ಕನ್ನಡಪ್ರಭವಾರ್ತೆ ಚಳ್ಳಕೆರೆ
ಅವರು, ಗುರುವಾರ ನಗರದ ವಾಸವಿ ಮಹಲ್‌ನಲ್ಲಿ ದಲಿತ ಸಮುದಾಯಗಳು ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಸಮಾವೇಶವನ್ನು ದೀಪಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಮಾದಿಗ ಸಮುದಾಯದ ಸಂಘಟನೆಗಳ ನೇತಾರರು, ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ತಮ್ಮ ಒಂದು ಗಂಟೆ ಸುಧೀರ್ಘ ಭಾಷಣದಲ್ಲಿ ಮಾದಿಗ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯಗಳ ಪಟ್ಟಿಯನ್ನು ಮಾಡಿದ ಅವರು, ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಮಾದಿಗ ಮೀಸಲಾತಿ ಹೋರಾಟ ಸಮಿತಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹೋರಾಟದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ, ಈ ಬಾರಿ ಲೋಕಸಭಾ ಚುನಾವಣೆ ನಂತರ ಮಾದಿಗ ಒಳಮೀಸಲಾತಿ ಜಾರಿಗೆ ತರುವ ಭರವಸೆ ನೀಡಿದ್ದಾರೆ ಎಂದರು.ದೇಶದ ಇತಿಹಾಸದಲ್ಲಿ ಪ್ರಧಾನಮಂತ್ರಿಗಳು ನಮ್ಮ ಕಾರ್ಯಕ್ರಮಕ್ಕೆ ಆಗಮಿಸಿ ನಮ್ಮ ಬೇಡಿಕೆ ಬಗ್ಗೆ ಮಾಹಿತಿ ಪಡೆದು ನಾನು ಕಾರ್ಯಕ್ರಮದಲ್ಲಿ ವಿಷಯ ಪ್ರಸ್ತಾಪ ಮಾಡುವ ಮುನ್ನವೇ ನನಗೆ ಈ ಭರವಸೆ ನೀಡಿದರು. ಆದ್ದರಿಂದ ನಾನು ಮೋದಿಯವರ ಆಡಳಿತವನ್ನು ಮುಕ್ತಕಂಠದಿಂದ ಹೇಳುತ್ತೇನೆ. ನನ್ನ ಸಮುದಾಯ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಲು ಮತದಾನದ ಮೂಲಕ ಬೆಂಬಲಿಸುವಂತೆ ಮನವಿ ಮಾಡುತ್ತೇನೆಂದರು.
ಕಾಂಗ್ರೆಸ್ ಪಕ್ಷವೂ ಸೇರಿ ಹಲವಾರು ವಿರೋಧ ಪಕ್ಷಗಳು, ವಿಶೇಷವಾಗಿ ಇಂಡಿಯಾ ಒಕ್ಕೂಟ ಬಿಜೆಪಿ ಮತ್ತು ಪ್ರಧಾನಮಂತ್ರಿ ಟೀಕಿಸುತ್ತಾ ಬಂದಿವೆ. ಬಿಜೆಪಿ ಪರಿಶಿಷ್ಟ ಜಾತಿ, ಪರಿಶಷ್ಟ ಪಂಗಡ, ಹಿಂದುಳಿದ ವರ್ಗ, ಮುಸ್ಲಿಂ ಸಮುದಾಯದ ವಿರೋಧಿಗಳೆಂದು ಸುಳ್ಳು ಪ್ರಚಾರ ಮಾಡುತ್ತಾರೆ. ಆದರೆ, ಅಬ್ದುಲ್ ಕಲಾಂರವರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ ದಲಿತ ಸಮುದಾಯದ ಹಿರಿಯ ನೇತಾರ ಕೋವಿಂದ್‌ರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ, ಬುಡಕಟ್ಟು ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ ಈ ದೇಶದ ಅತಿ ಉನ್ನತ್ತ ಸ್ಥಾನಗಳಿಗೆ ಬಿಜೆಪಿ ದಲಿತ, ಬುಡಕಟ್ಟು ಸಮುದಾಯಕ್ಕೆ ನೀಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಟ್ಟೆಪ್ಪನಹಳ್ಳಿ ಕಾಂತ್‌ರಾಜ್ ವಹಿಸಿದ್ದರು. ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಬಾಳೆಮಂಡಿರಾಮದಾಸ್, ಮಾಜಿ ಕಾರ್ಯದರ್ಶಿ ಜಯಪಾಲಯ್ಯ, ಪರಜಿತ ಅಭ್ಯರ್ಥಿ ಅನಿಲ್‌ಕುಮಾರ್, ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಎಂ.ರವೀಶ್‌ಕುಮಾರ್, ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಎಚ್.ಆನಂದಪ್ಪ, ನಗರಸಭಾ ಸದಸ್ಯ ವಿ.ವೈ.ಪ್ರಮೋದ್, ಚನ್ನಿಗರಾಮಯ್ಯ, ಕಲಮರಹಳ್ಳಿಶಿವಣ್ಣ, ಮಾರುತಿ, ಎಂ.ಇಂದ್ರೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.