ವಿನಾ ಕಾರಣ ಸಾರ್ವಜನಿಕರನ್ನು ಅಲೆಸುವುದು ಸರಿಯಲ್ಲ: ಶಾಸಕ ಜಿ.ಎಚ್. ಶ್ರೀನಿವಾಸ್

KannadaprabhaNewsNetwork |  
Published : Apr 19, 2026, 01:15 AM IST
ಕುಡ್ಲೂರು ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ  | Kannada Prabha

ಸಾರಾಂಶ

ತರೀಕೆರೆ ಸ್ಥಳೀಯವಾಗಿ ಬಗೆಹರಿಸಬಹುದಾದ ಹತ್ತಾರು ಸಮಸ್ಯೆಗಳನ್ನು ವಿನಾ ಕಾರಣ ಮೇಲಾಧಿಕಾರಿಗಳಿಗೆ ಪತ್ರ ಬರೆದು ಸಾರ್ವಜನಿಕರನ್ನು ಅಲೆದಾಡುವಂತೆ ಮಾಡುವುದು ಸರಿಯಲ್ಲ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದರು.

ಕುಡ್ಲೂರು ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಸ್ಥಳೀಯವಾಗಿ ಬಗೆಹರಿಸಬಹುದಾದ ಹತ್ತಾರು ಸಮಸ್ಯೆಗಳನ್ನು ವಿನಾ ಕಾರಣ ಮೇಲಾಧಿಕಾರಿಗಳಿಗೆ ಪತ್ರ ಬರೆದು ಸಾರ್ವಜನಿಕರನ್ನು ಅಲೆದಾಡುವಂತೆ ಮಾಡುವುದು ಸರಿಯಲ್ಲ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಅಧಿಕಾರಿಗಳಿಗೆ

ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಕರ್ನಾಟಕ ಸರ್ಕಾರ, ಜಿಪಂ, ಚಿಕ್ಕಮಗಳೂರು ತಾಪಂ ತರೀಕೆರೆ ಹಾಗೂ ಗ್ರಾಮ ಪಂಚಾಯಿತಿ ಕುಡ್ಲೂರುಯಿಂದ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ನೋಂದಾಯಿತ ಅರ್ಜಿಗಳನ್ನು ಪರಿಶೀಲಿಸಿ ಮಾತನಾಡಿದರು.

ಸ್ಥಳೀಯ ಸಮಸ್ಯೆಗಳಾದ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ನಿವೇಶನ ಮತ್ತು ಮನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಾಗಿ ಸ್ಥಳೀಯವಾಗಿ ಇತ್ಯರ್ಥವಾಗುತ್ತವೆ. ಕಂದಾಯ ಇಲಾಖೆ ವ್ಯಾಪ್ತಿಯ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳು, ಜಮೀನಿನ ಪೌತಿ ಖಾತೆ ಮೊದಲಾದ ಸಮಸ್ಯೆಗಳಿಗೆ ಕೆಲವು ಸಣ್ಣ ಪುಟ್ಟ ತಾಂತ್ರಿಕ ತೊಂದರೆಗಳಿದ್ದರೂ ಸ್ಥಳೀಯರ ಅಭಿಪ್ರಾಯಗಳನ್ನು ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇಂತಹ ಸಮಸ್ಯೆಗಳಿಗೆ ತಾಲೂಕು, ಜಿಲ್ಲೆ ಮತ್ತು ಶಾಸಕರ ಕಚೇರಿಗೆ ಅಲೆದಾಡಿಸುವುದು ಸರಿಯಲ್ಲ ಎಂದು ಹೇಳಿದರು.

ನಮ್ಮ ಕ್ಷೇತ್ರದಲ್ಲಿ ಹಲವಾರು ಗ್ರಾಮಗಳಿಲ್ಲಿ ಹೈಮಾಸ್ಕ ಲೈಟ್‌ ಗಳನ್ನು ಅಳವಡಿಸಲಾಗಿದೆ. ಆದರೆ ಅವುಗಳಲ್ಲಿ ಹೆಚ್ಚಿನವು ಕೆಟ್ಟು ನಿಂತಿವೆ. ಕಾರಣ ಅವುಗಳ ವಿದ್ಯುತ್ ಬಿಲ್‌ ಭರಿಸಲು ಹಾಗೂ ಅವುಗಳು ಕೆಟ್ಟು ಹೋದ ಸಂದರ್ಭದಲ್ಲಿ ದುರಸ್ಥಿ ಮಾಡಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅನುದಾನದ ಕೊರತೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಯಾವುದೇ ಗ್ರಾಮಗಳಿಗೆ ಹೈಮಾಸ್ಕ ಲೈಟ್ ಗಳನ್ನು ಹಾಕಿಸುವುದಿಲ್ಲ ಎಂದು ಹೇಳಿದರು. ಕುಡ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ಹಲವಾರು ದಿನಗಳಿಂದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ನಿಗದಿಗೆ ಬೇಡಿಕೆ ಇಟ್ಟರು. ಇನ್ನು ಸ್ಥಳ ನಿಗದಿಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ಇದಕ್ಕೆ ಕಂದಾಯ ಇಲಾಖೆ ನೌಕರರು ಇದೇ ಪಂಚಾಯಿತಿ ವ್ಯಾಪ್ತಿಯ ಸಿದ್ದನಹಳ್ಳಿ ಗ್ರಾಮದ ಸರ್ವೇ ನಂ. 11ರ ಸರ್ಕಾರಿ ಜಾಗದಲ್ಲಿ ಈಗಾಗಲೇ ಜಿ.ಟಿಎಸ್. ಮಾಡ ಲಾಗಿದ್ದು, ಸ್ಕೆಚ್ಚು ನೀಡಬೇಕಾಗಿದೆ ಎಂದರು. ಬೆಳೆ ಸಮೀಕ್ಷೆಯಲ್ಲಿ ಸಾಕಷ್ಟು ಲೋಪ ಉಂಟಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸರಿಪಡಿಸಬೇಕು ಎಂದು ಸೂಚಿಸಿ, ಕುಡ್ಲೂರು ಗ್ರಾಮದಿಂದ ನಾಗವಂಗಲ ಗ್ರಾಮಕ್ಕೆ ಹಾದುಹೋಗುವ ರಸ್ತೆ ಅಭಿವೃದ್ಧಿಗೆ ₹1.25 ಕೋಟಿ ಅನುದಾನ ಬಿಡುಗಡೆ ಯಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಪಂಚಾಯಿ ಇಓ ದೇವೇಂದ್ರಪ್ಪ ಈ ಸಭೆಗೆ ಸಾಕಷ್ಟು ಜನರು ಭಾಗವಹಿಸಿದ್ದು, ಸಭೆಯಲ್ಲಿ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದಾರೆ. ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳು ಸರ್ಕಾರದ ವಿಶೇಷ ತಂತ್ರಜ್ಞಾನದಿಂದ ಆನ್ಲೈನ್ ನೋಂದಣಿಯಾಗಲಿದ್ದು, ಇದರಿಂದ ಸಾರ್ವಜನಿಕರ ಸಮಸ್ಯೆ ಗಳಿಗೆ ಪರಿಹಾರ ದೊರಕುತ್ತವೆ. ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಸಭೆಯಲ್ಲಿ ಬಗರ್ ಹುಕುಂ ಸಮಿತಿ ಸದಸ್ಯ ಶಿವಕುಮಾರ್, ಜಿಪಂ ಮಾಜಿ ಸದಸ್ಯೆ ರಾಧಮ್ಮ, ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ವಿವಿಧ ಇಲಾಖಾಧಿಕಾರಿಗಳು, ಗ್ರಾಪಂ ಕಾರ್ಯದರ್ಶಿ ಹರ್ಷಿತಾ ಭಾಗವಹಿಸಿದ್ದರು. 18ಕೆಟಿಆರ್.ಕೆ,.4ಃ ತರೀಕೆರೆ ಸಮೀಪದ ಕುಡ್ಲೂರು ಗ್ರಾಮದಲ್ಲಿ ಚಿಕ್ಕಮಗಳೂರು ಜಿಪಂ, ತರೀಕೆರೆ ತಾಪಂ ಹಾಗೂ ಕುಡ್ಲೂರು ಗ್ರಾಪಂನಿಂದ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರ ಅವಕಾಶ ಕಸಿದುಕೊಂಡ ಕಾಂಗ್ರೆಸ್
ರಸ್ತೆ ಅಪಘಾತಗಳ ಸ್ಥಳ ಗುರುತಿಸಲು ಸೂಚನೆ