ನಾಡಿನ ಸಂಸ್ಕೃತಿ ಉಳಿಸಿ, ಬೆಳೆಸುವುದು ನಮ್ಮ ಜವಾಬ್ದಾರಿ: ಡಾ.ವಿದ್ಯಾಕುಮಾರಿ

KannadaprabhaNewsNetwork |  
Published : Mar 22, 2025, 02:05 AM IST
21ಜನಪದ | Kannada Prabha

ಸಾರಾಂಶ

ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ. ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ ‘ಜನ ಜಲ್ಸಾ 2025’ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟಿದ್ದಾರೆ.ಶುಕ್ರವಾರ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ. ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ ‘ಜನ ಜಲ್ಸಾ 2025’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳಾಗಬೇಕು. ಸಂಸ್ಕೃತಿ ಉಳಿಸಿ ಬೆಳೆಸುವುದರಲ್ಲಿ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದ ಅವರು, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಅದನ್ನು ಗೌರವಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಒಂದು ಉತ್ತಮ ಗುರಿ ಹೊಂದಿರಬೇಕು. ಗುರಿ ಉತ್ತಮವಾಗಬೇಕಾದರೆ ಉತ್ತಮ ಸಂಸ್ಕೃತಿಯನ್ನು ಹೊಂದಿರಬೇಕು. ಗುರು ಹಿರಿಯನ್ನು ಗೌರವಿಸಿ ಅವರ ಮಾರ್ಗದರ್ಶನದಲ್ಲಿ ಮನ್ನಡೆದರೆ ಮಾತ್ರ ಜೀವನ ಸುಂದರವಾಗಲು ಸಾಧ್ಯ ಎಂದರು.ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಉಟ್ಟು ಜನಪದ ಉತ್ಸವದಲ್ಲಿ ಪಾಲ್ಗೊಂಡರು. ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿ ಕೊಠಡಿಗಳಲ್ಲಿ ಜನಪದ ವಸ್ತುಗಳನ್ನು ಇಟ್ಟು ಅಲಂಕರಿಸಿದ್ದರು ಹಾಗೂ ಸಾಂಪ್ರದಾಯಿಕ ರುಚಿಕರ ತಿಂಡಿ ತಿನಸುಗಳನ್ನು ತಯಾರಿಸಿ ಮಾರಾಟ ಮಾಡಿದರು.ಸಾಫಲ್ಯ ಟ್ರಸ್ಟ್ ನ ನಿರ್ದೇಶಕಿ ನಿರುಪಮಾ ಪ್ರಸಾದ್, ಲೇಖಕಿ ವಸಂತಿ ಶೆಟ್ಟಿ ಬ್ರಹ್ಮಾವರ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ನಿಕಾಯದ ಡೀನ್ ಗೌರಿ ಎಸ್ ಭಟ್ ಹಾಗೂ ವಿದ್ಯಾರ್ಥಿನಿಯರು ಇದ್ದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಹಾಗೂ ಕಲಾ ನಿಕಾಯದ ಡೀನ್ ಪ್ರೊ. ನಿಕೇತನಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಕೆ. ನಿರೂಪಿಸಿದರು. ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾ ಎಸ್.ಎನ್. ವಂದಿಸಿದರು.

PREV

Recommended Stories

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಠಲಗೌಡ ತಲೆಬುರುಡೆ ತಂದ ಬಂಗ್ಲೆಗುಡ್ಡೆಯಲ್ಲಿ ಇಂದು ಮಹಜರು?