ವಿಶ್ವದಾದ್ಯಂತ ಸೆ. 8 ರಂದು ಕ್ರೈಸ್ತ ಸಮುದಾಯದವರು ಆಚರಿಸುವ ದೇವಮಾತೆ ಕನ್ಯಾಮರಿಯಮ್ಮ ಜನ್ಮದಿನವನ್ನು, ಕರಾವಳಿ ಭಾಗದ ಕ್ರೈಸ್ತ ಬಾಂಧ್ಯರವರು ಮೊಂತಿ ಫೆಸ್ತ್ (ತೆನೆ ಹಬ್ಬ)ವಾಗಿ ಆಚರಿಸುತ್ತಾರೆ. ಆದ್ದರಿಂದ ಅಂದು ಸರ್ಕಾರಿ ರಜೆ ಘೋಷಣೆ ಮಾಡುವಂತೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ನೇತೃತ್ವದಲ್ಲಿ ಕಥೊಲಿಕ್ ಸಭಾ ಮಂಗಳೂರು ಹಾಗೂ ಉಡುಪಿ ಪ್ರದೇಶದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉಡುಪಿ: ವಿಶ್ವದಾದ್ಯಂತ ಸೆ. 8 ರಂದು ಕ್ರೈಸ್ತ ಸಮುದಾಯದವರು ಆಚರಿಸುವ ದೇವಮಾತೆ ಕನ್ಯಾಮರಿಯಮ್ಮ ಜನ್ಮದಿನವನ್ನು, ಕರಾವಳಿ ಭಾಗದ ಕ್ರೈಸ್ತ ಬಾಂಧ್ಯರವರು ಮೊಂತಿ ಫೆಸ್ತ್ (ತೆನೆ ಹಬ್ಬ)ವಾಗಿ ಆಚರಿಸುತ್ತಾರೆ. ಆದ್ದರಿಂದ ಅಂದು ಸರ್ಕಾರಿ ರಜೆ ಘೋಷಣೆ ಮಾಡುವಂತೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ನೇತೃತ್ವದಲ್ಲಿ ಕಥೊಲಿಕ್ ಸಭಾ ಮಂಗಳೂರು ಹಾಗೂ ಉಡುಪಿ ಪ್ರದೇಶದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಾಕಷ್ಟು ಕ್ರೈಸ್ತರು ಕೃಷಿಕರಾಗಿದ್ದು, ಶೆ. 8ರಂದು ತೆನೆಹಬ್ಬದಂದು ಅವರು ಬೆಳೆದ ಹೊಸ ಫಸಲನ್ನು ದೇವರಿಗೆ ಅರ್ಪಿಸಿ, ಚರ್ಚುಗಳಲ್ಲಿ ಪೂಜೆ ನೆರವೇರಿಸಿ, ಸಹಭೋಜನದೊಂದಿಗೆ ಆಚರಣೆ ಮಾಡುತ್ತಾರೆ. ಈ ಹಬ್ಬವನ್ನು ಕುರಲ್ ಪರ್ಬ ಅಥವಾ “ಕುಟುಂಬದ ಹಬ್ಬ " ಎಂದು ಕರೆಯುತ್ತಾರೆ. ಇತ್ತೀಚಿನ ಕೆಲವು ವರ್ಷಗಳಿಂದ ಈ ಹಬ್ಬಕ್ಕೆ ರಾಜ್ಯ ಸರ್ಕಾರವು, ಕೇವಲ ಶಿಕ್ಷಕರಿಗೆ ಸೀಮಿತವಾಗಿ ನಿರ್ಬಂಧಿತ ರಜೆ ನೀಡುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶಿಕ್ಷಣ, ಆರೋಗ್ಯ ಇನ್ನಿತರ ಕ್ಷೇತ್ರದಲ್ಲಿ ಸೇವೆ ಉದ್ಯೋಗ ಮಾಡುತ್ತಿದ್ದು, ಅವರಿಗೂ ಈ ಹಬ್ಬವನ್ನು ಸಾರ್ವತ್ರಿಕವಾಗಿ ಆಚರಿಸಲು ಅನುಕೂಲವಾಗುವಂತೆ, ಸೆ 8 ರಂದು ಸಾರ್ವತ್ರಿಕ ರಜೆ ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಲಾಯಿತು.ಒಂದು ವೇಳೆ ರಾಜ್ಯಾದ್ಯಂತ ರಜೆ ನೀಡಲು ಅಸಾಧ್ಯವಾದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಗಳಿಗೆ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.
ನಿಯೋಗದಲ್ಲಿ ಕಥೊಲಿಕ್ ಸಭಾ ಮಂಗಳೂರು ಅಧ್ಯಕ್ಷ ಸಂತೋಷ್ ಡಿಸೋಜಾ, ರಾಜಕೀಯ ಸಂಚಾಲಕ ಸ್ಟ್ಯಾನಿ ಲೋಬೊ, ಉಡುಪಿ ಅಧ್ಯಕ್ಷ ಮೆಲ್ವಿನ್ ಆರಾನ್ಹಾ ಶಿರ್ವ, ಉಡುಪಿ ವಲಯ ಅಧ್ಯಕ್ಷ ಕಿರಣ್ ಲೂವಿಸ್ ಹಾಗೂ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.