ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯ-ವೀರನಗೌಡ

KannadaprabhaNewsNetwork |  
Published : Sep 20, 2024, 01:51 AM IST
ಫೋಟೊ ಶೀರ್ಷಿಕೆ: 19ಆರ್‌ಎನ್‌ಆರ್3 ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣ ಯುವಕರಿಗೆ ಏರ್ಪಡಿಸಲಾಗಿದ್ದ ಬೀಜೋತ್ಪಾದನೆ ತರಬೇತಿ ಕಾರ್ಯಕ್ರಮದಲ್ಲಿ ಧಾರವಾಡ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ವೀರನಗೌಡ ಪೋಲೀಸಗೌಡರ ಮಾತನಾಡಿದರು.  | Kannada Prabha

ಸಾರಾಂಶ

ರೈತರು ವಾಣಿಜ್ಯ ಬೆಳೆಗಳನ್ನು ಬೆಳೆದಾಗ ಸಿಗುವ ಲಾಭಕ್ಕಿಂತ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ವೀರನಗೌಡ ಪೋಲೀಸಗೌಡರ ಹೇಳಿದರು.

ರಾಣಿಬೆನ್ನೂರು: ರೈತರು ವಾಣಿಜ್ಯ ಬೆಳೆಗಳನ್ನು ಬೆಳೆದಾಗ ಸಿಗುವ ಲಾಭಕ್ಕಿಂತ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ವೀರನಗೌಡ ಪೋಲೀಸಗೌಡರ ಹೇಳಿದರು. ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣ ಯುವಕರಿಗೆ ಏರ್ಪಡಿಸಲಾಗಿದ್ದ ಮೂರು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಾವೇರಿ ಜಿಲ್ಲೆಯು ಬೀಜೋತ್ಪಾದನೆಗೆ ಅನುಕೂಲವಾದ ವಾತಾವರಣವನ್ನು ಹೊಂದಿರುವುದರಿಂದ ಏಷ್ಯಾ ಖಂಡದಲ್ಲಿಯೇ ಪ್ರಸಿದ್ಧಿಯನ್ನು ಪಡೆದಿದೆ. ಹಾಗಾಗಿ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಯುವಕ, ಯುವತಿಯರು ಪಾಲ್ಗೊಂಡು ಉದ್ಯಮಶೀಲರಾಗಿ ಬೆಳೆಯಬೇಕು ಎಂದರು. ಬುಡಪನಹಳ್ಳಿ ಗ್ರಾಮದ ಪ್ರಗತಿಪರ ರೈತ ಶಂಕರಗೌಡ ಪಾಟೀಲ ಮಾತನಾಡಿ, ಯುವಕರು ಬೀಜೋತ್ಪಾದನೆ ತರಬೇತಿಯಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸದ ವಿಷಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಯುವಕರು ಕೃಷಿಗೆ ಮರಳಬೇಕು ಎಂದರು. ಇದೇ ವೇಳೆ ಬೀಜೋತ್ಪಾದನೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು. ಕಾಕೋಳದ ಪ್ರಗತಿಪರ ರೈತ ಮಾಲತೇಶ ಶಿಡಗನಹಾಳ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ. ಎಸ್. ಮಾತನಾಡಿ, ಪ್ರತಿಯೊಬ್ಬ ರೈತನಿಗೆ ತಳಿಯ ಶುದ್ಧತೆ ಹೊಂದಿರುವ ಉತ್ತಮ ಮೊಳಕೆ ಹೊಡೆಯುವ ಸಾಮರ್ಥ್ಯ ಹೊಂದಿರುವ ಬೀಜಗಳು ಬಿತ್ತನೆಗೆ ದೊರಕಬೇಕು. ಬೀಜಗಳು ಕೃಷಿ ಮತ್ತು ತೋಟಗಾರಿಕೆಯಲ್ಲಿ ಅತಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಪ್ರಸ್ತುತ, ಗುಣಮಟ್ಟದ ಪ್ರಮಾಣಿತ ಬೀಜಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ ಎಂದರು.ಕೇಂದ್ರದ ಎಲ್ಲಾ ವಿಜ್ಞಾನಿ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಜಿಲ್ಲೆಯ ಆಸಕ್ತ ಗ್ರಾಮೀಣ ಯುವಕ ಮತ್ತು ಯುವತಿಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರೇಟರ್‌ ಬೆಂಗಳೂರು ಪಾಲಿಕೆಯ ಐದೂ ನಗರ ಪಾಲಿಕೆಗಳ ಆಯವ್ಯಯ ಮಂಡನೆ
ರಸ್ತೆ, ಮೂಲಸೌಕರ್‍ಯಕ್ಕೆ ಭರ್ಜರಿ ಉತ್ತರ - ಪಶ್ಚಿಮ ಪಾಲಿಕೆಯದ್ದೇ ದೊಡ್ಡ ಮೊತ್ತದ ಬಜೆಟ್