ಕನ್ನಡಪ್ರಭ ವಾರ್ತೆ ಕೊರಟಗೆರೆ
ದೇಶವನ್ನು ಗಣತಂತ್ರ ರಾಷ್ಟ್ರವನ್ನಾಗಿಸಲು ಸಂವಿಧಾನದ ಕರಡು ಪ್ರತಿಯನ್ನು ಅಂಗೀಕರಿಸಲಾಗಿದ್ದು ದೇಶದ ಅಭಿವೃದ್ಧಿಗೆ ಶ್ರಮಿಸಿದ ಗಣ್ಯರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ಮಾಡಿ ಮಾತನಾಡಿದ ಅವರು ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ದತಿಯನ್ನು ಆಳವಡಿಸಿಕೊಂಡ ಸಂಭ್ರದ ದಿನವಾಗಿದ್ದು, 1950 ರ ಜನವರಿ 26 ರಂದು ಇಡೀ ಸ್ವತಂತ್ರ ಭಾರತವನ್ನು ಗಣರಾಜ್ಯವೆಂದು ಘೋಷಿಸಲಾಯಿತು, ಅದೇ ದಿನದಂದು ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಂಡಿತ್ತು, ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹೈನುಗಾರಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರಗತಿ ಪರ ರೈತ ತಾಲೂಕಿನ ಕೋಳಾಲ ಹೋಬಳಿಯ ದುಡ್ಡನಹಳ್ಳಿ ಡಿ.ಆರ್. ಹರೀಶ್, ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೌರಕಾರ್ಮಿಕ ಬಿ. ಚನ್ನಪ್ಪ, ಕೌಟುಂಬಿಕ ಕಲಹದಿಂದ ಮನನೊಂದ ವೃದ್ಧ ತೀತಾ ಜಲಾಶಯಕ್ಕೆ ಹಾರಿ ಆತ್ಮಹತ್ಯಗೆ ಯತ್ನಿಸಿ ನೀರಿನಲ್ಲಿ ಮುಳುಗುತ್ತಿದ್ದ ವೃದ್ದನನ್ನು ಕಾಪಾಡಿದ ತಾಲೂಕಿನ ಅರಸಾಪುರ ಗ್ರಾಮದ ಹೋಂಗಾಡರ್ ಜುಲ್ ಫಕೃದ್ದೀನ್, ಕಂದಾಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ದ್ವಿ.ದ.ಸ ಬಿ.ಎಲ್.ಅನಸೂಯಮ್ಮ, ಪ್ರೌಢಶಾಲಾ ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿರಿವೆನ್ನಲಾ ಅವರನ್ನು ಪ್ರಶಸ್ತಿ ನೀಡಿ ತಹಶೀಲ್ದಾರ್ ಗೌರವಿಸಿದರು.ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.
ಕಾರ್ಯಕ್ರಮದಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಅಪೂರ್ವಾ ಸಿ. ಅನಂತರಾಮು, ಕ್ಷೇತ್ರ ಶಿಕ್ಷಣಾದಿಕಾರಿ ಸಿ.ವಿ.ನಟರಾಜು, ಪ.ಪಂ.ಮುಖ್ಯಾಧಿಕಾರಿ ಭಾಗ್ಯಮ್ಮ, ಅರಕ್ಷಕ ವೃತ್ತ ನಿರೀಕ್ಷಕ ಆರ್.ಪಿ.ಅನಿಲ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಈರಣ್ಣ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಎಸ್ಸಿ.ಎಸ್ಟಿ ನೌಕರ ಸಮನ್ವಯ ಸಮಿತಿ ಅಧ್ಯಕ್ಷ ಚಿಕ್ಕಣ್ಣ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕು ಸಂಸ್ಥೆಯ ಅಧ್ಯಕ್ಷ ಕೆ.ಆರ್. ಓಬಳರಾಜು, ಪ.ಪಂ.ಸದಸ್ಯರಾದ ಭಾರತಿ ಸಸಿದ್ದಮಲ್ಲಪ್ಪ, ನಟರಾಜು, ಪ್ರದೀಪ್ ಕುಮಾರ್, ಪುಟ್ಟನರಸಪ್ಪ, ಮೈಲಾರಪ್ಪ, ಸಿಡಿಪಿಒ ಅಂಬಿಕಾ, ಇಎಎ ರವಿಕುಮಾರ್, ಕೀರ್ತೀನಾಯಕ್, ಸಮಾಜಕಲ್ಯಾಣ ಇಲಾಖೆ ಯಮುನಾ, ತೋಟಗಾರಿಕೆ ಇಲಾಖೆಯ ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.