ಪರಿಸರದ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ: ಪಾಪಣ್ಣ

KannadaprabhaNewsNetwork |  
Published : Jun 08, 2025, 02:36 AM IST
6ಕೆೆಕೆಡಿಯು1. | Kannada Prabha

ಸಾರಾಂಶ

ಕಡೂರು, ಪರಿಸರದ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಪರಿಸರ ಸ್ವಚ್ಛತೆಗೆ ಮರಗಿಡಗಳನ್ನು ಬೆಳೆಸುವ ಜೊತೆಗೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು ಎಂದು ಕಡೂರು ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲ ಪಾಪಣ್ಣ ಹೇಳಿದರು.

ಗೆದ್ಲೆಹಳ್ಳಿ ಬಳಿ ಇರುವ ಪೊಲೀಸ್ ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ನಡಪ್ರಭ ವಾರ್ತೆ, ಕಡೂರು

ಪರಿಸರದ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಪರಿಸರ ಸ್ವಚ್ಛತೆಗೆ ಮರಗಿಡಗಳನ್ನು ಬೆಳೆಸುವ ಜೊತೆಗೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು ಎಂದು ಕಡೂರು ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲ ಪಾಪಣ್ಣ ಹೇಳಿದರು.

ಪಟ್ಟಣದ ಸಮೀಪದ ಗೆದ್ಲೆಹಳ್ಳಿ ಬಳಿ ಇರುವ ಪೊಲೀಸ್ ತರಬೇತಿ ಕೇಂದ್ರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಟ್ಟು ಮಾತನಾಡಿದರು. ಸುಮಾರು 30 ವರ್ಷಗಳ ಹಿಂದೆ ನ ನಮ್ಮ ಹಿರಿಯರು ಮನುಷ್ಯನ ಸ್ವಾರ್ಥದಿಂದ ಪರಿಸರ ಹಾಳಾಗಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಣ ಕೊಡಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದ್ದ ಮಾತು ಇಂದು ನಿಜವಾಗಿದೆ. ನೀರಿಗೆ ಹಣ ನೀಡಿ ದಾಹ ತೀರಿಸಿಕೊಳ್ಳುತ್ತಿದ್ದೇವೆ. ಅದೇ ರೀತಿ ನಮ್ಮ ಸುತ್ತಮುತ್ತಲಿನ ಪರಿಸರ ಕೂಡ ಮರಗಿಡಗಳ ನಾಶದಿಂದ ಅಸಮತೋಲನ ಉಂಟಾಗಿದೆ. ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸಿ ಉತ್ತಮ ಪರಿಸರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.ಚಿಕ್ಕಮಗಳೂರಿನ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸಿ. ಆನಂದ್ ಮಾತನಾಡಿ, ಉತ್ತಮ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಕೂಡ ಕೈಜೋಡಿಸಬೇಕು. ನಮ್ಮ ಬದುಕಿನ ಎಲ್ಲ ಕ್ಷೇತ್ರಗಳಲ್ಲೂ ಪ್ಲಾಸ್ಟಿಕ್ ಬಿಟ್ಟು ಬಿಡದಂತೆ ಹಾಸು ಹೊಕ್ಕಿದೆ. ಹಾಗಾಗಿ ಪ್ಲಾಸ್ಟಿಕ್ ಮುಕ್ತ ಮಾಡಿ ಉತ್ತಮ ಪರಿಸರ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲು ಮರಗಿಡಗಳನ್ನು ಬೆಳೆಸಬೇಕು. ಇದು ನಾಗರಿಕರಾದ ನಮ್ಮೆಲ್ಲರ ಜವಬ್ದಾರಿ ಎಂದು ಹೇಳಿದರು.ಸಾಮಾಜಿಕ ಅರಣ್ಯ ಇಲಾಖೆ ವಲಯಾರಣ್ಯಾಧಿಕಾರಿ ಎ.ಆರ್. ಪ್ರಮೀಳಾ ಮಾತನಾಡಿ, ಪರಿಸರ ಸಂರಕ್ಷಣೆಗೆ ಅರಣ್ಯ ಪ್ರದೇಶವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ನಿಟ್ಟಲ್ಲಿ ಇಲಾಖೆಯಿಂದ ರೈತರಿಗೆ ಎಲ್ಲ ರೀತಿ ಸಸಿಗಳನ್ನು ವಿತರಿಸುವ ಮೂಲಕ ಅರಣ್ಯೀಕರಣಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. ತಾಲೂಕಿನಲ್ಲಿ ಇರುವ ಸಸ್ಯ ಕ್ಷೇತ್ರಗಳಲ್ಲಿ ಬೆಳೆಸುತ್ತಿರುವ ಗಿಡಗಳನ್ನು ನೀಡಿ ಉತ್ತಮ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪೊಲೀಸ್ ತರಬೇತಿ ಕೇಂದ್ರದ ಉಪ ಪ್ರಾಂಶುಪಾಲ ಮಲ್ಲಿಕಾರ್ಜುನ ಮರೋಳ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆನಂದ್, ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿ ಚರಣ್ ಕುಮಾರ್, ತರಬೇತಿ ಕೇಂದ್ರದ ಎಡಿಎ ಸೋಫಿಯ ಇನಾಂದಾರ್, ವಲಯ ಅರಣ್ಯಾಧಿಕಾರಿ ಪ್ರಮೀಳಾ, ಸಂತೋಷ್, ಪ್ರಸನ್ನ ಮತ್ತಿತರರು ಇದ್ದರು.

6ಕೆಕೆಡಿಯು1.

ಕಡೂರು ಸಮೀಪದ ಗೆದ್ಲೆಹಳ್ಳಿ ಬಳಿ ಇರುವ ಪೊಲೀಸ್ ತರಬೇತಿ ಕೇಂದ್ರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?