ಬೀದಿಬದಿ ವ್ಯಾಪಾರಿಗಳ ಕಾಯ್ದೆ ಜಾರಿ ಸ್ಥಳೀಯ ಸಂಸ್ಥೆಗಳ ಕರ್ತವ್ಯ-ಮಹೇಶ ಪತ್ತಾರ

KannadaprabhaNewsNetwork |  
Published : Apr 12, 2025, 12:47 AM IST
ಗಜೇಂದ್ರಗಡ ಸೇವಾಲಾಲ್ ಸಮುದಾಯ ಭವನದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘದ ಸಂಘಟನಾ ಕಾರ್ಯಾಗಾರ ನಡೆಯಿತು. | Kannada Prabha

ಸಾರಾಂಶ

ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆಯನ್ನು ಖಾತ್ರಿ ಪಡಿಸುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದರು.

ಗಜೇಂದ್ರಗಡ: ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆಯನ್ನು ಖಾತ್ರಿ ಪಡಿಸುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದರು.

ಪಟ್ಟಣದ ಸೇವಾಲಾಲ್ ಸಮುದಾಯ ಭವನದಲ್ಲಿ ನಡೆದ ಗಜೇಂದ್ರಗಡ ಬೀದಿಬದಿ ವ್ಯಾಪಾರಿಗಳ ಸಂಘ (ಸಿಐಟಿಯು)ಸಂಘಟನಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಬೀದಿ ವ್ಯಾಪಾರಿಗಳನ್ನು ಒಂದು ಸಮಸ್ಯೆಯಾಗಿ ನೋಡುವ ಬದಲು ಅವರನ್ನು ನಗರ ಆರ್ಥಿಕತೆಯ ಪ್ರಮುಖ ಭಾಗವೆಂದು ಗುರುತಿಸುವತ್ತ ಸಾಗಬೇಕಿದೆ. ಬೀದಿಬದಿ ವ್ಯಾಪಾರಿಗಳು ಅಸಂಘಟಿತ ಕಾರ್ಮಿಕರಾಗಿದ್ದು, ಸರಕಾರ ಅವರಿಗೆ ಯೋಗ್ಯ ಬಡ್ಡಿರಹಿತ ಸಾಲಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.ಕೃಷಿಕೂಲಿಕಾರ ಸಂಘದ ತಾಲೂಕ ಅಧ್ಯಕ್ಷ ಬಾಲು ರಾಠೋಡ ಮಾತನಾಡಿ, ಬೀದಿ ಬದಿ ವ್ಯಾಪಾರ ನಂಬಿ ಪಟ್ಟಣದಲ್ಲಿ ನೂರಾರು ಬಡ ಕುಟುಂಬಗಳು ಬದುಕುತ್ತಿವೆ. ರಾಜಕೀಯ ದೊಂಬರಾಟಕ್ಕೆ ಆತಂಕದಲ್ಲೇ ಜೀವನ ಕಳೆಯುವಂತಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿದ ನಂತರ ತೆರವುಗೊಳಿಸಬೇಕು. ಕಾನೂನಿನ ಚೌಕಟ್ಟಿನಲ್ಲಿದ್ದರೆ ಬೀದಿ ಬದಿ ವ್ಯಾಪಾರಸ್ಥರಿಗೆ ಬದುಕಲು ಅವಕಾಶ ಕೊಡಬೇಕು. ಆದರೆ, ರಾಜಕೀಯ ನಾಯಕರ ದೊಂಬರಾಟದ ಫಲ ಈಗ ಬೀದಿ ಬದಿ ವ್ಯಾಪಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರುಮುಖಂಡರಾದ ದಾವಲಸಾಬ ತಾಳಿಕೋಟಿ, ಪೀರು ರಾಠೋಡ ಮಾತನಾಡಿ, ಸರ್ಕಾರ ಬೀದಿ ಬದಿ ವ್ಯಾಪಾರಿ ಗಳ ಹಿತ ರಕ್ಷಣೆಗಾಗಿಯೆ ಪ್ರತ್ಯೇಕ ಕಾಯ್ದೆ ರೂಪಿಸಿದ್ದರೂ ಅದರ ಪರಿಣಾಮಕಾರಿ ಅನುಷ್ಠಾನದತ್ತ ಇಲ್ಲಿನ ಸ್ಥಳೀಯ ಸಂಸ್ಥೆ ಗಮನಹರಿಸಿಲ್ಲ. ಹೀಗಾಗಿ ಇಲ್ಲಿನ ಬೀದಿ ಬದಿ ವ್ಯಾಪಾರಿಗಳು ಸಾಮಾಜಿಕ ಭದ್ರತೆ ಇಲ್ಲದೆ ಬಳಲುವಂತಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ನೆಲೆ ಕಲ್ಪಿಸಬೇಕು ಎಂದರು.ಕಾರ್ಯಗಾರದಲ್ಲಿ ಗಣೇಶ ರಾಠೋಡ, ಮೈಬು ಹವಾಲ್ದಾರ್, ಅನ್ವರಭಾಷಾ ಹಿರೇಕೊಪ್ಪ, ರೂಪೇಶ ಮಾಳೋತ್ತರ, ಅಂಬರೀಶ್ ಚವ್ಹಾಣ, ಕಳಕಪ್ಪ ಮಾಳೋತ್ತರ, ಮೆಹಬೂಬ್ ಮಾಲ್ದಾರ, ರಾಜು ಮಾಂಡ್ರೆ, ಚೌಡಮ್ಮ ಯಲ್ಪು, ಮಂಜುಳಾ ಪಮ್ಮಾರ, ಪರಶುರಾಮ ಬಡಿಗೇರ, ವಿಷ್ಣು ಚಂದುಕರ ಸೇರಿದಂತೆ ನೂರಾರು ಬೀದಿ ಬದಿ ವ್ಯಾಪಾರಸ್ಥರು ಭಾಗವಹಿಸಿದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?