ನುಡಿ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಂ.ಆರ್. ಪ್ರಕಾಶ್ ಅಭಿಮತಕನ್ನಡಪ್ರಭ ವಾರ್ತೆ ಕಡೂರು
ತಾಲೂಕಿನ ಸಖರಾಯಪಟ್ಟಣ ಸಮೀಪದ ಜೋಡಿ ಹೋಚಿಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ನುಡಿ ನಿತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಎಂದರೆ ಭಾಷೆಯಲ್ಲ, ಅದು ಭಾವನೆ. ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ತಾಯಿ ಮತ್ತು ತಾಯಿ ನಾಡನ್ನು ಎಂದಿಗೂ ಮರೆಯಬಾರದು ಎಂದರು.
ಪ್ರಾಸ್ತಾವಿಕವಾಗಿ ಜೋಡಿಹೋಚಿಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಮಾತನಾಡಿ, ಸಿರಿಗನ್ನಡ ವೇದಿಕೆ ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಇದೀಗ ನಮ್ಮ ಶಾಲೆಯಲ್ಲಿ ಮಾಡುತ್ತಿರುವುದು ಅಭಿನಂದನಾರ್ಹ ಎಂದು ಹೇಳಿದರು.ಜಿಲ್ಲಾ ಜಾಗತಿಕ ಲಿಂಗಾಯತ ವೇದಿಕೆಯ ಜಿಲ್ಲಾಧ್ಯಕ್ಷ ಗಂಗಾಧರ ಶಿವಪುರ ಮಾತನಾಡಿ, ಜನಪದ ಸಾಹಿತ್ಯದಲ್ಲಿ ಮಹಿಳೆ ಸಾಕಷ್ಟು ಪ್ರಭಾವ ಬೀರಿದ್ದಾಳೆ. ತನ್ನ ದೈನಂದಿನ ಜೀವನ ಹಾಗೂ ತನ್ನ ಜೀವನದ ಮುಖ್ಯ ಮಜಲುಗಳನ್ನು ಮಹಿಳೆ ಎಳೆ ಎಳೆಯಾಗಿ ಆಸ್ವಾದಿಸುತ್ತ ಅದಕ್ಕೊಂದು ಸಾಹಿತ್ಯ ರೂಪ ಕೊಟ್ಟಿದ್ದಾಳೆ ಎಂದು ಹೇಳಿದರು.