ಶೋಷಿತರ ಅಭಿವೃದ್ಧಿಗೆ ಜಗಜೀವನ್‌ರಾಂ ಕೊಡುಗೆ ಅನನ್ಯ

KannadaprabhaNewsNetwork |  
Published : Apr 06, 2026, 01:30 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ 119ನೇ ಜನ್ಮ ದಿನಾಚರಣೆ ನಡೆಯಿತು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ 119ನೇ ಜನ್ಮ ದಿನಾಚರಣೆ ನಡೆಯಿತು.

ಬಾಬೂಜಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಡಾ. ಬಾಬು ಜಗಜೀವನ್ ರಾಂ ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರ, ಶೋಷಿತ ವರ್ಗಗಳ ನಾಯಕ, ಮಾಜಿ ಉಪ ಪ್ರಧಾನಿ ಮತ್ತು ಹಸಿರು ಕ್ರಾಂತಿಯ ಹರಿಕಾರರು. ದಲಿತ ಸಮುದಾಯದ ಏಳಿಗೆಗಾಗಿ ಶ್ರಮಿಸಿದ ಇವರ ಜನ್ಮದಿನವನ್ನು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ದಿನವಾಗಿ ಏಪ್ರಿಲ್ 05ರಂದು ಆಚರಿಸಲಾಗುತ್ತದೆ ಎಂದರು.

ಡಾ.ಬಾಬು ಜಗಜೀವನ ರಾಮ್ ಅವರು ಧೀಮಂತ ರಾಷ್ಟ್ರ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ. ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ದಕ್ಷ ಆಡಳಿತದಿಂದ ನಮ್ಮ ಮುಂದೆ ಅವರು ಆದರ್ಶಪ್ರಾಯರಾಗಿದ್ದಾರೆ. ಕೃಷಿ ಸಚಿವರಾಗಿ ಅವರು ಮಾಡಿದ ವಿನೂತನ, ಅಮೋಘ ಸೇವೆಗೆ ದೇಶ ಅವರನ್ನು ''''''''ಹಸಿರು ಕ್ರಾಂತಿಯ ಹರಿಕಾರ'''''''' ಎಂದೇ ಕರೆಯಿತು. ಇಂದು ಭವಿಷ್ಯದ ಭಾರತಕ್ಕೆ ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ. ಪಂ. ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮಾ, ಸರ್ಕಾರಿ ಕಾಲೇಜಿನ ಉಪ ನಿರ್ದೇಶಕಿ (ಪ್ರ) ಸುನಿತಾ ಡಿ.ಎಸ್ , ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

5ಕೆಡಿಬಿಪಿ6-

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆ-ತಾಯಿಯನ್ನು ಮಕ್ಕಳು ಕಡೆಗಣಿಸುವುದು ಸಲ್ಲ: ನ್ಯಾ. ಇ.ಎಸ್.ಇಂದ್ರೇಶ್
ಒಳ ಮೀಸಲಾತಿಯಿಂದ ಭೋವಿ ಸಮುದಾಯಕ್ಕೆ ಅನ್ಯಾಯ