ಮಂಡ್ಯದಲ್ಲಿ ಜೈನ ಸಮುದಾಯದಿಂದ ಡಾ.ವಿಷ್ಣು ಪುಣ್ಯಸ್ಮರಣೆ

KannadaprabhaNewsNetwork |  
Published : Dec 30, 2025, 01:45 AM IST
29ಕೆಎಂಎನ್‌ಡಿ-4ಮಂಡ್ಯದ ಗಜೇಂದ್ರ ಮೋಕ್ಷ ಕೊಳದ ಬಳಿ ಜೈನ ಸಮುದಾಯದವರು ಮಾವಿನ ಸಸಿ ನೆಟ್ಟು ನಟ ವಿಷ್ಣುವರ್ಧನ್‌ ಪುಣ್ಯಸ್ಮರಣೆ ಆಚರಿಸಿದರು. | Kannada Prabha

ಸಾರಾಂಶ

೧೯೫೦ರ ಸೆ.೧೮ರಂದು ಜನಿಸಿದ ಸಂಪತ್‌ಕುಮಾರ್ ಎಂಬ ಯುವಕ ಚಿತ್ರರಂಗದಲ್ಲಿ ವಿಷ್ಣುವರ್ಧನ್ ಎಂಬ ರಂಗನಾಮದಿಂದ ಹೆಸರು ಮಾಡಿದ ನಟ. ಅವರು ೨೨೦ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಯ ಚಲನಚಿತ್ರಗಳಲ್ಲಿ ವಿರಳವಾಗಿ ಕಾಣಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಶ್ರೀ ಕಾಳಿಕಾಂಬ ದೇವಾಲಯದ ಮುಂದಿರುವ ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಕನ್ನಡದ ಹಿರಿಯ ನಟ, ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್ ಅವರ ಪುಣ್ಯಸ್ಮರಣೀಯ ಅಂಗವಾಗಿ ಮಾವಿನ ಸಸಿ ನೆಟ್ಟು ಗೌರವ ಸಲ್ಲಿಸಲಾಯಿತು.

ಶ್ರೀಅನಂತನಾಥ ಸ್ವಾಮಿ ದಿಗಂಬರ ಜೈನ ಸಮಾಜ, ಜ್ವಾಲಾಮಾಲಿನಿ ಜೈನ ಮಹಿಳಾ ಸಮಾಜ, ಮಹಾವೀರ ಯುವ ಬಳಗ, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ, ಎಸ್‌ಎಸ್‌ಕೆ ವಿಶ್ವಕರ್ಮ ಸೇವಾ ಟ್ರಸ್ಟ್, ನಾಯಕ ಸಮಾಜದಿಂದ ಕನ್ನಡ ಚಿತ್ರ ರಂಗದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪುಣ್ಯ ಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ಚಿತ್ರರಂಗಕ್ಕೆ ವಿಷ್ಣುವರ್ಧನ್ ಅವರ ಸೇವೆ ಮತ್ತು ಕೊಡುಗೆಯನ್ನು ಸ್ಮರಿಸಲಾಯಿತು.

ಈ ವೇಳೆ ಮಾತನಾಡಿದ ಜ್ವಾಲಾಮಾಲಿನಿ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಪೂರ್ಣಿಮಾ ಗೊಮ್ಮಟೇಶ್ ಮಾತನಾಡಿ, ೧೯೫೦ರ ಸೆ.೧೮ರಂದು ಜನಿಸಿದ ಸಂಪತ್‌ಕುಮಾರ್ ಎಂಬ ಯುವಕ ಚಿತ್ರರಂಗದಲ್ಲಿ ವಿಷ್ಣುವರ್ಧನ್ ಎಂಬ ರಂಗನಾಮದಿಂದ ಹೆಸರು ಮಾಡಿದ ನಟ. ಅವರು ೨೨೦ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಯ ಚಲನಚಿತ್ರಗಳಲ್ಲಿ ವಿರಳವಾಗಿ ಕಾಣಿಸಿಕೊಂಡಿದ್ದಾರೆ ಎಂದರು.

ಕನ್ನಡ ಚಿತ್ರರಂಗಕ್ಕೆ ವಿಷ್ಣುವರ್ಧನ್ ಕೊಡುಗೆಗಳನ್ನು ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರ ಸಮಕಾಲೀನರು ಶ್ಲಾಘಿಸಿದ್ದಾರೆ. ಕರ್ನಾಟಕ ಸರ್ಕಾರವು ಅವರಿಗೆ ೨೦೨೫ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ, ೧೯೯೦ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಮತ್ತು ೨೦೦೭ ರಲ್ಲಿ ಡಾ.ರಾಜ್‌ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸಮೀಕ್ಷೆಯೊಂದರಲ್ಲಿ ವಿಷ್ಣುವರ್ಧನ್ ಅವರನ್ನು ಕನ್ನಡ ಚಲನಚಿತ್ರೋದ್ಯಮದ ಅತ್ಯಂತ ಜನಪ್ರಿಯ ತಾರೆ ಎಂದು ಪಟ್ಟಿ ಮಾಡಲಾಗಿದೆ ಎಂದರು.

ಜೈನ ಸಮಾಜದ ಮಾಜಿ ಅಧ್ಯಕ್ಷ ಶಾಂತಿಪ್ರಸಾದ್, ಮುಖಂಡರಾದ ಮಹಾವೀರ, ಪದ್ಮನಾಭ, ನವೀಶ್, ರಾಜ್ಯ ವಿಶ್ವಕರ್ಮ ಸಮಾಜದ ಜಿಲ್ಲಾ ನಿರ್ದೇಶಕರಾದ ರಾಧಾ, ಕುಸುಮಾ, ರಂಜಿತಾ, ಪದ್ಮಶ್ರೀ, ವೀಣಾ, ಮಾಲಿನಿ, ಪದ್ಮನಾಭ, ಪೂರ್ಣಿಮಾ, ಶಯನ್, ಎಂ.ಬಿ.ರಮೇಶ್, ಕೆಂಪೇಗೌಡ, ಬೋರೇಗೌಡ, ನವೀನ್‌ಶೆಟ್ಟಿ, ಕಾರ್ ಮಹದೇವ್ ಉಪಸ್ಥಿತರಿದ್ದರು.

ಇಂದು ಪ್ರಗತಿ ಪರಿಶೀಲನಾ ಸಭೆ

ಮಂಡ್ಯ: 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ನವೆಂಬರ್-2025ರವರೆಗಿನ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳವಾರ (ಡಿ.30) ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಪಂ ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ಯ ನಿಷೇಧಕ್ಕೆ ಮಹಿಳಾ ಹೋರಾಟ ಅವಿವಾರ್ಯ
ಕಡೂರಿಗೆ 2ನೇ ಅಗ್ನಿಶಾಮಕ ಠಾಣೆ ಮಂಜೂರಾತಿಗೆ ಪ್ರಯತ್ನ: ಕೆ.ಎಸ್.ಆನಂದ್