ರೈತರಿಗೆ ಉತ್ತಮ ಬೆಲೆ ನೀಡುವುದು ಸಕ್ಕರೆ ಕಾರ್ಖಾನೆ ಮಾಲೀಕ ಕರ್ತವ್ಯ: ಎಚ್.ಡಿ.ಕುಮಾರಸ್ವಾಮಿ

KannadaprabhaNewsNetwork |  
Published : Aug 24, 2026, 01:45 AM IST
23ಕೆಎಂಎನ್ ಡಿ13,14 | Kannada Prabha

ಸಾರಾಂಶ

ಸಕ್ಕರೆ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳೇ ಕಾರಣ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸಕ್ಕರೆ ಬೆಲೆ ದಿಢೀರ್ ಏರಿಕೆಯಾಗುವುದರಲ್ಲಿ ಇ.20 ಎಥೆನಾಲ್ ಅನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವುದು ಸಕ್ಕರೆ ಬೆಲೆ ದಿಢೀರ್ ಏರಿಕೆಗೆ ಒಂದು ಕಾರಣವಾದರೆ ಹಬ್ಬ, ಹರಿದಿನಗಳ ಕಾಲದಲ್ಲಿ ಸಕ್ಕರೆ ಬೇಡಿಕೆಗೆ ಹೆಚ್ಚಾಗಿ ಕಾರಣವಿರಬಹುದು.

ಕನ್ನಡಪ್ರಭ ವಾರ್ತೆ ಮದ್ದೂರು

ಕಬ್ಬು ಬೆಳೆದು ಕಾರ್ಖಾನೆಗಳಿಗೆ ಪುರೈಕೆ ಮಾಡಿದ ರೈತರಿಗೆ ಉತ್ತಮ ಬೆಲೆ ನೀಡಬೇಕಾಗಿರುವುದು ಸಕ್ಕರೆ ಕಾರ್ಖಾನೆ ಮಾಲೀಕರ ಕರ್ತವ್ಯ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಎಂದು ಟೀಕಿಸಿದರು.

ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿರುವ ಸಚಿವರ ಕುಮಾರಸ್ವಾಮಿ ಅವರಿಗೆ ತಾಲೂಕಿನ ನಿಡಘಟ್ಟ ಸಮೀಪದ ಖಾಸಗಿ ಹೋಟೆಲ್ ವೊಂದರಲ್ಲಿ ಉಪಾಹಾರ ಸೇವಿಸಿದ ನಂತರ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಕ್ಕರೆ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳೇ ಕಾರಣ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸಕ್ಕರೆ ಬೆಲೆ ದಿಢೀರ್ ಏರಿಕೆಯಾಗುವುದರಲ್ಲಿ ಇ.20 ಎಥೆನಾಲ್ ಅನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವುದು ಸಕ್ಕರೆ ಬೆಲೆ ದಿಢೀರ್ ಏರಿಕೆಗೆ ಒಂದು ಕಾರಣವಾದರೆ ಹಬ್ಬ, ಹರಿದಿನಗಳ ಕಾಲದಲ್ಲಿ ಸಕ್ಕರೆ ಬೇಡಿಕೆಗೆ ಹೆಚ್ಚಾಗಿ ಕಾರಣವಿರಬಹುದು. ಈ ಬಗ್ಗೆ ಕೇಂದ್ರ ಸರ್ಕಾರ ಶೀಘ್ರ ಗಮನ ಹರಿಸುತ್ತದೆ ಎಂದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಧೈರ್ಯವಿದ್ದರೆ ನೈಸ್ ರಸ್ತೆ ಟೋಲ್‌ಗೆ ಕಡಿವಾಣ ಹಾಕಲು ನ್ಯಾಯಾಲಯದಿಂದ ತಡೆಯಾಜ್ಞೆ ತರಲಿ ಎಂದು ಪೌರಾಡಳಿತ ಸಚಿವ ಎಚ್.ಡಿ.ಬಾಲಕೃಷ್ಣ ಸವಾಲಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನೈಸ್ ಸೇರಿದಂತೆ ಅನೇಕ ವಿಚಾರಗಳಲ್ಲಿ ಸರ್ಕಾರ ತಪ್ಪು ಮಾಡಿದಾಗ ಧ್ವನಿ ಎತ್ತುವುದು ನಮ್ಮ ಕರ್ತವ್ಯವಾಗಿದೆ. ಹೀಗಾಗಿ ಬಾಲಕೃಷ್ಣ ಟೋಲ್ ವಸೂಲಿ ವಿರುದ್ಧ ಪ್ರಶ್ನಿಸಿದ ನನ್ನ ವಿರುದ್ಧ ಹೊಟ್ಟೆ ನೋವಿನ ಕಥೆ ಕಟ್ಟುತ್ತಿದ್ದಾರೆ. ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್ಮುಲ್ ನಿರ್ದೇಶಕ ರಾಮಚಂದ್ರ, ಜೆಡಿಎಸ್ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮುಖಂಡರಾದ ಕೆ.ಟಿ.ಶೇಖರ್, ಜಿ.ಟಿ.ಪುಟ್ಟಸ್ವಾಮಿ, ಹನುಮಂತೇಗೌಡ, ಶೀವೇಶ್, ಚಾಮನಹಳ್ಳಿ ರಾಕೇಶ್ ಮತ್ತಿತರರಿದ್ದರು.

ಮದ್ದೂರು ವಡೆ ರುಚಿ ಸವಿದು ಎಚ್ಡಿಕೆ ಮೆಚ್ಚುಗೆ

ಮದ್ದೂರು:

ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಮದ್ದೂರು ಟಿಫಾನೀಸ್ ಹೋಟೆಲ್‌ನಲ್ಲಿ ಮದ್ದೂರು ವಡೆ ರುಚಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ನಿಡಘಟ್ಟ ಗ್ರಾಮದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮದ್ದೂರು ಟಿಫಾನೀಸ್‌ಗೆ ಭೇಟಿ ನೀಡಿದ ಕುಮಾರಸ್ವಾಮಿ ಅವರು ಮದ್ದೂರು ವಡೆಯೊಂದಿಗೆ ಉಪಹಾರ ಸೇವಿಸಿದರು.

ಮದ್ದೂರು ವಡೆ ರುಚಿಯೊಂದಿಗೆ ತನ್ನದೇ ಆದ ವೈಶಿಷ್ಟವನ್ನು ಹೊಂದಿದೆ. ಮಾಲೀಕ ಜಯಪ್ರಕಾಶ್ ಅವರ ಪೂರ್ವಜ್ಞರು ನೂರು ವರ್ಷಗಳ ಹಿಂದೆಯೇ ಮದ್ದೂರು ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದ ಮದ್ದೂರು ವಡೆ ಈಗ ಪ್ರತಿ ಕುಟುಂಬದ ಮನೆ ಮಾತಾಗಿದೆ. ಅಲ್ಲದೇ, ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮದ್ದೂರು ವಡೆ ಯಾಕೆ ಪಡೆದುಕೊಂಡಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ