ವಿದ್ಯಾರ್ಥಿಗಳಿಗೆ ದಾರಿ ತೋರುವುದು ಶಿಕ್ಷಕರ ಕರ್ತವ್ಯ: ಎಚ್.ಡಿ ತಮ್ಮಯ್ಯ

KannadaprabhaNewsNetwork | Published : Feb 10, 2025 1:51 AM

ಸಾರಾಂಶ

ಚಿಕ್ಕಮಗಳೂರು, ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ದಾರಿ ತೋರುವುದು ಶಿಕ್ಷಕರ ಕರ್ತವ್ಯ. ಶಿಕ್ಷಣ ಕೇವಲ ನೌಕರಿಗಲ್ಲ ಉತ್ತಮ ಜೀವನ ನಿರ್ವಹಣೆಗೂ ಅತ್ಯವಶ್ಯಕ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಯುನೈಟೆಡ್ ಇಂಟರ್ ನ್ಯಾಷನಲ್ ಸ್ಕೂಲ್‌ನ 23ನೇವಾರ್ಷಿಕೋತ್ಸವ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ದಾರಿ ತೋರುವುದು ಶಿಕ್ಷಕರ ಕರ್ತವ್ಯ. ಶಿಕ್ಷಣ ಕೇವಲ ನೌಕರಿಗಲ್ಲ ಉತ್ತಮ ಜೀವನ ನಿರ್ವಹಣೆಗೂ ಅತ್ಯವಶ್ಯಕ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರದ ಕುವೆಂಪು ಕಲಾ ಮಂದಿರದಲ್ಲಿ ಯುನೈಟೆಡ್ ಇಂಟರ್ ನ್ಯಾಷನಲ್ ಸ್ಕೂಲ್‌ನ 23ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಮಕ್ಕಳು ಕಲಿಕೆಯಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಬಾಲ್ಯದಲ್ಲಿ ಮಕ್ಕಳ ಮನಸ್ಸು ಮತ್ತು ಬುದ್ಧಿಶಕ್ತಿ ಹೆಚ್ಚು ಕ್ರೀಯಾಶೀಲತೆಯಿಂದ ಕೂಡಿರುತ್ತದೆ. ಯಾವುದೇ ವಿಷಯ, ಕಲೆಯನ್ನು ಕರಗತ ಮಾಡಿಕೊಳ್ಳುವಂತ ಶಕ್ತಿ ಪ್ರತಿ ಯೊಂದು ಮಕ್ಕಳಲ್ಲಿ ಅಡಗಿರುತ್ತದೆ. ಪೋಷಕರು ಇವುಗಳನ್ನು ಅರಿತು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದರು.ವಿದ್ಯೆ ಎಂಬುದು ಪ್ರಬಲ ಅಸ್ತ್ರ. ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿದಲ್ಲಿ ಪ್ರಪಂಚವನ್ನೇ ಬದಲಾಯಿಸಬಹುದು. ಮಕ್ಕಳು ವಿದ್ಯೆ ಜೊತೆಗೆ ಸಂಸ್ಕಾರ ಕಲಿತು ತಂದೆ ತಾಯಿ, ಗುರು, ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದ ಅವರು, ಸುಮಾರು 23 ವರ್ಷಗಳಿಂದ ಉತ್ತಮ ಶಿಕ್ಷಣ ನೀಡಿ, ಮಕ್ಕಳ ಭವಿಷ್ಯ ರೂಪಿಸುತ್ತಿರುವ ಈ ಸಂಸ್ಥೆ ಇನ್ನಷ್ಟು ಬೆಳವಣಿಗೆ ಹೊಂದಲಿ ಎಂದು ಹಾರೈಸಿದರು.ಯುನೈಟೆಡ್ ಶಾಲೆ ಅಧ್ಯಕ್ಷ ಜಮೀರ್ ಅಹಮದ್ ಮಾತನಾಡಿ, ಶಿಕ್ಷಣ ಕೇವಲ ಪುಸ್ತಕ ಹಾಗೂ ಪರೀಕ್ಷೆಗೆ ಸೀಮಿತವಲ್ಲ. ಶಿಕ್ಷಣ ವೂ ಮಕ್ಕಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ. ಬದುಕು ನಿರ್ವಹಿಸುವ ಶಕ್ತಿ ನೀಡುತ್ತದೆ. ಒಬ್ಬ ಉತ್ತಮ ವಿದ್ಯಾರ್ಥಿ ಶಿಕ್ಷಣ ಸಂಸ್ಥೆಗೆ ಜೊತೆಗೆ ಸಾಮಾಜದಲ್ಲೂ ಉನ್ನತ ಸ್ಥಾನ ಗಳಿಸುತ್ತಾನೆ ಎಂದರು.

ಶಾಲೆ ಪ್ರಾಂಶುಪಾಲರಾದ ಆಯಿಶಾ ಜಮೀರ್ ಅಹಮದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ನಜೀರ್ ಅಹಮದ್. ಶೇಖ್ ಇಸ್ಮಾಯಿಲ್, ಮುಖ್ಯ ಶಿಕ್ಷಕಿ ಇಂಪಾಗೌಡ, ಶಿಕ್ಷಕಿ ವನಿತಾ ಉಪಸ್ಥಿತರಿದ್ದರು.

9 ಕೆಸಿಕೆಎಂ 2ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ನಡೆದ ಯುನೈಟೆಡ್ ಇಂಟರ್ ನ್ಯಾಷನಲ್ ಸ್ಕೂಲ್‌ನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಉದ್ಘಾಟಿಸಿದರು.

Share this article