ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿರುವ ಜಿಪಂ ಮಾಜಿ ಸದಸ್ಯ ಎಚ್.ಎನ್.ವಿಜಯ್ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಮುಖಂಡರು ಮತ್ತು ಪ್ರಮುಖ ಸಭೆಯಲ್ಲಿ ಅವರು ಮಾತನಾಡಿದರು.
ಬಡವರ ಸಂಕಷ್ಟ ಮತ್ತು ಜನರ ನಾಡಿಮಿಡಿತ ಅರಿತಿರುವ ಎಚ್.ಡಿ.ಕುಮಾರಸ್ವಾಮಿ ಅವರಂತಹವರು ಸಂಸತ್ತಿಗೆ ಹೋದರೆ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದರು.ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಅಪಾರ ರಾಜಕೀಯ ಅನುಭವ ಹೊಂದಿರುವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಉತ್ತಮವಾದ ಜನಪರ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದು, ಅವರಿಂದ ಮತ್ತಷ್ಟು ಅಭಿವೃದ್ಧಿಯಾಗಬೇಕಾದರೆ ಬಹುಮತಗಳಿಂದ ಆಯ್ಕೆಯಾಗಬೇಕು ಎಂದರು.
ಮುಂದಿನ ಐದು ವರ್ಷದೊಳಗೆ ಭಾರತ ದೇಶ ಜಗತ್ತಿನಲ್ಲಿ ಪ್ರಬಲ ರಾಷ್ಟ್ರವಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರ ದೃಷ್ಟಿ ಯೋಜನೆ ಮತ್ತು ಕಾರ್ಯಕ್ರಮಗಳು ಇದಕ್ಕೆ ಕಾರಣವಾಗಲಿದ್ದು, ಎಲ್ಲರೂ ಎನ್.ಡಿಎ ಮೈತ್ರಿಕೂಟ ಬೆಂಬಲಿಸಬೇಕೆಂದು ಮನವಿ ಮಾಡಿದರು.ಜಿಪಂ ಮಾಜಿ ಸದಸ್ಯರಾದ ಎಚ್.ಎನ್. ವಿಜಯ್, ಅಮಿತ್ ವಿ. ದೇವರಹಟ್ಟಿ, ಎಂ.ಟಿ. ಕುಮಾರ್, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಟಿ. ಅಣ್ಣೇಗೌಡ, , ಪಿಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ. ಸೋಮಣ್ಣ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ. ರಾಮೇಗೌಡ, ಸಾಲಿಗ್ರಾಮ ತಾಲೂಕು ಕಸಾಪ ಅಧ್ಯಕ್ಷ ಎಸ್.ಕೆ. ಮಧುಚಂದ್ರ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಜೆಡಿಎಸ್ ಮುಖಂಡರಾದ ಕೆ.ಆರ್. ಜಗದೀಶ್, ಎಂ. ಕುಮಾರ್ ಇದ್ದರು.