ಮಕ್ಕಳನ್ನು ದೇಶದ ಸತ್ಪ್ರಜೆಗಳನ್ನಾಗಿಸುವುದು ನಮ್ಮ ಹೊಣೆ: ಮಧು ಜಿ.ಮಾದೇಗೌಡ

KannadaprabhaNewsNetwork |  
Published : Aug 13, 2025, 12:30 AM IST
12ಕೆಎಂಎನ್ ಡಿ18 | Kannada Prabha

ಸಾರಾಂಶ

ಅವಿಷ್ಕಾರಗಳತ್ತ ಶಾಲೆಯನ್ನು ಮತ್ತಷ್ಟು ಪ್ರಬಲಗೊಳಿಸಲಾಗುವುದು ಎಂದು ಹೇಳಿದರು.ನನ್ನ ತಂದೆ, ಮಾಜಿ ಸಂಸದ ಜಿ.ಮಾದೇಗೌಡರು ಹಳ್ಳಿಗಾಡಿನ ಮಕ್ಕಳ ಭವಿಷ್ಯಕ್ಕಾಗಿ ಸ್ಥಾಪಿಸಿದ ಭಾರತೀ ಶಿಕ್ಷಣ ಸಂಸ್ಥೆ ಶರವೇಗದಲ್ಲಿ ಬೆಳೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ .

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ, ದೇಶದ ಸತ್ಪ್ರಜೆಯಾಗಿ ರೂಪಿಸುವುದು ನಮ್ಮ ಹೊಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಭಾರತೀ ವಿದ್ಯಾ ಸಂಸ್ಥೆ ಅಧ್ಯಕ್ಷ ಮಧು ಜಿ.ಮಾದೇಗೌಡ ತಿಳಿಸಿದರು.

ಸಮೀಪದ ಹನುಮಂತನಗರದ ಭಾರತೀ ವಸತಿ ಶಾಲೆ ವತಿಯಿಂದ ಅಣ್ಣೂರು ಸಿದ್ದೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪೋಷಕರ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿ ಸನ್ಮಾರ್ಗಗಳನ್ನು ಕಲಿಸಲು ಪೋಷಕರು ಶ್ರಮ ವಹಿಸಬೇಕು ಎಂದರು.

ನಗರ ಪ್ರದೇಶದಲ್ಲಿ ಸಿಗುವ ಸೌಲಭ್ಯಗಳು ನಮ್ಮ ಗ್ರಾಮೀಣ ಶಾಲೆಯಲ್ಲೂ ಸಿಗುತ್ತಿವೆ. ಕಳೆದ ವರ್ಷಕ್ಕಿಂತ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಮುಂದಿನ ವರ್ಷಕ್ಕೂ ಹೆಚ್ಚಿನ ಬದಲಾವಣೆಗಳನ್ನು ಕಾಣಬಹುದು. ಹೊಸ ಅವಿಷ್ಕಾರಗಳತ್ತ ಶಾಲೆಯನ್ನು ಮತ್ತಷ್ಟು ಪ್ರಬಲಗೊಳಿಸಲಾಗುವುದು ಎಂದು ಹೇಳಿದರು.

ನನ್ನ ತಂದೆ, ಮಾಜಿ ಸಂಸದ ಜಿ.ಮಾದೇಗೌಡರು ಹಳ್ಳಿಗಾಡಿನ ಮಕ್ಕಳ ಭವಿಷ್ಯಕ್ಕಾಗಿ ಸ್ಥಾಪಿಸಿದ ಭಾರತೀ ಶಿಕ್ಷಣ ಸಂಸ್ಥೆ ಶರವೇಗದಲ್ಲಿ ಬೆಳೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದು ಹೇಳಿದರು.

ಭಾರತೀ ಎಜುಕೇಷನ್ ಟ್ರಸ್ಟ್‌ನ ಹನುಮಂತನಗರ ಕ್ಯಾಂಪಸ್ ಕಾರ್ಯದರ್ಶಿ ಗುರುದೇವರಹಳ್ಳಿ ಸಿದ್ದೇಗೌಡ ಮಾತನಾಡಿ, ಪೋಷಕರು ತಮ್ಮ ಎಲ್ಲ ಒತ್ತಡಗಳನ್ನು ಬದಿಗಿಟ್ಟು ಕ್ರೀಡಾಕೂಟದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಭಾರತೀ ವಸತಿ ಶಾಲೆ ಪ್ರಾಂಶುಪಾಲರಾದ ಪುಟ್ಟಸ್ವಾಮಿ ಮಾತನಾಡಿ, ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಉತ್ತಮ ಸ್ನೇಹ ಬಾಂಧವ್ಯ ಬೆಸೆಯಲು ಪೋಷಕರ ಕ್ರೀಡಾಕೂಟ ಆಯೋಜಿಸಿರುವುದಾಗಿ ತಿಳಿಸಿದರು.

ಪೋಷಕರಿಗೆ ಬಲೂನು ಒಡೆಯುವ ಆಟ, ಮ್ಯೂಸಿಕಲ್ ಚೇರ್, ಗುಂಡು ಎಸೆತ, ಬಕೆಟ್ ಇನ್ ದ ಬಾಲ್, ಚಮಚ-ನಿಂಬೆ ಹಣ್ಣಿನ ಓಟ, ಕಾಂಗರ್ ರೇಸ್, ಮತ್ತಿತರ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪೋಷಕರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಯಿತು.

ಇದೇ ವೇಳೆ ವಿದ್ಯಾರ್ಥಿಗಳ ಸಾವಯವ ಕೃಷಿ ಸಂತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಾಲೆಯ ಅಣ್ಣೂರು ಸಿದ್ದೇಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಸಂತೆಯಲ್ಲಿ ಗ್ರಾಹಕರು, ಪೋಷಕರು ಮತ್ತು ಸಂಸ್ಥೆ ಚೇರ್‍ಮನ್ ಮಧು ಜಿ ಮಾದೇಗೌಡ ವಿದ್ಯಾರ್ಥಿಗಳಿಂದ ಮೆಂತ್ಯ, ಕಿರ್ಕಿರೆ, ಕೊತ್ತಂಬರಿ ಸೊಪ್ಪುಗಳನ್ನು ನೇರವಾಗಿ ಖರೀದಿಸಿದರು.

ಕಾರ್ಯಕ್ರಮದಲ್ಲಿ ಆತ್ಮಲಿಂಗೇಶ್ವರಿ ಧರ್ಮದರ್ಶಿ ಮಂಡಳಿ ಸದಸ್ಯ ಕೆ.ಎಸ್.ಗೌಡ, ಉಪನ್ಯಾಸಕರಾದ ಪಿ.ವೃಷಭೇಂದ್ರ, ಎಂ. ಬಸವರಾಜು, ಶಿವಲಿಂಗೇಗೌಡ, ಬಿ.ಕೆ.ಯೋಗೇಂದ್ರ, ಎಚ್.ಎಂ.ಅರುಣ್, ಪಿ.ಜೆ.ದಿವ್ಯ ದರ್ಶಿನಿ, ಎನ್.ಎಂ.ಶೃತಿ, ಎಸ್.ಶಾಲಿನಿ ಸಿದ್ದರಾಜು, ಜೆ.ಪುಷ್ಪಲತಾ, ದೈಹಿಕ ಶಿಕ್ಷಕರಾದ ಪ್ರದೀಪ್, ಓದುಗೌಡ, ಅಧ್ಯಾಪಕರು ಮತ್ತು ಅಧ್ಯಾಪಕೇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''