ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಹೋಟೆಲ್ ಮಯೂರ ರಿವರ್ ವ್ಯೂವ್ ಬಳಿ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ರಿವರ್ ರಾಫ್ಟಿಂಗ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಾಹಸ ಕ್ರೀಡೆ, ಜಲ ಕ್ರೀಡೆಯಂತಹ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಯುವ ಜನತೆಯ ಸಾಮರ್ಥ್ಯವನ್ನು ಸರಿಯಾದ ದಿಕ್ಕಿಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಎಲ್ಲಾ ಯುವ ಜನತೆ ತಮ್ಮಲಿರುವ ಅದಮ್ಯ ಶಕ್ತಿಯನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ದರೆ ದಡ ಸೇರಬಹುದು. ಇಲ್ಲವಾದರೆ ಗುರಿ ತಲುಪಲು ಸಾಧ್ಯವಿಲ್ಲ ಎಂದು ಹೇಳಿದರು.ಸ್ವಚ್ಛತೆಯೇ ಸೇವಾ ಅಭಿಯಾನ:
ಪ್ರವಾಸಿಗರಾಗಿ ಒಂದು ಜಾಗಕ್ಕೆ ಹೋದಾಗ ಅಲ್ಲಿನ ಪರಿಸರವನ್ನು ಕಾಪಾಡಬೇಕು. ಕನಿಷ್ಠ ಪ್ರವಾಸಿ ತಾಣಕ್ಕೆ ಯಾವುದೇ ಹಾನಿ ಉಂಟು ಮಾಡಬಾರದು ಎಂಬ ಸಂದೇಶವನ್ನು ಯುವ ಜನತೆ ಉಳಿದವರೂ ಸಾರಬೇಕು ಎಂಬ ಉದ್ದೇಶದಿಂದ ಇಂದು ಸ್ವಚ್ಛತೆಯೇ ಸೇವಾ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ನಂತರ ಜಿಪಂ ಸಿಇಒ ಕೆ.ಆರ್ ನಂದಿನಿ ಅವರು ಸ್ವಚ್ಛತೆಯೇ ಸೇವಾ ಅಭಿಯಾನದ ಕುರಿತು ಸ್ಪರ್ಧಾಳುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ಸುಭಾಷ್ ಚಂದ್ರ, ಸಹಾಯಕ ನಿರ್ದೇಶಕ ಓಂಪ್ರಕಾಶ್, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸ್ಪರ್ಧೆ ನಿರ್ದೇಶಕ ದಿನೇಶ್ ಸುವಣ್ಣ, ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್, ತಾಪಂ ಇಒ ವೇಣು, ಪುರಸಭೆ ಮುಖ್ಯಾಧಿಕಾರಿ ಸತೀಶ್ ಸೇರಿದಂತೆ ಇತರರು ಇದ್ದರು.