ಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರಬೇಕು
ಕನ್ನಡಪ್ರಭ ವಾರ್ತೆ ಮೈಸೂರು
ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿವಿಯ ನಿಯಂತ್ರಣಕ್ಕೆ ಸಿಲುಕಿರುವುದರಿಂದ, ಅವರ ವ್ಯಕ್ತಿತ್ವದ ವಿಕಾಸ ಸಾಧ್ಯವಾಗುತ್ತಿಲ್ಲ ಎಂದು ಸಾಹಿತಿ, ಶಿಕ್ಷಕ ಟಿ. ಸತೀಶ್ ಜವರೇಗೌಡ ಆತಂಕ ವ್ಯಕ್ತಪಡಿಸಿದರು.ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಶ್ರೀ ಛಾಯಾದೇವಿ ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮೊಬೈಲ್ ಮತ್ತು ಟಿವಿಯ ವಿಕಿರಣಗಳು ಮಕ್ಕಳ ಭವಿಷ್ಯವನ್ನು ಕತ್ತಲಿಗೆ ದೂಡುತ್ತಿವೆ ಎಂದು ವಿಷಾದಿಸಿದರು.ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರಬೇಕು. ಈ ಸಾಧನಗಳನ್ನು ಎಷ್ಟು ಬೇಕೋ ಅಷ್ಟು ಬಳಸಿಕೊಳ್ಳಬೇಕು. ಆ ಮೂಲಕ ಅಗತ್ಯ ಜ್ಞಾನ, ಮಾಹಿತಿ, ವಿಚಾರ ಪಡೆಯಬೇಕು. ಆದರೆ, ಇಂದು ಮೊಬೈಲಿನ ಮಿತಿಮೀರಿದ ಬಳಕೆಯಿಂದ ವಿದ್ಯಾರ್ಥಿಗಳು ಕುಬ್ಜರಾಗುತ್ತಿದ್ದಾರೆ ಎಂದರು.ಶ್ರಿ ಛಾಯಾದೇವಿ ವಿದ್ಯಾನಿಕೇತನ ಟ್ರಸ್ಟ್ ಅಧ್ಯಕ್ಷ ಭಾನುಪ್ರಕಾಶ್ ಮಾತನಾಡಿ, ಅತಿ ಚಿಕ್ಕ ವಯಸ್ಸಿನ ಮಕ್ಕಳೆಲ್ಲ ಮೊಬೈಲ್ ದಾಸ್ಯಕ್ಕೆ ಒಳಗಾಗುತ್ತಿದ್ದಾರೆ. ಮೊಬೈಲನ್ನು ಬಿಟ್ಟಿರಲಾರದಷ್ಟು ವ್ಯಾಮೋಹಕ್ಕೆ ತುತ್ತಾಗಿದ್ದಾರೆ. ಇದರಿಂದಾಗಿ ಅವರು ಓದಿನಲ್ಲಿ ಹಿಂದೆ ಬೀಳುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳ ಕಲಿಕೆಯ ಬಗ್ಗೆ ಆಸಕ್ತಿ ವಹಿಸಬೇಕು ಎಂದರು.ಟ್ರಸಿನ ಆಡಳಿತಾಧಿಕಾರಿ ಸಿ. ಅಂತೋಣಿ ಪಾಲ್ ರಾಜ್, ಮುಖ್ಯ ಶಿಕ್ಷಕ ಎಲ್. ಮಂಜುನಾಥ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.