ಕನ್ನಡಪ್ರಭವಾರ್ತೆ ವಿರಾಜಪೇಟೆ
ಅವರು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಮಾನವ ಹಕ್ಕುಗಳ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ನಡೆದ ಭಾರತದ ಸಂವಿಧಾನದ ಮೂಲಂಶಗಳು ಎಂಬ ವಿಷಯದ ಕುರಿತು ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು.
ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವಕ್ಕೆ ದೇಶದ ಸಂವಿಧಾನವು ತಳಹದಿಯಾಗಿದೆ ಎಂದ ಅವರು ಸಂವಿಧಾನವನ್ನು ಓದದಿದ್ದರೆ ಕಾನೂನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕನ್ನು ನೀಡಿದ್ದು ಸಾಮಾಜಿಕ ನ್ಯಾಯ ದ ಅಂಶಗಳನ್ನು ಎತ್ತಿ ಹಿಡಿದಿದೆ. ಪ್ರತಿಯೊಬ್ಬರು ದೇಶದ ಇತಿಹಾಸ, ಆರ್ಥಿಕ ಪರಿಸ್ಥಿತಿ, ಕಾನೂನು, ಹಕ್ಕುಗಳು, ರಾಜಕೀಯ ಅಂಶಗಳನ್ನು ಓದಿ ತಿಳಿಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಾನಿಧ್ಯ ವನ್ನು ವಹಿಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಮಾತನಾಡಿ ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ದೇಶದ ಮೂಲಭೂತ ಕಾನೂನಾಗಿದ್ದು ಅದನ್ನು ಅನುಸರಿಸಿ ಅದಕ್ಕೆ ಬದ್ಧರಾಗಿ ನಡೆಯುವುದು ನಮ್ಮ ಕರ್ತವ್ಯವಾಗಿದೆ ಎಂದರು.
ವೇದಿಕೆಯಲ್ಲಿ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕಿ ಶಶಿಕಲಾ ಹಾಗೂ ಐಕ್ಯೂಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು. ಕನ್ನಡ ಪ್ರಾಧ್ಯಾಪಕರಾದ ಅರ್ಜುನ್ ಸ್ವಾಗತಿಸಿದರು. ವಿದ್ಯಾರ್ಥಿನಿ ನಾಜಿಯಾ ನಿರೂಪಿಸಿದರು. ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಶಾಂತಿಭೂಷಣ್ ಅವರು ವಂದಿಸಿದರು. ಈ ಸಂದರ್ಭ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.