ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಲೂಕು ಕಚೇರಿಯಲ್ಲಿ ಸೋಮವಾರ ತಾಲೂಕು ಆಡಳಿತದಿಂದ ಆಯೋಜಿಸಿದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆಯಲ್ಲಿ ಮಾತನಾಡಿ, ಜಗಜೀವನ್ ರಾಮ್ ಅವರ ಅವಿರತ ಶ್ರಮದಿಂದಾಗಿ ಇಂದು ಭಾರತವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಅವರ ಆಡಳಿತ ವೈಖರಿ ಮತ್ತು ಆದರ್ಶ ಯುವಪೀಳಿಗೆಗೆ ಮಾದರಿಯಾಗಿದೆ ಎಂದರು.
ತೀವ್ರ ಬರಗಾಲ ಮತ್ತು ಆಹಾರದ ಕೊರತೆಯಲ್ಲಿದ್ದ ಭಾರತದಲ್ಲಿ, ಕೃಷಿ ಉತ್ಪಾದನೆ ಹೆಚ್ಚಿಸಿ ಬಿತ್ತನೆ ಬೀಜಗಳು, ರಸಗೊಬ್ಬರಗಳು ಮತ್ತು ಕೀಟನಾಶಕಗಳ ಬಳಕೆಗೆ ಆದ್ಯತೆ ನೀಡಿ ನೀರಾವರಿ ಸೌಲಭ್ಯಗಳ ವಿಸ್ತರಣೆ ಹಾಗೂ ಸುಧಾರಿತ ಕೃಷಿ ಉಪಕರಣಗಳನ್ನು ರೈತರಿಗೆ ತಲುಪಿಸುವ ಮೂಲಕ ಕೃಷಿ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಪಡಿಸಿ ರೈತರ ಉತ್ಪಾದಕತೆ ಹೆಚ್ಚಿಸುವ ಜೊತೆಗೆ ಅವರ ಆದಾಯವನ್ನು ಹೆಚ್ಚಿಸಲು ನೆರವಾದರು ಎಂದು ಬಣ್ಣಿಸಿದರು.ಕೃಷಿ ಮಂತ್ರಿಯಾಗಿದ್ದಾಗ ದೇಶದಲ್ಲಿ ದೊಡ್ಡ ಬದಲಾವಣೆ ತಂದರು. ಅಮೆರಿಕದಿಂದ ಭಾರತ ದೇಶಕ್ಕೆ ಆಹಾರ ಪದಾರ್ಥಗಳನ್ನು ತರಿಸಿಕೊಳ್ಳುತ್ತಿದ್ದರು. ಕೃಷಿ ಮಂತ್ರಿಯಾಗಿದ್ದಾಗ ಇಡೀ ದೇಶಕ್ಕೆ ಆಹಾರ ಪದಾರ್ಥಗಳ ಕ್ರಾಂತಿ ಮಾಡಿ ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.