ವಿಶೇಷ ಚೇತನರ ಲಾಲನೆ, ಪಾಲನೆ ನಮ್ಮೆಲ್ಲರ ಕರ್ತವ್ಯ: ಸಚಿವೆ ಹೆಬ್ಬಾಳಕರ

KannadaprabhaNewsNetwork |  
Published : Sep 29, 2024, 01:46 AM IST
ಬೈಲಹೊಂಗಲದಲ್ಲಿಕಾರ್ಮೆಲ್‌ ವಿದ್ಯಾ ವಿಕಾಸ ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ರಜತ ಮಹೋತ್ಸವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸಿದರು | Kannada Prabha

ಸಾರಾಂಶ

ವಿಶೇಷಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಈ ಮಕ್ಕಳ ಲಾಲನೆ, ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ವಿಶೇಷಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಈ ಮಕ್ಕಳ ಲಾಲನೆ, ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಗರದ ಕಾರ್ಮೆಲ್ ವಿದ್ಯಾ ವಿಕಾಸ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಬುದ್ಧಿಮಾಂದ್ಯತೆ ಹೊಂದಿದ ಮಕ್ಕಳಿಗೆ ಓದು ಬರಹ, ಶಿಸ್ತು ಮತ್ತು ಸಾಮಾಜಿಕ ಕೌಶಲ್ಯ, ದೈನಂದಿನ ಕೆಲಸ ಮಾಡುವ ಬಗೆ, ಈ ಎಲ್ಲವನ್ನೂ ತಾಳ್ಮೆಯಿಂದ ಕಲಿಸಿಕೊಡುವುದು ಅತ್ಯವಶ್ಯಕ ಎಂದು ಹೇಳಿದರು.

ಕಳೆದ 25 ವರ್ಷದಿಂದ ಸಾರ್ಥಕ ಸೇವೆ ಮಾಡುತ್ತಿರುವ ಶಾಲೆಯ ಸಾಧನೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ವಿಶೇಷ ಚೇತನ ಮಕ್ಕಳಿಗೆ ಧೈರ್ಯ ತುಂಬಿ ಸಾಮಾನ್ಯರೊಂದಿಗೆ ಸ್ಪರ್ಧಿಸುವ ಮಟ್ಟಿಗೆ ಬೆಳೆಸುವುದು ಸುಲಭದ ಮಾತಲ್ಲ. ಇಂಥ ಮಹಾನ್ ಕಾರ್ಯ ಮಾಡುತ್ತಿರುವ ಶಾಲೆಯ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಮದರ್ ತೇರೆಸಾ ವಿಶೇಷ ಚೇತನರಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಸಂಗೊಳ್ಳಿ ರಾಯಣ್ಣ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮನಂಥ ಸಾಧಕರ ಸಾಧನೆ ಪರಿಚಯಿಸುವ ಮೂಲಕ ವಿಶೇಷ ಚೇತನರಿಗೆ ಧೈರ್ಯ ತುಂಬಬೇಕಿದೆ. ಕ್ರೈಸ್ತ್‌ ಮಿಷನರಿ ಸಂಸ್ಥೆಗಳು ಶಿಸ್ತು ಹಾಗೂ ಸಮಯ ಪಾಲನೆಗೆ ಹೆಸರುವಾಸಿಯಾಗಿದ್ದು, ಭಾರತದಲ್ಲಿ ಶಿಕ್ಷಣ ವ್ಯವಸ್ಥೆಗೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿವೆ ಎಂದರು.

ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಚೇತನ ಮಕ್ಕಳ ಶಾಲೆಯ ಶಿಕ್ಷಕರ ಹಾಗೂ ಸಿಬ್ಬಂದಿಗೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ ಎಂದು ಹೇಳಿದರು.

ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ ಮತ್ತಿಕೊಪ್ಪ, ಶಾಲೆಯ ಮುಖ್ಯಶಿಕ್ಷಕಿ ಭಗಿನಿ ರೀಟಾ ಪಿಂಟೂ ಎ.ಸಿ, ಭಗಿನಿ ಪ್ಲಾವಿನಾ ಎ.ಸಿ, ಭಗಿನಿ ಸುದೀಪಾ ಎ.ಸಿ, ಫಾದರ್ ರಿಚರ್ಡ್, ಬೈಲಹೊಂಗಲ ಪುರಸಭೆ ಮಾಜಿ ಅಧ್ಯಕ್ಷ ರಾಜು ಜನ್ಮಟ್ಟಿ, ಪುರಸಭೆ ಸದಸ್ಯ ಅರ್ಜುನ ಕಲಕುಟಕರ್ ಹಾಗೂ ಶಾಲಾ ಸಿಬ್ಬಂದಿ ಇದ್ದರು.

PREV

Recommended Stories

ಛಾಯಾಗ್ರಾಹಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ
ಹಿಂದೂ ಸಮಾಜ ಸಂಘಟನೆಗೆ ಆರ್‌ಎಸ್ಎಸ್‌ ಪಾತ್ರ ಅಗಾಧ