ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸೂರಿ ಶ್ರೀನಿವಾಸ್

KannadaprabhaNewsNetwork |  
Published : Nov 26, 2024, 12:49 AM IST
ತರೀಕೆರೆಯಲ್ಲಿ ರತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ ಕಾರ್ಯಕ್ರಮ | Kannada Prabha

ಸಾರಾಂಶ

ತರೀಕೆರೆ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ಹೇಳಿದರು.ಜಿಲ್ಲಾ ಹಾಗೂ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸ. ಬಾಲಕರ ಪ.ಪೂ. ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ 50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತರೀಕೆರೆಯಲ್ಲಿ ದತ್ತಿ ಉಪನ್ಯಾಸ। ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್

ಹೇಳಿದರು.ಜಿಲ್ಲಾ ಹಾಗೂ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸ. ಬಾಲಕರ ಪ.ಪೂ. ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ 50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದತ್ತಿ ನಿಧಿ ದಾನಿ ಎಚ್. ಬಿ. ಶ್ರೀಕಂಠಮೂರ್ತಿ ಅವರ ಸಾಹಿತ್ಯ ಕಳಕಳಿ ಶ್ಲಾಘಿಸಿದ ಇವರು ಏಕಕಾಲದಲ್ಲಿ ಆರು ದತ್ತಿ ನಿಧಿ ನೀಡಿದ್ದಾರೆ ಎಂದು ತಿಳಿಸಿದರು. ಯುವಕ, ಯುವತಿಯರಿಗೆ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರೀಯತೆ ಸೌಹಾರ್ದತೆ ಮತ್ತು ರಾಷ್ಟ್ರೀಯ ಚಿಂತನೆ ಕುರಿತ ಉಪನ್ಯಾಸದ ಮೂಲಕ ಮ್ಮ ನೆಲದ ಮಕ್ಕಳಿಗೆ ತಿಳಿಸುವ ಕಾರ್ಯಕ್ರಮ ಮಾಡಲಿ ಎಂಬ ಉದ್ದೇಶದಿಂದ ಈ ದತ್ತಿ ನಿಧಿಯನ್ನು ನಾನು ಜಿಲ್ಲಾಧ್ಯಕ್ಷನಾದ ತಕ್ಷಣ ಮಾಡಿದಂತಹ ಕೆಲಸ. ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಗೊಂಡೇನಹಳ್ಳಿ ರುದ್ರಪ್ಪ ಚನ್ನಬಸಪ್ಪ (ಗೊರುಚ) ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಮಾತನಾಡಿ, ಕಸಾಪ ರಾಜ್ಯಾದ್ಯಂತ ಯಾವ ಯಾವ ಜಿಲ್ಲಾ ಮತ್ತು ತಾಲೂಕು ಮಟ್ಟದ ದತ್ತಿ ಉಪನ್ಯಾಸಕ್ಕೆ ಈಗಾಗಲೇ ನೋಂದಾಯಿಸಿರುವವರ ಹೆಸರುಗಳಲ್ಲಿ ದತ್ತಿ ದಾನಿಗಳು ಸೂಚಿಸಿರುವ ವಿಷಯಗಳ ಕುರಿತು ಯುವ ಜನರಿಗಾಗಿ ಉಪನ್ಯಾಸ ಏರ್ಪಡಿಸುವ ಕೆಲಸವನ್ನು ಸಾಹಿತ್ಯ ಪರಿಷತ್ತು ಮಾಡುತ್ತಾ ಬಂದಿರುವ ಬಗ್ಗೆ ತಿಳಿಸಿದರು. ರಚನಾ ಶ್ರೀನಿವಾಸ್ ಮಾತನಾಡಿ, ಕನ್ನಡದ ಅಭಿಮಾನಿಗಳಾಗಿ ಮುನ್ನಡೆಯೋಣ, ಗಂಭೀರ ಅಧ್ಯಯನ ಚಿಂತನೆ, ಶಿಸ್ತು, ಸೌಮ್ಯತೆ ವಿದ್ಯಾರ್ಥಿಗಳಿಗೆ ಅಗತ್ಯ. ಜನಪದ ಹಾಗೂ ಸಾಂಸ್ಕೃತಿಕವಾಗಿ ಕೆಲಸ ಮಾಡುತ್ತಾ ಬಂದಿರುವ ನಮ್ಮ ಮುಗಳಿ ಲಕ್ಷ್ಮಿದೇವಮ್ಮ ಅವರಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ತಾಲ್ಲೂಕಿಗೆ ಹೆಮ್ಮೆಯ ವಿಷಯ ಎಂದು ತಿಳಿಸಿದರು.ಉಪನ್ಯಾಸಕ ಎಚ್. ಡಿ. ಬಸವರಾಜ್ ನಾಯ್ಕ ವಿದ್ಯಾರ್ಥಿಗಳಿಗೆ ರಾಷ್ಟ್ರೀಯತೆ ಮತ್ತು ಭಾವೈಕ್ಯತೆ ರಸಪ್ರಶ್ನೆ ಆಯೋಜಿಸುವ ಮೂಲಕ ಪ್ರಧಾನ ಉಪನ್ಯಾಸ ನೀಡಿದರು. ವಿವಿಧತೆಯಲ್ಲಿ ಏಕತೆ ಸಾಧಿಸುವುದೇ ರಾಷ್ಟ್ರೀಯತೆ, ರಾಷ್ಟ್ರೀಯ ಭಾವೈಕ್ಯತೆಗೆ ಗಡಿ ಕಲಹಗಳು ನೀರಿನ ಕಲಹಗಳು ಧಾರ್ಮಿಕ ಸಂಕುಚಿತತೆ, ಭಾಷಾ ಸಂಘರ್ಷಗಳು ಅಡ್ಡಿಯಾಗಿವೆ. ಈಗಿನ ತರುಣರು ಇದರ ಗಂಭೀರತೆ ಅರಿತು ರಾಷ್ಟ್ರೀಯ ಭಾವೈಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಪ್ರಭಾರಿ ಪ್ರಾಂಶುಪಾಲ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಮಾಜಿ ಅಧ್ಯಕ್ಷ ಟಿ.ವಿ.ಶಿವಶಂಕರಪ್ಪ, ದತ್ತಿ ದಾನಿಗಳಾದ ಎಚ್.ಬಿ.ಶ್ರೀಕಂಠಮೂರ್ತಿ, ಕನ್ನಡ ಶ್ರೀ ಬಿ.ಎಸ್.ಭಗವಾನ್, ಡಾ.ನಾಗಜ್ಯೋತಿ, ತಾಲೂಕು ಕಸಾಪ ಕೋಶಾಧ್ಯಕ್ಷ ಜಯಸ್ವಾಮಿ, ದಾದಾಪೀರ್, ಕಸಾಪ ಮಹಿಳಾ ಘಟಕ ಅಧ್ಯಕ್ಷೆ ಸುನೀತ ಕಿರಣ್, ಪ್ರೌಢಶಾಲಾ ವಿಭಾಗದ ಶಿಕ್ಷಕರು, ಎಲ್ಲಾ ಉಪನ್ಯಾಸಕರು ಭಾಗವಹಿಸಿದ್ದರು. 25ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ 50 ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ಉದ್ಘಾಟಿಸಿದರು. ಪುರಸಭಾ ಮಾಜಿ ಅಧ್ಯಕ್ಷ ಟಿ.ವಿ.ಶಿವಶಂಕರಪ್ಪ, ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ರಚನ ಶ್ರೀನಿವಾಸ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!