ಕನ್ನಡದ ಹಿರಿಮೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ

KannadaprabhaNewsNetwork |  
Published : Nov 09, 2026, 01:30 AM IST
ಪೊಟೋ೮ಸಿಪಿಟಿ೧: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಯೋಜಿಸಿದ್ದ ಕನ್ನಡರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನು ಸ್ವಾಗತಿಸಲಾಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ನಾವೆಲ್ಲ ನಮ್ಮ ನಾಡು-ನುಡಿಯ ಬಗ್ಗೆ ವಿಶೇಷ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡದ ಹಿರಿಮೆ ಉಳಿಸಿ ಬೆಳೆಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು

ಚನ್ನಪಟ್ಟಣ: ನಾವೆಲ್ಲ ನಮ್ಮ ನಾಡು-ನುಡಿಯ ಬಗ್ಗೆ ವಿಶೇಷ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡದ ಹಿರಿಮೆ ಉಳಿಸಿ ಬೆಳೆಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಎನ್‌ಸಿಸಿ, ರೆಡ್ ಕ್ರಾಸ್ ರೋವರ್ಸ್ಮ ಮತ್ತು ರೇಂಜರ್ಸ್ ಹಾಗೂ ಇತರ ಸಮಿತಿ ಚಟುವಟಿಕೆಗಳು ಹಾಗೂ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ನಾಡು ಹಾಗೂ ನುಡಿಗೆ ತನ್ನದೇ ಆದ ಇತಿಹಾಸವಿದೆ. ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ತ್ಯಾಗ, ಹೋರಾಟ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಿಕೊಳ್ಳಬೇಕು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಗೌರವಿಸುವುದರ ಜೊತೆಗೆ ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಣ ತಜ್ಞ ಪ್ರೊ .ಕೆ.ಇ.ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು. ಹಿರಿಯರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆಯಬೇಕು. ಅವರ ಭವಿಷ್ಯ ಉಜ್ಚಲವಾಗಬೇಕಾದರೇ ಅವರು ಈಗಿನಿಂದಲೇ ಕಷ್ಟಪಡುವುದನ್ನು ಕಲಿಯಬೇಕು. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದೆ. ಹಾಗಾಗಿ ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕ ಓದುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಮೂಲಕ ತಮ್ಮ ವ್ಯಕ್ತಿತ್ವವನ್ನ ರೂಪಿಸಿಕೊಳ್ಳಬೇಕಾದ ಅಗತ್ಯತೆ ಎಂದು ಕಿವಿಮಾತು ಹೇಳಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಕ್ಕಳ ಹೃದಯ ವಿಭಾಗದ ನಿವೃತ್ತ ಮುಖ್ಯಸ್ಥರಾದ ವಿಜಯಲಕ್ಷ್ಮಿ ಬಾಳೆಕುಂದ್ರಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಸಮನ್ವಯತೆ ಹಾಗೂ ಸಹಕಾರ ಸಹನಭೂತಿ ಕಡಿಮೆಯಾಗುತ್ತಿದೆ. ಅಂತ ಗುಣಗಳನ್ನ ಬೆಳೆಸಿಕೊಳ್ಳುವುದರ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ಕಡೆ ಹೆಜ್ಜೆ ಇಡಬೇಕು.

ಕನ್ನಡ ಭಾಷೆ ಅದು ಬರೀ ಭಾಷೆಯಲ್ಲ ಅದು ನಮ್ಮೆಲ್ಲರ ಭಾವನೆ ನಮ್ಮೆಲ್ಲರ ಹೃದಯದ ಅಂತರಾಳದ ಅಂತಃಶಕ್ತಿಯಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎ.ಪಿ.ರಂಗನಾಥ್ ಮಾತನಾಡಿ, ಗ್ರಾಮೀಣ ಭಾಗದ ಶಾಲಾ ಕಾಲೇಜುಗಳು ರಾಜ್ಯದ ನಾಡು ನುಡಿ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿವೆ. ಸರ್ಕಾರಿ ಶಾಲಾ ಕಾಲೇಜುಗಳನ್ನು ತಾತ್ಸಾರ ಮನೋಭಾವದಿಂದ ನೋಡುವ ಪ್ರವೃತ್ತಿಯನ್ನು ಬಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರ ಹಾಗೂ ಪ್ರಾಧ್ಯಾಪಕರು ನೇಮಕಾತಿ ನಡೆಯಬೇಕಾಗಿರುವ ಅವಶ್ಯಕತೆ ಇದೆ ಇದರ ಬಗ್ಗೆ ಸದನದ ಒಳಗು ಮತ್ತು ಸದನದ ಹೊರಗೂ ಹೋರಾಟ ಮಾಡುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಪ್ರೊ. ಉಷಾಮಾಲಿನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಮಿತಿ ಸಂಚಾಲಕರಾದ ಡಾ. ದೀಪ್ತಿ ಎಸ್., ಸಾಂಸ್ಕೃತಿಕ ಸಮಿತಿಯ ಡಾ. ವೀಣಾವಿನ್ ಎಚ್., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಈಶ್ವರ್‌ನಾಯ್ಕ ಕೆ.ಜಿ., ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಚಂದ್ರು ಎಚ್.ಜಿ., ಎನ್ಎಸ್ಎಸ್ ಸಮಿತಿಯ ಮುನಿರಾಜವಿನ್ ಹಾಗೂ ಭವ್ಯ ಸಿ., ರೆಡ್ ಕ್ರಾಸ್‌ನ ಡಾ. ಹರೀಶ್‌ಕುಮಾರ್ ಆರ್., ರೋವರ್ಸ್ ಮತ್ತು ರೇಂಜರ್ಸ್ ಸಮಿತಿಯ ಡಾ. ಚನ್ನಮ್ಮ ಹಾಗೂ ಪ್ರಭಾಕರ್ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೊಟೋ೮ಸಿಪಿಟಿ೧: ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಯೋಗೇಶ್ವರ್ ಅವರನ್ನು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ