ಕನ್ನಡಪ್ರಭ ವಾರ್ತೆ ಗದಗ
ಗದಗ ನಗರದ ವಿಠಲಾರೂಢ ಮಂದಿರದಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ 248ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚೆನ್ನಮ್ಮನ ಜಯಂತಿಯನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಪ್ರತಿ ವರ್ಷ ವಿಜೃಂಭಣೆಯಿಂದ ಆಚರಿಸುತ್ತಿವೆಯಾದರೂ, ಆಕೆಯ ನೈಜ ಇತಿಹಾಸ ಹಾಗೂ ತ್ಯಾಗದ ಆಳವನ್ನು ಅರಿತವರ ಸಂಖ್ಯೆ ಕಡಿಮೆ ಇದೆ. ಪತಿ ಮತ್ತು ಮಗ ತೀರಿಕೊಂಡ ನಂತರವೂ ಎದೆಗುಂದದೆ, ಏಕಾಂಗಿಯಾಗಿ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ರಣಕಹಳೆ ಮೊಳಗಿಸಿದ ಧೀಮಂತೆ ಆಕೆ ಎಂದರು.ಮುಖ್ಯ ಅತಿಥಿಯಾಗಿದ್ದ ಬಿಜೆಪಿ ಯುವ ಉಮೇಶಗೌಡ ಪಾಟೀಲ ಮಾತನಾಡಿ, ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಶೌರ್ಯ, ಸ್ವಾಭಿಮಾನ ಹಾಗೂ ದೇಶಪ್ರೇಮದ ಆದರ್ಶಗಳು ಇಂದಿನ ಯುವಜನತೆ ಮತ್ತು ಮಹಿಳೆಯರಿಗೆ ಸದಾ ದಾರಿದೀಪ. ಅನ್ಯಾಯ ಮತ್ತು ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತುವುದನ್ನು ಕಲಿಸಿದ ಚೆನ್ನಮ್ಮನ ಜೀವನ ಪ್ರತಿಯೊಬ್ಬರಿಗೂ ಮಾದರಿ. ಎಂತಹ ವಿಷಮ ಮತ್ತು ಸಂಕಷ್ಟದ ಸಂದರ್ಭದಲ್ಲೂ ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸ, ದೃಢತೆಯಿಂದ ಮುನ್ನಡೆಯುವ ಸಂದೇಶವನ್ನು ಚೆನ್ನಮ್ಮನ ಇತಿಹಾಸ ಸಾರುತ್ತದೆ ಎಂದರು.
ವೇದಿಕೆಯಲ್ಲಿ ಪ್ರಮುಖರಾದ ಅಜ್ಜನಗೌಡ ಹಿರೇಮನಿ ಪಾಟೀಲ, ಮೋಹನ ಮಾಳಶೆಟ್ಟಿ, ಎಂ.ಎಸ್. ಕರೀಗೌಡರ, ವಸಂತ ಪಡಗದ, ಪ್ರಕಾಶ ಅಂಗಡಿ, ಮಹಾಂತೇಶ ಅಂಗಡಿ, ಅನಿತಾ ಗಡ್ಡಿ, ವಿಜಯಲಕ್ಷ್ಮಿ ದಿಂಡೂರು ಸೇರಿದಂತೆ ಸಮಾಜದ ಅನೇಕ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.