ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ ಅಂಗವಾಗಿ ಆಯೋಜಿಸಿದ್ದ ಕೃಷ್ಣಜನ್ಮಾಷ್ಟಮಿ ಮಕ್ಕಳ ವೇಷಭೂಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬಿಜಿಎಸ್ ಶಾಲೆಯಲ್ಲಿ ಪ್ರತಿವರ್ಷವೂ ಕೃಷ್ಣಜನ್ಮಾಷ್ಟಮಿ ಕಾರ್‍ಯಕ್ರಮ ಆಯೋಜಿಸುತ್ತಿದ್ದೇವೆ ಎಂದರು.
ಪೋಷಕರು ತುಂಬಾ ಖುಷಿಯಿಂದ ತಮ್ಮ ಮಕ್ಕಳನ್ನು ಕೃಷ್ಣ, ರಾಧೆ, ರಾಮ ಸೇರಿದಂತೆ ಹಲವು ವೇಷಗಳಲ್ಲಿ ಅಲಂಕರಿಸುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೀರಿ. ಮಕ್ಕಳಿಗೆ ನಮ್ಮ ದೇಶದ ಇತಿಹಾಸ, ಸಂಸ್ಕೃತಿ, ಆಚಾರ ವಿಚಾರವನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಮಾಡಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕೃತಿಯನ್ನು ಕಲಿಸುವುದು ಅತ್ಯವಶ್ಯಕವಾಗಿದೆ ಎಂದರು.ವೇದವ್ಯಾಸಾಶ್ರಮದ ಬಸವನಂದಾ ಸ್ವಾಮೀಜಿ ಮಾತನಾಡಿ, ಪೋಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ದೇಶದ ಸಂಸ್ಕೃತಿಯನ್ನು ಕಲಿಸುವ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದರು.
ಸಮಾರಂಭದಲ್ಲಿ ಶಾಲೆ ಪ್ರಾಂಶುಪಾಲ ಮಹದೇವು, ಮುಖ್ಯಶಿಕ್ಷಕ ರಘು, ಪತ್ರಕರ್ತರಾದ ಬಿ.ಎಸ್.ಜಯರಾಮು, ಕುಮಾರಸ್ವಾಮಿ, ನಾಗಸುಂದರ್, ರವಿಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.