ ಹಾಗೂ ಶಾಸಕ ರಾಜು ಕಾಗೆ ಸಚಿವ ಸ್ಥಾನದ ಕುರಿತು ತಮ್ಮ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಉಗಾರ್ ಪಟ್ಟಣದ ಸ್ವ ಗೃಹದಲ್ಲಿ ಮಾತನಾಡಿದ ಅವರು, ಅಧಿಕಾರ ಕೇಳಿ ಪಡೆಯುವ ಜಾಯಮಾನ ನನ್ನದಲ್ಲ. ನನ್ನ ಯೋಗ್ಯತೆ, ರಾಜಕೀಯ ಅನುಭವ ಪರಿಗಣಿಸಿ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ನನಗೆ ಸಚಿವ ಸ್ಥಾನದ ಅಭಿಲಾಷೆ ಇದೆ, ಆದರೆ ದುರಾಸೆ ಇಲ್ಲ ಎಂದು ಹೇಳಿದರು.

ಸದ್ಯ ಆರೋಗ್ಯ ಸರಿಯಿಲ್ಲದ ಕಾರಣ ಸಿಎಲ್ಪಿ ಸಭೆಗೆ ಗೈರಾಗಿದ್ದೇನೆ, ಹೊತು ಅಸಮಾಧಾನದಿಂದಲ್ಲ. ಕೆಲವು ಮಾದ್ಯಮಗಳಲ್ಲಿ ಸಿಎಲ್ಪಿ ಸಭೆಗೆ ಕಾಗವಾಡ ಶಾಸಕ ರಾಜು ಕಾಗೆ ಗೈರು, ಅಸಮಾಧನ ಎಂದು ಮಾಧ್ಯಮಗಳು ಬಿಂಬಿಸುತ್ತಿವೆ. ಯಾವ ಅಸಮಾಧಾನವೈ ಇಲ್ಲ. ತಾವು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸಚಿವ ಸ್ಥಾನದ ಲಾಬಿ ನಡೆಯುತ್ತಿರುವ ಸಂದರ್ಭದಲ್ಲೂ ತಾವು ಕ್ಷೇತ್ರದಲ್ಲೇ ಸಕ್ರಿಯವಾಗಿರುವುದಾಗಿ ಹೇಳಿದ ರಾಜು ಕಾಗೆ, ನಾನು ಒನ್ ಮ್ಯಾನ್ ಶೋ, ಟೈಗರ್ ಸಿಂಗಲ್ ಇರುತ್ತೇನೆ. ಅಧಿಕಾರಕ್ಕಾಗಿ ಯಾರ ಬೆಂಬಲದ ಅಗತ್ಯವಿಲ್ಲ. ಯಾವುದೇ ಹುದ್ದೆ ಕೊಟ್ಟರೂ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ. ಉತ್ತರ ಕರ್ನಾಟಕದ ಹಿರಿಯ ನಾಯಕತ್ವಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಂಪುಟ ಪುನರ್‌ರಚನೆಯಲ್ಲಿ ರಾಜು ಕಾಗೆಗೆ ಅವಕಾಶ ಸಿಗಬಹುದೇ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾತಂತ್ರ್ಯ ನಂತರ ಇಂಡಿ ಮತಕ್ಷೇತ್ರಕ್ಕೆ ಸಚಿವಗಿರಿ?
ಆರ್.ಬಿ. ತಿಮ್ಮಾಪೂರಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ