ಕನ್ನಡಪ್ರಭ ವಾರ್ತೆ ಕೋಲಾರ
ನಗರದ ಹೊರವಲಯದ ಗಾಜಲದಿನ್ನೆ ಅರಣ್ಯ ವಿಭಾಗ ಕಚೇರಿಯ ಆವರಣದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳ ನಡುವೆ ಅರಣ್ಯವನ್ನು ನಾಶ ಮಾಡಲು ಹೊರಟಿದ್ದಾರೆ. ಇದರೊಂದಿಗೆ ಪ್ರಕೃತಿ ವಿಕೋಪ ಮತ್ತು ದರೋಡೆಕೋರರ ಮಧ್ಯೆ ಸೆಣಸಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಬಲಿಯಾಗುತ್ತಿದ್ದಾರೆ. ಪ್ರಾಣ ತ್ಯಾಗಕ್ಕೆ ಅವರ ಕುಟುಂಬಗಳಿಗೆ ಶಾಂತಿ ಮತ್ತು ಭವಿಷ್ಯ ರೂಪಿಸುವಂತಾಗಬೇಕು ಎಂದರು.ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿ, ಅರಣ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತವಾಗಿದೆ. ಅರಣ್ಯವನ್ನು ಸಂರಕ್ಷಿಸುವುದರಿಂದ ಮಾತ್ರವೇ ಮುಂದಿನ ಜನಾಂಗಕ್ಕೆ ಉತ್ತಮ ಭವಿಷ್ಯವನ್ನು ನೀಡಲು ಸಾಧ್ಯವಾಗುತ್ತದೆ. ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣಿಗಳನ್ನು ಕೊಟ್ಟ ಮಹನೀಯರ ತ್ಯಾಗವು ವ್ಯರ್ಥವಾಗಬಾರದು ಎಂದರು.
ಎಸ್ಪಿ ಬಿ.ನಿಖಿಲ್ ಮಾತನಾಡಿ, ಅರಣ್ಯ ಇಲಾಖೆ ಹುತಾತ್ಮ ಸಿಬ್ಬಂದಿಯ ನೋವು ನಮ್ಮ ಪೋಲಿಸ್ ಇಲಾಖೆಯಲ್ಲಿ ಕೂಡ ಇದೆ, ಅರಣ್ಯ ಸಂರಕ್ಷಣೆಯು ನಮ್ಮೆಲ್ಲರ ಬದ್ದತೆಯನ್ನು ಹೆಚ್ಚಿಸುತ್ತದೆ ಹುತಾತ್ಮರ ಕುಟುಂಬದೊಂದಿಗೆ ಇಲಾಖೆಗಳು ಸದಾ ಇರುತ್ತದೆ. ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರವೇ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಅದಕ್ಕೆ ಕೋಲಾರದಲ್ಲಿ ಒತ್ತುವರಿ ತೆರವು ಉದಾಹರಣೆಯಾಗಿದೆ ಅರಣ್ಯ ಇಲಾಖೆಯು ಒತ್ತುವರಿ ಭೂಮಿಯನ್ನು ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಪೊಲೀಸ್ ತಂಡದಿಂದ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ನ್ಯಾಯಾಧೀಶರಾದ ಶ್ರೀನಿವಾಸ್ ಎಸ್.ಪಾಟೀಲ್, ಚೇತನಾ ಅರಿಕಟ್ಟೆ, ಸಾಮಾಜಿಕ ಅರಣ್ಯಾಧಿಕಾರಿ ಆನಂದ್ ಕುಮಾರ್ ಇದ್ದರು.ಪೋಟೋ