ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ರಂಗಗಳಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಎಷ್ಟೇ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾದನೀಯ. ಮಹಿಳೆಯರಿಗಿರುವ ಕಾನೂನುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕೆ ಹೊರತು ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಎಂ. ಗಿರಿಜಾ ಮಾತನಾಡಿ, ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಸಾಬೀತುಪಡಿಸುವ ಮೂಲಕ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸುತಿದ್ದಾರೆ.ಮಹಿಳೆಯರು ಶತಮಾನಗಳಿಂದ ಇತಿಹಾಸ ಸೃಷ್ಟಿಸಿದ್ದಾರೆ. ಹೆಣ್ಣು ಎಂಬ ಕೀಳಿರಿಮೆ ಬಿಟ್ಟು ಎಲ್ಲಾ ರಂಗದಲ್ಲೂ ಶ್ರಮವಹಿಸಿದರೆ ಯಶಸ್ಸು ಕಾಣಬಹುದು ಎಂದರು.ಜಿಲ್ಲಾ ಪಂಚಾಯತ್ ತರಬೇತಿ ಸಂಯೋಜಕ ಟಿ. ಜೆ. ಸುರೇಶ್ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮಾಜದಲ್ಲಿ ನಡೆಯುವ ಬಾಲ್ಯ ವಿವಾಹ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಥಿಯೊಡರ್ ಲೂಥರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉಪನ್ಯಾಸಕರಾದ ಡಾ. ಶಶಿಕಲಾ, ಶಿವಕುಮಾರ್, ದಿಲೀಪ್, ಬಸವಣ್ಣ, ಲಿಂಗರಾಜು, ವಾಣಿ, ಅಶೋಕ್, ಕು. ಸಿಂಧು ಇದ್ದರು.