ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಸರ್ಕಾರ ರಾಜ್ಯದಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ ಪ್ರದೇಶದಲ್ಲಿ ಈ ವಿವಿ ಸ್ಥಾಪನೆಯಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿರುವ ಸುಸಜ್ಜಿತ ವ್ಯವಸ್ಥೆ ಹೊಂದಿರುವ ವಿವಿಯನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ.ಈ ಹಿಂದೆ ಸರ್ಕಾರ ಎಲ್ಲಾ ವಿಶ್ವವಿದ್ಯಾಲಯಗಳಿಗೆ 2 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಅನುದಾನವನ್ನು ನೀಡದೆ ವಿವಿಯನ್ನು ಮುಚ್ಚುವ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಆತಂಕ ಹೆಚ್ಚಾಗಲಿದೆ ಎಂದರು.
ಹಿಂದೆ ಧಾರ್ಮಿಕ ವಿಚಾರಕ್ಕೆ, ಅಕ್ಷರಭ್ಯಾಸಕ್ಕೆ ಪ್ರಾಮುಖ್ಯತೆ ಪಡೆದುಕೊಂಡಿತ್ತು. ಆದರೆ ಇಂದು ಸಂಶೋಧನೆಯಲ್ಲಿ ವಿಶ್ವವಿದ್ಯಾಲಯಗಳು ಮುಂಚುಣಿಯಲ್ಲಿದೆ. ಆದ್ದರಿಂದ ಸರ್ಕಾರದಿಂದ ವಿವಿಧ ಧನಸಹಾಯ, ಪ್ರೋತ್ಸಾಹ ದೊರೆತಲ್ಲಿ ಮಾತ್ರ ಸಂಶೋಧನೆ ನಡೆಸಲು ಸಾಧ್ಯ. ಆ ನಿಟ್ಟಿನಲ್ಲಿ ಕೊಡಗು ವಿವಿ ಉಳಿವಿಗೆ ಎಲ್ಲರೂ ಒಮ್ಮನಸ್ಸಿನಿಂದ ಹೋರಾಟ ಮಾಡಿ ಸರ್ಕಾರವನ್ನು ಎಚ್ಚರಿಸಬೇಕು ಎಂದು ಹೇಳಿದರು.
ಕೊಡಗು ವಿಶ್ವವಿದ್ಯಾಲಯದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೃಷ್ಣೆ ಗೌಡ ಮಾತನಾಡಿ, ಜಿಲ್ಲೆಗೊಂದು ವಿಶ್ವವಿದ್ಯಾಲಯ ಆಗಬೇಕು ಎಂಬ ನಿಟ್ಟಿನಲ್ಲಿ ಕೊಡಗಿನಲ್ಲಿ ಕೊಡಗು ವಿಶ್ವವಿದ್ಯಾಲಯ ಆರಂಭಗೊಂಡಿದ್ದು, 10 ಶಿಕ್ಷಣ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಉತ್ತಮ ಸಂಸ್ಥೆಯಾಗಿ ನಡೆಯುತ್ತಿದೆ. ಆದರೆ ಕೆಲವರು ಉಪಮುಖ್ಯಮಂತ್ರಿಗಳನ್ನು ಪದೇ ಪದೇ ಭೇಟಿ ಮಾಡುವ ಮೂಲಕ ಸರ್ಕಾರಕ್ಕೆ ತಪ್ಪು ಮಾಹಿತಿಗಳನ್ನು ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪನ್ಯಾಸಕರ ಕೊರತೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಮಾತನಾಡಿ, ಈಗಾಗಲೇ ಸಂಪುಟದ ಉಪಸಮಿತಿಗಳನ್ನು ರಚಿಸಿ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಹೇಳಲಾಗಿದೆ. ಆದರೆ ಈಗಾಗಲೇ ಜಿಲ್ಲೆಯಲ್ಲಿರುವ ಕಾರ್ಯಪ್ಪ ಕಾಲೇಜಿನಲ್ಲಿ ಕೆಲವು ವಿಷಯವಾರು ಕೋರ್ಸುಗಳು ಮುಚ್ಚಿಹೋಗಿದೆ. ಹೀಗಿರುವಾಗ ಇಂದಿನ ಆಧುನಿಕರಣದ ವ್ಯವಸ್ಥೆಗೆ ತಕ್ಕಂತೆ ಉಪನ್ಯಾಸಕರ ಕೊರತೆ ಇದೆ. ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕ್ಷೀಣತೆ, ಮಾರುಕಟ್ಟೆಯಲ್ಲಿರುವ ಮೌಲ್ಯಧಾರಿತ ಶಿಕ್ಷಣಕ್ಕೆ ಒತ್ತು, ಉದ್ಯೋಗಾವಕಾಶಗಳು, ಕೈಗೆಟುವ ಶಿಕ್ಷಣ ನೀಡವಂತಾಗಬೇಕು. ಅಲ್ಲದೇ ಕೊಡಗು ವಿವಿ ಇದೀಗ ಪ್ರಾರಂಭವಾಗಿದ್ದರಿಂದ ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ಅವಕಾಶ ಪಡೆಯಲು ಕಷ್ಟವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಒಂದಷ್ಟು ಕಾಲವಕಾಶ ಅಗತ್ಯ ಇದೆ ಎಂದರು.
ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್ ಮಾತನಾಡಿ, ಯಾವುದೇ ಕಾರಣಕ್ಕೂ ಕೊಡಗಿನ ವಿವಿ ಮುಚ್ಚದಂತೆ ಮುಚ್ಚಲು ಬಿಡುವುದಿಲ್ಲ. ಯುವ ಜನರ ಓದಿಗೆ ಅಗತ್ಯವಾದ ವಿವಿ ಕಳೆದುಕೊಂಡರೆ ಭವಿಷ್ಯದಲ್ಲಿ ವಿದ್ಯಾರ್ಥಿಗಳು ದೂರದ ಊರಿಗೆ ತೆರಳಬೇಕಾಗತ್ತದೆ. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಇದರಿಂದ ಹೆಚ್ಚಿನ ಹೊರೆಯಾಗಲಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡ ಕೊಡಗಿನ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಬಗ್ಗೆ ಹೋರಾಟ ನಡೆಯಲಿದೆ ಎಂದು ತಿಳಿಸಿದರು.
ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಮತ್ತು ಕೆ.ಎಸ್.ಮೂರ್ತಿ,