ನಿತ್ಯ 2 ಗಂಟೆ ಮೊಬೈಲ್, ಟಿವಿ ಸ್ವಿಚ್ ಆಫ್‌ಗೆ ಡಂಗೂರ!

KannadaprabhaNewsNetwork |  
Published : Feb 07, 2026, 03:15 AM IST
Rona

ಸಾರಾಂಶ

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳ ಓದಿಗೆ ಶಾಂತ ವಾತಾವರಣ ಒದಗಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ರೋಣ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿನ ಹಿತದೃಷ್ಟಿಯಿಂದ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಂಜೆ 7ರಿಂದ ರಾತ್ರಿ 9ರ ವರೆಗೆ ಮೊಬೈಲ್ ಹಾಗೂ ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಜೋರಾಗಿ ಹಾಡು ಹಾಕಿಕೊಂಡು ಸಂಚರಿಸದಂತೆ ಡಂಗೂರ ಸಾರಲು ತಾಪಂ ಆದೇಶ ಹೊರಡಿಸಿದೆ.ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳ ಓದಿಗೆ ಶಾಂತ ವಾತಾವರಣ ಒದಗಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ರೋಣ ಹಾಗೂ ಗಜೇಂದ್ರಗಡ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಕ್ಷಣ ಡಂಗೂರ ಸಾರಿಸಿ, ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸಮಯದಲ್ಲಿ ಮೊಬೈಲ್, ಟಿವಿ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಅಧ್ಯಯನಕ್ಕೆ ಅಡ್ಡಿಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ. ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಪಂ ಮನವಿ ಮಾಡಿದೆ.

ಸಹಕಾರ: 

ಇವತ್ತಿನ ಮಕ್ಕಳಿಗೆ ಓದಲು ಸಮಯ ಕೊಡುವುದು ತುಂಬಾ ಮುಖ್ಯ. ಸಂಜೆ ಹೊತ್ತಿಗೆ ಟಿವಿ, ಮೊಬೈಲ್, ಜೋರಾದ ಹಾಡುಗಳಿಂದ ಮಕ್ಕಳ ಗಮನ ಬೇರೆಡೆ ಹೋಗುತ್ತಿತ್ತು. ಸರ್ಕಾರ ಹಾಗೂ ತಾಲೂಕು ಪಂಚಾಯಿತಿ ತೆಗೆದುಕೊಂಡಿರುವ ಈ ನಿರ್ಧಾರ ಬಹಳ ಒಳ್ಳೆಯದು. ನಾವು ಗ್ರಾಮಸ್ಥರು ಎಲ್ಲರೂ ಸಹಕರಿಸುತ್ತೇವೆ ಎಂದು ಗ್ರಾಮಸ್ಥರಾದ ಶಿವಾನಂದ ತಿಳಿಸಿದರು.

ಉತ್ತಮ ಫಲಿತಾಂಶ:

 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ನಮ್ಮೆಲ್ಲರ ಜವಾಬ್ದಾರಿ. ಮಕ್ಕಳ ಓದಿಗೆ ಅನುಕೂಲವಾಗುವ ಶಾಂತ ವಾತಾವರಣ ನಿರ್ಮಾಣವೇ ಈ ಕ್ರಮದ ಉದ್ದೇಶ. ಸಾರ್ವಜನಿಕರ ಸಹಕಾರದಿಂದ ಉತ್ತಮ ಫಲಿತಾಂಶ ಸಾಧಿಸಬಹುದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಕುಕ್ಕೆಯಲ್ಲಿ ಇಂದು ತಾಲೂಕು ಭಜನೋತ್ಸವ: ಮಾಧವ ಗೌಡ
ಗ್ರಾಮ ಸಹಾಯಕರನ್ನು ಡಿ ಗ್ರೂಪ್‌ಗೆ ಸೇರಿಸುವಂತೆ ಮನವಿ