ಪತ್ರಕರ್ತರನ್ನು ಉಳಿಸಿಕೊಳ್ಳುವುದು ಸಮಾಜದ ಕರ್ತವ್ಯ: ಸಿ.ಕೆ.ಮಹೇಂದ್ರ ಅಬಿಪ್ರಾಯ

KannadaprabhaNewsNetwork |  
Published : Aug 25, 2024, 02:01 AM IST
೨೩ಕೆಎಂಎನ್‌ಡಿ-೧ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ವಾರ್ತಾ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಪ್ರತಿನಿಧಿ ಪತ್ರಿಕೆ ಪ್ರಧಾನ ಸಂಪಾದಕ ಸಿ.ಕೆ.ಮಹೇಂದ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಪಾತ್ರ ಅಪಾರವಾಗಿದೆ. ಆದರೆ, ಇತ್ತೀಚೆಗೆ ಪತ್ರಿಕೋದ್ಯಮದ ಮುಂದೆ ಆನೇಕ ಸವಾಲುಗಳಿವೆ, ಅವುಗಳನ್ನು ಎದುರಿಸಿ ಗೆಲುವಿನೆಡೆಗೆ ಸಾಗಬೇಕಿದೆ. ಪತ್ರಕರ್ತರ ಸಂಘಟನೆಗಳು ಬಲಿಷ್ಠವಾಗುವ ಮೂಲಕ ಮಾಧ್ಯಮ ಹಾಗೂ ಪತ್ರಕರ್ತರ ಉಳಿವಿಗೆ ನೆರವಾಗಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಪತ್ರಕರ್ತರು ಅಪಾಯದ ಅಂಚಿನಲ್ಲಿದ್ದಾರೆ. ಪತ್ರಕರ್ತರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪ್ರತಿನಿಧಿ ದಿನಪತ್ರಿಕೆ ಪ್ರಧಾನ ಸಂಪಾದಕ ಸಿ.ಕೆ.ಮಹೇಂದ್ರ ಅವರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಮಂಡ್ಯ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಪಾತ್ರ ಅಪಾರವಾಗಿದೆ. ಆದರೆ, ಇತ್ತೀಚೆಗೆ ಪತ್ರಿಕೋದ್ಯಮದ ಮುಂದೆ ಆನೇಕ ಸವಾಲುಗಳಿವೆ, ಅವುಗಳನ್ನು ಎದುರಿಸಿ ಗೆಲುವಿನೆಡೆಗೆ ಸಾಗಬೇಕಿದೆ. ಪತ್ರಕರ್ತರ ಸಂಘಟನೆಗಳು ಬಲಿಷ್ಠವಾಗುವ ಮೂಲಕ ಮಾಧ್ಯಮ ಹಾಗೂ ಪತ್ರಕರ್ತರ ಉಳಿವಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕವಾಗಿ ತಮ್ಮ ಅಭಿಪ್ರಾಯವನ್ನು ಸುದ್ದಿ ರೂಪದಲ್ಲಿ ವ್ಯಕ್ತಪಡಿಸಬಹುದು, ಆದರೆ ಸುದ್ದಿ ಸಂಸ್ಥೆಗಳಲ್ಲಿ ಎಲ್ಲಾ ಸುದ್ದಿಗಳನ್ನು ಪ್ರಕಟ ಅಥವಾ ಪ್ರಸಾರ ಮಾಡುವ ಮೊದಲು ವಿಮರ್ಶೆ/ ಚರ್ಚೆ ನಡೆಸಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದರು.

ಮಹಿಳಾ ಸರ್ಕಾರಿ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಾಹನ ವಿಭಾಗದ ಮುಖ್ಯಸ್ಥ ಡಾ.ಎಚ್.ಎಸ್.ಶಿವರಾಜ್ ಮಾತನಾಡಿ, ಬ್ರಿಟಿಷರ ಕಾಲದಿಂದಲೂ ಪತ್ರಿಕೆಗಳು ಸಾಕಷ್ಟು ಸವಾಲುಗಳನ್ನು ಎದುರಿಸಿಕೊಂಡು ಬರುತ್ತಿವೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು ಎಂದರೆ ಪತ್ರಿಕೆಗಳು ಉಳಿಯಬೇಕು. ಸರ್ಕಾರದ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು ಎಂದರೆ ಪತ್ರಿಕೆಗಳ ಪಾತ್ರ ಮುಖ್ಯವಾದುದು ಎಂದರು.

ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಎಸ್.ನಿರ್ಮಲಾ, ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಜಿಲ್ಲಾ ಉಪಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ