ಕನ್ನಡಪ್ರಭ ವಾರ್ತೆ ಬ್ಯಾಡಗಿ
ಪಟ್ಟಣದ ಎಸ್‌ಜೆಜೆಎಂ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ತಾಲೂಕಾಡಳಿತ, ತಾಪಂ ಹಾಗೂ ಹಾವೇರಿ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಶನ್ ಇವುಗಳ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವಿಭಾಗಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಕ್ರೀಡಾ ಪ್ರತಿಭೆ ಅವಕಾಶ ವಂಚಿತರಾದರೆ ದೇಶದ ಕ್ರೀಡಾ ಜಗತ್ತಿಗೆ ಅದು ತುಂಬಲಾರದ ನಷ್ಟ. ಗ್ರಾಮೀಣ ಪ್ರದೇಶದಲ್ಲಿ ಪ್ರಸಿದ್ಧಿಯಾಗಿದ್ದ ಕಬಡ್ಡಿ ಕ್ರೀಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮನ್ನಣೆ ಪಡೆಯುವ ಮೂಲಕ ಕ್ರೀಡಾಸಕ್ತಿ ಹೆಚ್ಚಿಸಿದೆ. ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಹೆಚ್ಚು ಮನ್ನಣೆ ನೀಡಬೇಕಾಗಿದೆ ಎಂದರು.
ಕ್ರೀಡೆ ಜೊತೆ ಶಿಕ್ಷಣವೂ ಅವಶ್ಯಕತೆ ಇರುವುದರಿಂದ ಕ್ರೀಡಾಪಟುಗಳಿಗೆ ಕಬಡ್ಡಿ ತರಬೇತಿ ಸೇರಿದಂತೆ ಶಿಕ್ಷಣಕ್ಕೆ ಅವಶ್ಯವಿರುವ ಸಕಲ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಸದಾ ಸಿದ್ಧವಿರಬೇಕಾಗಿದೆ. ಇದೀಗ ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿರುವ ಕಬಡ್ಡಿಯಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಬರಿಗಾಲಲ್ಲಿ ಮಣ್ಣಿನ ಅಂಕಣದಲ್ಲಿ ಆಡುತ್ತಿದ್ದ ಕ್ರೀಡಾ ಪಟುಗಳು ಈಗ ಶೂ ಧರಿಸಿ ಮ್ಯಾಟ್‌ಗಳ ಮೇಲೆ ಆಟವಾಡಲಾರಂಭಿಸಿದ್ದಾರೆ. ಕ್ರೀಡಾ ಜಗತ್ತಿನಲ್ಲಿ ಇದೊಂದು ಕ್ರಾಂತಿಕಾರಿ ಬದಲಾವಣೆಯಾಗಿದೆ. ಅಂತಹ ವ್ಯವಸ್ಥೆಯನ್ನು ಇಲ್ಲಿಯೂ ಕಲ್ಪಿಸಲಾಗಿದೆ ಎಂದರು.ಕರ್ನಾಟಕ ರಾಜ್ಯ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಎಂ.ಹನುಮಂತೇ ಗೌಡ ಮಾತನಾಡಿ, ಎಲ್ಲ ರೀತಿಯಲ್ಲಿ ಬಲಿಷ್ಟವಾದ ಸಮಿತಿಯೊಂದನ್ನು ರಚಿಸಿಕೊಂಡು ಬಡ ಕಬಡ್ಡಿ ಕ್ರೀಡಾಪಟುಗಳಿಗೆ ರಾಷ್ಟ್ರಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಬದುಕಿನ ಮಾರ್ಗ ತೋರಿಸುವ ನಿರ್ದಿಷ್ಟ ಗುರಿ ಕಬಡ್ಡಿ ಸಂಸ್ಥೆಗಳಿಗೆ ಇದೆ. ಈ ನಿಟ್ಟಿನಲ್ಲಿ ಯಶಸ್ಸನ್ನು ಕಂಡಿರುವ ಹಾವೇರಿ ಜಿಲ್ಲಾ ಅಮೇಚೂರ ಕಬಡ್ಡಿ ಸಂಸ್ಥೆಯು ಕಳೆದ 22 ವರ್ಷದಿಂದ ಹಾವೇರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯ ನೂರಾರು ಕ್ರೀಡಾಪಟುಗಳ ಏಳಿಗೆಗೆ ಸಹಕರಿಸಿದ್ದು ಕಬಡ್ಡಿ ಕ್ರೀಡೆಯನ್ನು ಉತ್ತುಂಗಕ್ಕೇರಿಸಿದೆ ಎಂದರು.
ಸಂಶೋಧನಾ ಗ್ರಂಥ ಬಿಡುಗಡೆ:
ವೇದಿಕೆಯಲ್ಲಿ ಕಬಡ್ಡಿ ಅಸೋಸಿಯೇಶನ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ಮಲ್ಲಿಕಾರ್ಜುನ ಬಳ್ಳಾರಿ, ಕೋಶಾಧ್ಯಕ್ಷ ಗಂಗಣ್ಣ ಎಲಿ, ಚೇರಮನ್ ಸಿ.ಜಿ. ಚಕ್ರಸಾಲಿ, ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಆನಂದಸ್ವಾಮಿ ಗಡ್ಡದೇವರಮಠ, ತಹಸೀಲ್ದಾರ ಎಸ್.ಎ. ಪ್ರಸಾದ, ತಾಪಂ ಇಒ ಕೆ.ಎಂ. ಮಲ್ಲಿಕಾರ್ಜುನ, ಪುರಸಭೆ ಸ್ಥಾಯಿ ಸಮಿತಿ ಚೇರಮನ್ ಬಾಲಚಂದ್ರ ಪಾಟೀಲ, ಮುಖ್ಯಾಧಿಕಾರಿ ವಿನಯಕುಮಾರ ಹಾಗೂ ಸರ್ವ ಸದಸ್ಯರು ಸಿಪಿಐ ಮಹಾಂತೇಶ ಲಂಬಿ, ಪಿಎಸ್‌ಐ ಮಂಜುನಾಥ ಕುಪ್ಪೇಲೂರ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಸ್ವಾಗತಿಸಿದರು. ಶಿಕ್ಷಕರಾದ ಜೆ.ಎಚ್. ಛತ್ರದ, ಎಂ.ಎಫ್. ಕರಿಯಣ್ಣನವರ, ಮಾಲತೇಶ ಚಳಗೇರಿ ನಿರೂಪಿಸಿ, ಮಲ್ಲಪ್ಪ ಕರೆಣ್ಣನವರ ವಂದಿಸಿದರು.
ಆಕರ್ಷಕ ಮೆರವಣಿಗೆ: