ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬುಜಗಜೀವನರಾಂರವರ 119 ನೇ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು ದವಸ ಧಾನ್ಯಗಳ ಕೊರತೆಯಿಂದ ದೇಶ ಸಮಸ್ಯೆ ಎದುರಿಸುತ್ತಿದ್ದಾಗ ಹೆಚ್ಚು ಆಹಾರ ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸಿ ಹಸಿರು ಕ್ರಾಂತಿಯ ಹರಿಕಾರ ಎನ್ನುವ ಹೆಸರು ಪಡೆದುಕೊಂಡ ಡಾ.ಬಾಬು ಜಗಜೀವನರಾಂರವರು ಕಾಂಗ್ರೆಸ್‍ನಿಂದ ಸ್ವಲ್ಪ ದಿನಗಳ ಕಾಲ ದೂರವಾಗಿದ್ದರು. ಆಗ ಅವರಿಗೆ ಬಿಜೆಪಿ, ಜನತಾ ಪರಿವಾರದವರು ದೇಶದ ಪ್ರಧಾನಿಯನ್ನಾಗಿ ಮಾಡಲಿಲ್ಲ. ಮನಸ್ಸಿಗೆ ನೊಂದುಕೊಂಡು ಮತ್ತೆ ಕಾಂಗ್ರೆಸ್‍ಗೆ ಮರಳಿ ಜೀವಿತದ ಕೊನೆಯವರೆಗೂ ಪಕ್ಷದಲ್ಲಿಯೇ ಉಳಿದುಕೊಂಡಿದ್ದರು. ಅಂತಹವರ ಆದರ್ಶಗಳನ್ನು ಕಾಂಗ್ರೆಸ್‍ನವರು ಪಾಲಿಸಬೇಕಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಎಐಸಿಸಿ ಅಧ್ಯಕ್ಷರಾಗಿದ್ದ ಡಾ.ಬಾಬು ಜಗಜೀವನ್‌ರಾಮ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿಯೂ ಪಾಲ್ಗೊಂಡಿದ್ದರು. ನೆಹರು, ಇಂದಿರಾಗಾಂಧಿ, ಲಾಲ್‍ಬಹದ್ದೂರ್ ಶಾಸ್ತ್ರಿ ದೇಶದ ಪ್ರಧಾನಿಯಾಗಿದ್ದಾಗ ಅನೇಕ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಪಾಕಿಸ್ತಾನ, ಚೀನಾ ನಮ್ಮ ದೇಶದ ಮೇಲೆ ಯುದ್ದಕ್ಕೆ ಬಂದಾಗ ಭಾರತವನ್ನು ವಿಜಯಶಾಲಿಯನ್ನಾಗಿಸಿದ ಕೀರ್ತಿ ಡಾ.ಬಾಬು ಜಗಜೀವನರಾಮ್‌ರವರಿಗೆ ಸಲ್ಲಬೇಕೆಂದರು.ಕಾರ್ಮಿಕ ಸಚಿವರಾಗಿ ಕಾರ್ಮಿಕರು ದಿನಕ್ಕೆ 8 ಗಂಟೆಗಳ ಕಾಲ ಮಾತ್ರ ಕೆಲಸ ಮಾಡಬೇಕೆಂಬ ಕಾಯಿದೆ ಜಾರಿಗೆ ತಂದರು. ಕೃಷಿ ಮಂತ್ರಿಯಾಗಿದ್ದಾಗ ರೈತರನ್ನು ಉತ್ತೇಜಿಸಿ ಹಸಿರು ಕ್ರಾಂತಿಯ ಹರಿಕಾರ ಎನಿಸಿಕೊಂಡರು. ಕಾಂಗ್ರೆಸ್‍ನಲ್ಲಿ ಅಪಾರ ಗೌರವ ಸಂಪಾದಿಸಿದ್ದರು. ಅಂತಹ ಮಹಾನ್ ಪುರುಷರ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಿ.ಎಸ್.ಸುದರ್ಶನ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ