ಬಸ್ತಿಮಕ್ಕಿಯಲ್ಲಿ 2016ನೇ ಮದ್ಯ ವರ್ಜನ ಶಿಬಿರಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಭಟ್ಕಳ
ತಾಲೂಕಿನ ಬಸ್ತಿಮಕ್ಕಿಯ ಶ್ರೀ ರಾಘವೇಶ್ವರ ಭಾರತಿ ಹವ್ಯಕ ಸಭಾಭನವದಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಲಾದ ೨೦೧೬ನೇ ಮದ್ಯವರ್ಜನ ಶಿಬಿರವನ್ನು ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಹಣಮಂತ ಬಿರಾದಾರ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ದುಶ್ಚಟ ಬಿಡುವುದಕ್ಕೆ ದೃಢ ಮನಸ್ಸು ಅಗತ್ಯವಾಗಿದೆ. ಜೊತೆಗೆ ವೈದ್ಯಕೀಯ ನೆರವು ಮತ್ತು ಸಾಮಾಜಿಕ ಬೆಂಬಲ ದೊರೆತಾಗ ಮದ್ಯ ಸೇವನೆಯನ್ನು ಬಿಡುವ ಸಂಕಲ್ಪ ಯಶಸ್ವಿಯಾಗುತ್ತದೆ. ಇದಕ್ಕೆಲ್ಲ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಶಿಬಿರ ಆಯೋಜಿಸುವ ಮೂಲಕ ಸಾಮಾಜಿಕ ಕಾರ್ಯದೊಂದಿಗೆ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಮದ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಮುರುಡೇಶ್ವರದ ಅಧ್ಯಕ್ಷ ಸತೀಶ ಶೇಟ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹೇಶ್, ಉತ್ತರ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಾಮನ ನಾಯ್ಕ ಮಂಕಿ, ಶ್ರೀಧರ ನಾಯ್ಕ ಆಸರಕೇರಿ, ಸಾಥಯ್ಯ ಹೊನ್ನ ನಾಯ್ಕ ಮಾನತಾಡಿದರು.ವೇದಿಕೆಯಲ್ಲಿ ಶ್ರೀ ರಾಘವೇಶ್ವರ ಭಾರತಿ ಹವ್ಯಕ ಸಭಾಭವನ ಮಾಲಕ ಕೃಷ್ಣಾನಂದ ಭಟ್ಟ ಬಲ್ಸೆ, ಮಾವಳ್ಳಿ-೧ ಗ್ರಾಪಂ ಅಧ್ಯಕ್ಷೆ ನಯನಾ ನಾಗೇಶ ನಾಯ್ಕ, ಗ್ರಾಪಂ ಮಾವಳ್ಳಿ-೨ರ ಅಧ್ಯಕ್ಷೆ ನಾಗರತ್ನ ಪಡಿಯಾರ್, ಶಂಕರ ಭಟ್ರಹಿತ್ಲು ಉಪಸ್ಥಿತರಿದ್ದರು. ಕರಾವಳಿ ಪ್ರಾದೇಶಿಕ ಕಚೇರಿ ಉಡುಪಿಯ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಜನಜಾಗೃತಿ ವೇದಿಕೆ ಪ್ರಾರಂಭ, ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಲತಾ ಬಂಗೇರ ಸ್ವಾಗತಿಸಿದರು. ಮೇಲ್ವಿಚಾರಕ ಪ್ರಭಾಕರ ನಿರೂಪಿಸಿದರು. ಮಾಲಿನಿ ವಂದಿಸಿದರು.