ಮಕ್ಕಳು ರೋಗದಿಂದ ಬಳದಂತೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿ

KannadaprabhaNewsNetwork |  
Published : Jun 29, 2026, 01:15 AM IST
ಪೋಟೋ 28hsd1: ಹೊಸದುರ್ಗ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಬೆಲಗೂರಿನಲ್ಲಿ ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಶಾಸಕ ಬಿ ಜಿ ಗೋವಿಂದಪ್ಪ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಹೊಸದುರ್ಗ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಬೆಲಗೂರಿನಲ್ಲಿ ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಶಾಸಕ ಬಿ.ಜಿ.ಗೋವಿಂದಪ್ಪ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಕರೆ ನೀಡಿದರು.

ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ, ಬೆಲಗೂರಿನಲ್ಲಿ ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಭವಿಷ್ಯವಾದ ಮಕ್ಕಳು ಯಾವುದೇ ರೋಗದಿಂದ ಬಳಲದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳ ಆರೋಗ್ಯ ರಕ್ಷಣೆಗೆ ಪಲ್ಸ್ ಪೋಲಿಯೊ ಸೇರಿದಂತೆ ವಿವಿಧ ಲಸಿಕಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿವೆ. ಆದ್ದರಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ರಾಘವೇಂದ್ರ ಪ್ರಸಾದ್ ಮಾತನಾಡಿ, ಅಂಗನವಾಡಿ ಕೇಂದ್ರಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಜನಸಂದಣಿ ಹೆಚ್ಚಿರುವ ಪ್ರವಾಸಿ ತಾಣಗಳಲ್ಲಿ ಪೋಲಿಯೊ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪೋಷಕರು ತಮ್ಮ ಸಮೀಪದ ಬೂತ್‌ಗೆ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಾಟೀಲ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಸಹನಾ, ಡಾ.ಕೃಪಾಕರ, ಮೇಲ್ವಿಚಾರಕರಾದ ಲಲಿತಮ್ಮ, ನಿರ್ಮಲ, ಅಲೀಮ್ ಪಾಷಾ, ಸಮುದಾಯ ಆರೋಗ್ಯ ಕೇಂದ್ರ ಬೆಲಗೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಲ್ಲಾಳಸಮುದ್ರದ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ತಾಯಂದಿರು, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಹಿತಕ್ಕಾಗಿ ಬಿಡದಿ ಟೌನ್‌ಶಿಪ್ ಯೋಜನೆ ಕೈ ಬಿಡಿ
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಿ