ಸ್ವಾತಂತ್ರ್ಯಕ್ಕಾಗಿ ದುಡಿದವರ ಸ್ಮರಣೆ ನಮ್ಮ ಕರ್ತವ್ಯ

KannadaprabhaNewsNetwork |  
Published : Aug 16, 2025, 02:01 AM IST
ಸವದತ್ತಿಯ ಎಸ್.ಕೆ.ಹೈಸ್ಕೂಲ ಮೈದಾನದಲ್ಲಿ ೭೯ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಹಮ್ಮಿಕೊಂಡ ಸಮಾರಂಭದಲ್ಲಿ ಶಾಸಕ ವಿಶ್ವಾಸ ವೈದ್ಯ ಮಾತನಾಡಿದರು. | Kannada Prabha

ಸಾರಾಂಶ

ರಾಷ್ಟ್ರೀಯ ಹಬ್ಬಗಳನ್ನು ನಾವು ವಿಶೇಷವಾಗಿ ಆಚರಿಸುವ ಮನೋಭಾವನೆ ಹೊಂದಬೇಕಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನವನ್ನು ಮಾಡಿದ ಮಹನೀಯರ ಸ್ಮರಣೆಯನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ರಾಷ್ಟ್ರೀಯ ಹಬ್ಬಗಳನ್ನು ನಾವು ವಿಶೇಷವಾಗಿ ಆಚರಿಸುವ ಮನೋಭಾವನೆ ಹೊಂದಬೇಕಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನವನ್ನು ಮಾಡಿದ ಮಹನೀಯರ ಸ್ಮರಣೆಯನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಇಲ್ಲಿನ ಎಸ್.ಕೆ.ಹೈಸ್ಕೂಲ್‌ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ಅಭಿವೃದ್ಧಿಗೋಸ್ಕರ ನೂತನ ಯೋಜನೆಗಳನ್ನು ರೂಪಿಸಲಾಗಿದೆ. ಯಲ್ಲಮ್ಮಾ ದೇವಸ್ಥಾನವನ್ನು ಮಾದರಿ ದೇವಸ್ಥಾನವನ್ನಾಗಿಸುವ ಗುರಿ ಹೊಂದಲಾಗಿದೆ ಎಂದರು.ವೇದಿಕೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಮಿನಿ ವಿಧಾನಸೌಧದ ಮುಂದೆ ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಧ್ವಜಾರೋಹಣ ನೆರವೇರಿಸಿದರು. ಅಲ್ಲಿಂದ ಎಲ್ಲ ಶಾಲಾ ವಿದ್ಯಾರ್ಥಿಗಳು ಮತ್ತು ರೂಪಕಗಳು ಪ್ರಭಾತ ಪೇರಿ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸ್.ಕೆ.ಹೈಸ್ಕೂಲ್‌ ಮೈದಾನ ತಲುಪಿ ಅಲ್ಲಿ ಸಮಾರಂಭವಾಗಿ ಮಾರ್ಪಟ್ಟಿತು. ಸಮಾರಂಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನೆರವೇರಿದವು.ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚನ್ನವರ, ಉಪಾಧ್ಯಕ್ಷ ಕೌಶಲ್ಯ ಮೋಟೆಕರ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಉಪಾಧ್ಯಕ್ಷ ಮಾರುತಿ ಬಸಲಿಗುಂದಿ, ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ಪುರಸಭೆ ಸದಸ್ಯರಾದ ಶಿವಾನಂದ ಹೂಗಾರ, ಅರ್ಜುನ ಅಮ್ಮೋಜಿ, ಬಾಪುಸಾಬ ಚೂರಿಖಾನ, ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿನಮಠ, ಸಿಪಿಐ ಧರ್ಮಾಕರ ಧರ್ಮಟ್ಟಿ, ತಾಪಂ ಇಒ ಆನಂದ ಬಡಕುಂದ್ರಿ, ಎಚ್.ಎ.ಕದ್ರಾಪುರ, ಟಿಎಚ್‌ಒ ಡಾ.ಶ್ರೀಪಾದ ಸಬನೀಸ, ಅಶ್ವತ ವೈದ್ಯ, ಶಿವಾನಂದ ಪಟ್ಟಣಶೆಟ್ಟಿ, ಅಶೋಕ ಮುರಗೋಡ, ಕಿರಣ ಕುರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ಸ್ವಾಗತಿಸಿದರು. ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಸಂದೇಶ ವಾಚಿಸಿದರು. ಶಿವಾನಂದ ತಾರಿಹಾಳ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎನ್.ಬ್ಯಾಳಿ ವಂದಿಸಿದರು. ಸವದತ್ತಿ ಪಟ್ಟಣದಲ್ಲಿ ವಿಶೇಷ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ₹44 ಕೋಟಿಗಳಲ್ಲಿ ಒಳ ಚರಂಡಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪಟ್ಟಣದಲ್ಲಿ ಅಗಲೀಕರಣಗೊಳಿಸಿದ ರಸ್ತೆಯನ್ನು ₹16 ಕೋಟಿಗಳಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದ್ದು, ಪಟ್ಟಣದ ಸೌಂದರ್ಯೀಕರಣಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ.

-ವಿಶ್ವಾಸ ವೈದ್ಯ, ಶಾಸಕರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!