ಜನರಿಗೆ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ: ಶಾಸಕ ದರ್ಶನ್‌ ಧ್ರುವನಾರಾಯಣ್‌

KannadaprabhaNewsNetwork |  
Published : Jul 30, 2025, 12:45 AM IST
51 | Kannada Prabha

ಸಾರಾಂಶ

ನಾನು ಶಾಸಕನಾಗಿ ಆಯ್ಕೆಯಾದ ನಂತರ ಕಳೆದ ಎರಡು ವರ್ಷಗಳಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಸುಮಾರು 450 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ತಾಲೂಕಿನ ಹೊರಳವಾಡಿ, ಬಸವೇಶ್ವರನಗರ, ಗೀಕಹಳ್ಳಿ, ಮಹದೇವನಗರದಲ್ಲಿ 1.15 ಕೋಟಿ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಾನು ಶಾಸಕನಾಗಿ ಆಯ್ಕೆಯಾದ ನಂತರ ಕಳೆದ ಎರಡು ವರ್ಷಗಳಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಸುಮಾರು 450 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಮಹೇಶ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮುಖಂಡರಾದ ದೊರೆಸ್ವಾಮಿನಾಯಕ, ಎನ್.ಎಂ. ಮಂಜುನಾಥ್, ವಿಜಯ್ ಕುಮಾರ್, ಶ್ರೀನಿವಾಸ ಮೂರ್ತಿ, ಕುಳ್ಳಯ್ಯ, ಶಿವಮೂರ್ತಿ, ಮುದ್ದುಮಾದಶೆಟ್ಟಿ, ರಂಗದಾಸ್, ಜಯಶೀಲ, ಜಯಮಾಲಾ ಬೀರೇಗೌಡ, ಶ್ರೀಕಂಠ, ಬಸವಣ್ಣ, ಸೋಮು, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಮಹೇಶ್, ಮಂಜು, ರವಿ, ಜಿ.ಎ. ವೆಂಕಟೇಶ್, ಶ್ರೀಕಾಂತ್, ಗ್ರಾಪಂ ಸದಸ್ಯರಾದ ನವೀನ್, ಶಿವಕುಮಾರ್, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಮಹೇಂದ್ರ, ಕೆಆರ್.ಐಡಿಎಲ್ ಸಂಸ್ಥೆಯ ಎಇ ಶರಣ್, ಪುರುಷೋತ್ತಮ್ ಇದ್ದರು.ರಾಜಕೀಯ ಪ್ರೌಢಿಮೆ ಮೆರೆದ ಶಾಸಕ ದರ್ಶನ್‌

ಕನ್ನಡಪ್ರಭ ವಾರ್ತೆ ನಂಜನಗೂಡು

ನಂಜನಗೂಡಿನ ರೇಲ್ವೆ ಮೇಲ್ಸೇತುವೆಗೆ ವಿ.ಶ್ರೀನಿವಾಸ ಪ್ರಸಾದ್ ಅವರ ಹೆಸರನ್ನು ನಾಮಕರಣಗೊಳಿಸುವ ನಿರ್ಧಾರವನ್ನು ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದು ಶಾಸಕ ದರ್ಶನ್ ಧ್ರುವನಾರಾಯಣ ಅವರು ರಾಜಕೀಯ ಪ್ರೌಢಿಮೆ ಮೆರೆದಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಅಭಿಮಾನಿ ಬಳಗದ ಸಂಚಾಲಕ ಭರತ್ ರಾಮಸ್ವಾಮಿ ಹೇಳಿದರು.

ವಿ.ಶ್ರೀನಿವಾಸ ಪ್ರಸಾದ್ ಅವರು 50 ವರ್ಷ ರಾಜಕೀಯ ಇತಿಹಾಸದಲ್ಲಿ ಸಮಾಜಕ್ಕೆ ಮಾದರಿ ರಾಜಕಾರಣಿಯಾಗಿ, ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ನಂಜನಗೂಡಿನಲ್ಲಿ ನಿರ್ಮಾಣವಾಗಿರುವ ರೇಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸ ಪ್ರಸಾದ್ ಹೆಸರಿಡಬೇಕೆಂದು ಅವರ ಅಭಿಮಾನಿಗಳು ಒತ್ತಾಯಿಸಿದರೆ, ಆರ್.ಧ್ರುವನಾರಾಯಣ್ ಅವರ ಹೆಸರಿಡಬೇಕೆಂಬ ಅವರ ಅಭಿಮಾನಿಗಳು ಒತ್ತಾಯಿಸಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ವಿ.ಶ್ರೀನಿವಾಸಪ್ರಸಾದ್ ಮತ್ತು ಆರ್‌. ಧ್ರುವನಾರಾಯಣ ಇಬ್ಬರೂ ಕೂಡ ರಾಜಕೀಯ ನಕ್ಷತ್ರಗಳಾಗಿದ್ದು, ಅವರನ್ನು ಬೇರೆ ಬೇರೆಯಾಗಿ ನೋಡುವುದು ಸರಿಯಾದ ಬೆಳವಣಿಗೆಯಲ್ಲ, ಈ ನಿಟ್ಟಿನಲ್ಲಿ ಅಭಿಮಾನಿಗಳ ಗೊಂದಲಗಳಿಗೆ ತೆರೆ ಎಳೆಯುವ ಸಲುವಾಗಿ ಹಾಗೂ ವಿ. ಶ್ರೀನಿವಾಸಪ್ರಸಾದ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಆಸಕ್ತಿ ವಹಿಸಿ ಪ್ರತಿಮಾ ಪ್ರಸಾದ್ ಅವರ ನೇತೃತ್ವದಲ್ಲಿ ಇಬ್ಬರು ನಾಯಕರ ಅಭಿಮಾನಿಗಳ ಸರಣಿ ಸಭೆಗಳನ್ನು ನಡೆಸಿ ಮುಕ್ತ ಮನಸ್ಸಿನಿಂದ ರೇಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸ ಪ್ರಸಾದ್ ಅವರ ಹೆಸರು ನಾಮಕರಣಗೊಳಿಸುವ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹ ಬೆಳವಣಿಗೆ, ಅದರಲ್ಲೂ ಮುಖ್ಯವಾಗಿ ಕಾಯಕಯೋಗಿ ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ರೇಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸಪ್ರಸಾದ್ ಅವರ ಹೆಸರನ್ನು ನಾಮಕರಣ ಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಶ್ರೀನಿವಾಸ ಪ್ರಸಾದ್ ಅವರಿಗೆ ವಿಶೇಷ ಗೌರವ ಸಲ್ಲಿಸಿರುವುದಕ್ಕೆ ವಿ. ಶ್ರೀನಿವಾಸ ಪ್ರಸಾದ್ ಅಭಿಮಾನಿ ಬಳಗ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತದೆ ಹಾಗೂ ಅವರ ಕಾರ್ಯಕ್ರಮಗಳಲ್ಲಿ ಪ್ರತಿಮಪ್ರಸಾದ್ ಅವರ ನೇತೃತ್ವದಲ್ಲಿ ಭಾಗವಹಿಸುತ್ತದೆ ಎಂದರು.

ಸಿ.ಜಿ. ಶಿವಕುಮಾರ್, ನಂಜುಂಡಸ್ವಾಮಿ, ಶಾಂತರಾಜು, ಸುರೇಶ್, ಶಿವಸ್ವಾಮಿ, ವೆಂಕಟರಾಜು ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ