ವಿಶ್ವದಲ್ಲಿ ಕನ್ನಡಿಗರ ಕಾಯಕದ ಬೆಳಕು ಬೆಳಗಿಸಿದ್ದು ವಿಶ್ವೇಶ್ವರಯ್ಯನವರು

KannadaprabhaNewsNetwork | Published : Sep 16, 2024 1:51 AM

ಸಾರಾಂಶ

ಕನ್ನಡಿಗರ ಕಾಯಕದ ಬೆಳಕನ್ನು ವಿಶ್ವಮಟ್ಟದಲ್ಲಿ ಬೆಳಗಿಸಿದ ಕೀರ್ತಿ ವಿಶ್ವೇಶ್ವರಯ್ಯನವರಾಗಿದೆ. ದೇಶದ ಅಭಿವೃದ್ಧಿಗೆ ಅಭಿಯಂತರರ ಕೊಡುಗೆ ಅಪಾರವಿದೆ ಎಂದು ಬಿಡಿಸಿಸಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕನ್ನಡಿಗರ ಕಾಯಕದ ಬೆಳಕನ್ನು ವಿಶ್ವಮಟ್ಟದಲ್ಲಿ ಬೆಳಗಿಸಿದ ಕೀರ್ತಿ ವಿಶ್ವೇಶ್ವರಯ್ಯನವರಾಗಿದೆ. ದೇಶದ ಅಭಿವೃದ್ಧಿಗೆ ಅಭಿಯಂತರರ ಕೊಡುಗೆ ಅಪಾರವಿದೆ ಎಂದು ಬಿಡಿಸಿಸಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಸಮಾರಂಭದಲ್ಲಿ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಅಭಿವೃದ್ಧಿಯ ಚಿಂತನೆಗಳ ಹಿಂದಿರುವ ಪ್ರೇರಕಶಕ್ತಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರಾಗಿದ್ದು, ಶತಮಾನ ಕಂಡ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕಾರಣಕರ್ತರಾಗಿ ಕನ್ನಡ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.ಕಾರ್ಯನಿರ್ವಾಹಕ ಅಭಿಯಂತರ ಎನ್.ಎನ್.ಪಾಟೀಲ ಮಾತನಾಡಿ, ಇಂದು ವಿಶ್ವೇಶ್ವರಯ್ಯನವರ ಜನ್ಮ ದಿನದಂದು ಇಂಜನಿಯರಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿದವರನ್ನು ಗುರುತಿಸಿ ಗೌರವಿಸುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವುದು ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸಂತೃಪ್ತಿ ತಂದಿದೆ ಎಂದು ತಿಳಿಸಿದರು.ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರ ಎಂ.ಟಿ.ಮೇಟಿ ಮಾತನಾಡಿ, ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯನವರು ಇಡೀ ವಿಶ್ವದ ಇಂಜನಿಯರರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಜೀವನ ಪೂರ್ಣ ಕನ್ನಡ ನಾಡಿಗಾಗಿ ದುಡಿದು, ಸೇವೆ ಸಲ್ಲಿಸಿದ ನಮ್ಮ ನೆಲೆದ ಹೆಮ್ಮೆಯ ವಿಜ್ಷಾನಿಯಾಗಿ ಜಗತ್ಪ್ರಸಿದ್ಧರಾಗಿದ್ದಾರೆ. ಇಂದು ಕನ್ನಡದ ನೆಲವು ವಿಜ್ಞಾನ, ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ವಿಶ್ವೇಶ್ವರಯ್ಯನವರ ಅಗಾದ ಪರಿಶ್ರಮ, ದೂರದೃಷ್ಟಿ, ಸಮಾಜಮುಖಿ ಯೋಜನೆಗಳು ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. ಕನ್ನಡ ಕನ್ನಂಬಾಡಿ ಆಣೆಕಟ್ಟು ಕಟ್ಟಿದ್ದು, ಆಧುನಿಕ ಮೈಸೂರಿನ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು.ಸಾಹಿತಿ ಯೋಗೇಶ್ ಲಮಾಣಿ ಅವರು ಕನ್ನಡ ನಾಡಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಭಾರ ಅಧೀಕ್ಷಕ ಅಭಿಯಂತರ ಶ್ರೀಶೈಲ ಕಲ್ಯಾಣಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿರುಪಾಕ್ಷಯ್ಯ ಚೌಕಿಮಠ ಹಾಗೂ ಬಸವೇಶ್ವರ ಇಂಜನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಬಸವಾರಾಜ ಹಿರೇಮಠ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಶಂಕರ ಹೂಲಿ, ಡಾ.ಗೀತಾ ದಾನಶೆಟ್ಟಿ, ವಿಜಯಶ್ರೀ ಮುರನಾಳ, ಸಂಗಮೇಶ ಬ್ಯಾಳಿ, ಮಾಧ್ಯಮ ಕಾರ್ಯದರ್ಶಿ ಸಂಗಮೇಶ ಬಡಿಗೇರಿ ಪಾಲ್ಗೊಂಡಿದ್ದರು.ಸಮಾರಂಭದಲ್ಲಿ ಪವಿತ್ರಾ ಜಕ್ಕಪ್ಪನವರ ಪ್ರಾರ್ಥನೆ ಮಾಡಿದರು. ಸಂಗಮೇಶ ಪಾನಶೆಟ್ಟಿ ಹಾಗೂ ಬಸವರಾಜ ಕುಬಸದ ನಾಡಗೀತೆ ಹಾಡಿದರು. ಶಂಕರ ಹೂಲಿ ಸ್ವಾಗತಿಸಿದರು. ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು. ಕಜಾಪ ಕೋಶಾಧ್ಯಕ್ಷ ಆರ್.ಸಿ.ಚಿತ್ತವಾಡಿಗಿ ವಂದಿಸಿದರು.

ಸರ್.ಎಂ.ವಿಶ್ವೇಶ್ವರಯ್ಯನವರು ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಪಾಂಡಿತ್ಯ ಹೊಂದಿದವರಾಗಿದ್ದರು. ಅವರು ಕನ್ನಡ ನಾಡಿಗಾಗಿ, ದೇಶಕ್ಕಾಗಿ ಸೇವೆ ಸಲ್ಲಿಸಿ, ಇಂದಿನ ವಿಜ್ಞಾನಿಗಳಿಗೆ, ಅಭಿಯಂತರಿಗೆ ಸ್ಫೂರ್ತಿ ತುಂಬಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆಯ ಜಿಲ್ಲಾ ಘಟಕ ಇಂದು ಅವರ ಜನ್ಮದಿನಾಚರಣೆಯಂದು ಸಾಧನೆಗೈದ ಅಭಿಯಂತ್ರರನ್ನು ಸನ್ಮಾನಿಸ ಗೌರವಿಸುತ್ತಿರುವುದು ಶ್ಲಾಘನೀಯವಾಗಿದೆ.

-ಶಿವಾನಂದ ಉದಪುಡಿ,

ಬಿಡಿಸಿಸಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷರು.

Share this article