ಸಂಕಷ್ಟಹರಣ ಹಾಗೂ ಇಷ್ಟಾರ್ಥಸಿದ್ಧಿ ಕಾಳರಾತ್ರಿ ಎಳ್ಳು ಅಮಾವಾಸ್ಯೆ ಮಾಲೆ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಾರ್ಥಿಸಿದ್ದ ಡಿ.ಕೆ. ಶಿವಕುಮಾರ ಅವರ ಪಾರ್ಥನೆಯನ್ನು ತಾಲೂಕಿನ ಆಂದ್ಲೆಯ ಶ್ರೀ ಜಗದೇಶ್ವರಿ ದೇವಿ ಸಿದ್ಧಿಸಿ ಆಶೀರ್ವದಿಸಿದ್ದಾಳೆ.
ಎಳ್ಳು ಅಮಾವಾಸ್ಯೆ ಮಾಲೆ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಾರ್ಥಿಸಿದ್ದ ಡಿಕೆಶಿರಾಘು ಕಾಕರಮಠ
ಕನ್ನಡಪ್ರಭ ವಾರ್ತೆ ಅಂಕೋಲಾಸಂಕಷ್ಟಹರಣ ಹಾಗೂ ಇಷ್ಟಾರ್ಥಸಿದ್ಧಿ ಕಾಳರಾತ್ರಿ ಎಳ್ಳು ಅಮಾವಾಸ್ಯೆ ಮಾಲೆ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಾರ್ಥಿಸಿದ್ದ ಡಿ.ಕೆ. ಶಿವಕುಮಾರ ಅವರ ಪಾರ್ಥನೆಯನ್ನು ತಾಲೂಕಿನ ಆಂದ್ಲೆಯ ಶ್ರೀ ಜಗದೇಶ್ವರಿ ದೇವಿ ಸಿದ್ಧಿಸಿ ಆಶೀರ್ವದಿಸಿದ್ದಾಳೆ.2025ರ ಡಿ. 19ರಂದು ಆಂದ್ಲೆಯ ಶ್ರೀ ಜಗದೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಅಂದು ದೇವಸ್ಥಾನದ ಒಳಕ್ಕೆ ಡಿಕೆಶಿ ಅವರಿಗೆ ಮಾತ್ರ ದರ್ಶನ, ಪೂಜೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಉಪಸ್ಥಿತರಿದ್ದ ಉ.ಕ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಾಸಕ ಸತೀಶ ಸೈಲ ಸೇರಿದಂತೆ ಯಾವ ಮುಖಂಡರನ್ನು ಸಹ ದೇವಸ್ಥಾನದ ಒಳಕ್ಕೆ ಬಿಡದೆ ಹೊರಭಾಗದಲ್ಲಿಯೆ ಅವರನ್ನು ನಿಲ್ಲಿಸಿ, ದೇವಸ್ಥಾನದ ಬಾಗಿಲು ಮುಚ್ಚಿ ಪೂಜಾ ಕಾರ್ಯ ನಡೆಸಲಾಗಿತ್ತು.ಶುಭ ಸೂಚನೆ ನೀಡಿದ್ದಾಳೆ ಎಂದಿದ್ದ ಡಿಕೆಶಿ: ಪೂಜಾ ಕಾರ್ಯದ ನಂತರ ಡಿಕೆಶಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, 5 ವರ್ಷಗಳ ಹಿಂದೆ ಈ ಸ್ಥಳಕ್ಕೆ ಬಂದು ಕುಟುಂಬದ ಕೆಲಸಕ್ಕೆ ಪ್ರಾರ್ಥನೆ ಮಾಡಿದ್ದೆ, ಅದು ಈಡೇರಿತ್ತು. ಮತ್ತೆ ಇಲ್ಲಿಗೆ ಬರುತ್ತೇನೆ ಎಂದಿದ್ದೆ, ಬಂದಿದ್ದೇನೆ. ತಾಯಿ ಜಗದೀಶ್ವರಿ ಆಶೀರ್ವಾದ ಮಾಡು ಎಂದು ಕೇಳಿಕೊಂಡಿದ್ದೇನೆ. ತಾಯಿ ನನ್ನೊಂದಿಗೆ ಮಾತನಾಡಿದ್ದಾಳೆ, ಶುಭ ಸೂಚನೆ ಕೂಡ ನೀಡಿದ್ದಾಳೆ ಎಂದಿದ್ದರು.ಆ ಸಂದರ್ಭ ಬೆಳಗಾವಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ಮಾತನಾಡುವಾಗ ಮುಖ್ಯಮಂತ್ರಿ ಖುರ್ಚಿಗೆ ಎರಡೂವರೆ ವರ್ಷ ಅಂತ ಯಾವುದೇ ಒಪ್ಪಂದ ಆಗಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಹಾಗೆ ಹೈಕಮಾಂಡ್ ಕೂಡ ನನ್ನ ಪರವಾಗಿದೆ ಎಂದು ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಡಿಕೆಶಿ ನಾನು ಯಾವತ್ತೂ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಇರಲ್ಲ ಎಂದು ಹೇಳಿಲ್ಲ. ಹಾಗೆ ಹೈಕಮಾಂಡ್ ಕೂಡ ಅವರ ಪರವಾಗಿಲ್ಲ ಅಂತಾ ಹೇಳಿಲ್ಲ. ಹೈಕಮಾಂಡ್ ಸಿದ್ದರಾಮಯ್ಯ ಪರವಾಗಿ ಇದ್ದದ್ದಕ್ಕೆ ಅವರು ಸಿಎಂ ಆಗಿದ್ದಾರೆ. ನಮ್ಮಲ್ಲಿ ಒಪ್ಪಂದ ಆಗಿದೆ, ಅದರಂತೆ ನಡೆದುಕೊಳ್ಳುತ್ತೇನೆ. ಮಾತನಾಡಿಕೊಂಡಿದ್ದೇವೆ. ಹೈಕಮಾಂಡ್ ಕೂಡ ಒಂದು ಒಪ್ಪಂದಕ್ಕೆ ಬಂದಿದೆ ಎಂದು ಹೇಳಿದ್ದರು.ಮುಖ್ಯಮಂತ್ರಿ ಹುದ್ದೆಗಾಗಿ ದೇವರಲ್ಲಿ ಏನಾದರೂ ಪ್ರಾರ್ಥನೆ ಮಾಡಿಕೊಂಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಇದು ನನ್ನ ಹಾಗೂ ತಾಯಿಯ ನಡುವಿನ ವಿಚಾರ. ಆದರೆ ನನಗೆ ತಾಯಿ ನನ್ನ ಜತೆಗಿರುತ್ತಾಳೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದರು.ಶೀಘ್ರ ಆಗಮನ:
ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ನಂತರ ತಾಯಿ ಜಗದೇಶ್ವರಿಯ ದರ್ಶನ ಹಾಗೂ ವಿಶೇಷ ಪೂಜೆ ಸಲ್ಲಿಸುವುದಾಗಿ ಹೇಳಿದ್ದರಿಂದ ಆದಷ್ಟು ಬೇಗ ಅಂಕೋಲಾಕ್ಕೆ ಆಗಮಿಸಿ ದೇವರ ದರ್ಶನ ಪಡೆಯುವುದಾಗಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ ಎಂದು ಅರ್ಚಕ ಗಣೇಶ ನಾಯ್ಕ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.