
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು.ಏ. 14 ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿಭವನದ ವರೆಗೆ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಇಬ್ಬರು ಮಹನೀಯರ ಜೀವನ ಸಂದೇಶವನ್ನು ತಿಳಿದುಕೊಳ್ಳುವಂತಾಗಬೇಕು. ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ, ಸವಲತ್ತುಗಳನ್ನು ವಿತರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು.
ಪ್ರಮುಖರಾದ ಮೋಹನ್ ಮೌರ್ಯ ಅವರು ಮಾತನಾಡಿ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಕಲ್ಪಿಸಿದ ಇಬ್ಬರು ಮಹಾನ್ ಸಾಧಕರ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ನೀಡುವಂತಾಗಬೇಕು ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜಯಂತಿ ಆಚರಣೆ ಸಂಬಂಧಿಸಿದಂತೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು.
ಪ್ರಮುಖರಾದ ಪಾಲಾಕ್ಷ, ಪಾಪು ಸಣ್ಣಯ್ಯ, ಗಾಯತ್ರಿ ನರಸಿಂಹ, ಪ್ರೇಮ ಕೃಷ್ಣಪ್ಪ, ಮಹದೇವ, ಎಚ್.ಎಲ್.ಕುಮಾರ, ಜಯಪ್ಪ ಹಾನಗಲ್ಲು, ಸಿ.ಪಿ.ಸಿದ್ದೇಶ್ವರ, ಜಗದೀಶ ಎಚ್.ಆರ್., ಪಿ.ಪಿ.ಸುಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಸೀಲ್ದಾರರಾದ ಶ್ರೀಧರ, ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ತಾ.ಪಂ.ಇಒಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಇತರರು ಇದ್ದರು.