ಕನ್ನಡಪ್ರಭ ವಾರ್ತೆ ಚಾಮರಾಜನಗರ
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಡಾ.ಬಾಬು ಜಗಜೀವನರಾಮ್ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದವರು. ಕೃಷಿ ಸಚಿವರಾಗಿದ್ದಾಗ ಕೃಷಿಗೆ ಹೆಚ್ಚು ಒತ್ತು ನೀಡಿ, ದೇಶದ ಆಹಾರ ಸಮಸ್ಯೆಯನ್ನು ನೀಗಿಸಿದರು ಎಂದು ಸ್ಮರಿಸಿದರು.
ಕಾಡಾ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಮಾತನಾಡಿ, ಬಾಬುಜಗಜೀವನ್ ರಾಮ್ ಕಾರ್ಮಿಕ ಸಚಿವರಾಗಿದ್ದಾಗ ಅನೇಕ ಜನಪರ ಯೋಜನೆ ಅನುಷ್ಠಾನ ಮಾಡಿದ್ದರು. ಅವರಿಗೆ ಪ್ರಧಾನಿಯಾಗುವ ಎಲ್ಲ ಅರ್ಹತೆ ಇತ್ತು. ಆದರೂ ಅವರು ತಮಗೆ ಸಿಕ್ಕ ಉಪಪ್ರದಾನಿ, ಸಚಿವ ಖಾತೆಯನ್ನು ದಕ್ಷತೆಯಿಂದ ನಿರ್ವಹಿಸಿದರು. ಇಂದಿನ ಪೀಳಿಗೆ ಬಾಬೂಜಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೂಳ್ಳಬೇಕಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿಕ್ಕಮಹದೇವ, ಆರ್,ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್, ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೆವಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟಜಾತಿ ವಿಭಾಗದ ಜಿಲ್ಲಾಧ್ಯಕ್ಷ ನಲ್ಲೂರ್ ಸೋಮೇಶ್ವರ್, ಕಾಗಲವಾಡಿ ಚಂದ್ರು, ವಕೀಲ ಅರುಣ್ ಕುಮಾರ್, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ರಾಮಸಮುದ್ರ ಶಿವಮೂರ್ತಿ ಬಸವನಪುರ ರಾಜಶೇಖರ್, ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷ ಸ್ವಾಮಿ, ಎಚ್.ಎಂ ಮಹದೇವಶೆಟ್ಟಿ, ನಸ್ರುಲ್ಲಾಖಾನ್, ಮುತಿಗೆ ದೂರೆ, ಮರಿಯಾಲದಹುಂಡಿ ಕುಮಾರ್, ಮಹದೇವಸ್ವಾಮಿ, ನಾಗರಾಜು, ಮನು, ಸುಂದರ್ ಮತ್ತಿತ್ತರಿದ್ದರು.