ಜೈನರು ಭಾರತದ ಸಂಸ್ಕೃತಿಯ ರಾಯಭಾರಿಗಳು:ಸಚಿವೆ ಹೆಬ್ಬಾಳಕರ

KannadaprabhaNewsNetwork |  
Published : Sep 29, 2024, 01:46 AM IST
ಬಸ್ತವಾಡ ಗ್ರಾಮದಲ್ಲಿ ಶನಿವಾರ ನಡೆದ ಜೈನ ಧರ್ಮದ ಪಂಚಕಲ್ಯಾಣ ಪ್ರಾಣ ಪ್ರತಿಷ್ಠಾ ಮಹಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು | Kannada Prabha

ಸಾರಾಂಶ

ಜೈನ ಧರ್ಮಿಯರು ತಮ್ಮ ಧರ್ಮಕ್ಕೆ ತೋರುವ ಶ್ರದ್ಧೆ, ಕಾಳಜಿ, ಪ್ರೀತಿ ನಿಜಕ್ಕೂ ಮೆಚ್ಚುವಂಥದ್ದು, ಇದನ್ನು ನೋಡುತ್ತಿದ್ದರೆ ದೇಶದ ಸಂಸ್ಕೃತಿ ಮುಂದಿನ ಸಾವಿರಾರು ವರ್ಷಗಳ ಕಾಲ ಜೀವಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜೈನ ಧರ್ಮಿಯರು ತಮ್ಮ ಧರ್ಮಕ್ಕೆ ತೋರುವ ಶ್ರದ್ಧೆ, ಕಾಳಜಿ, ಪ್ರೀತಿ ನಿಜಕ್ಕೂ ಮೆಚ್ಚುವಂಥದ್ದು, ಇದನ್ನು ನೋಡುತ್ತಿದ್ದರೆ ದೇಶದ ಸಂಸ್ಕೃತಿ ಮುಂದಿನ ಸಾವಿರಾರು ವರ್ಷಗಳ ಕಾಲ ಜೀವಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಶನಿವಾರ ನಡೆದ ಜೈನ ಧರ್ಮದ ಪಂಚಕಲ್ಯಾಣ ಪ್ರಾಣ ಪ್ರತಿಷ್ಠಾ ಮಹಾಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಅಹಿಂಸಾ ಪರಮೋ ಧರ್ಮ ಎನ್ನುವ ನಮ್ಮ ಜೈನ ಧರ್ಮ ಶ್ರೇಷ್ಠ ಧರ್ಮ ಎಂದು ಹೇಳಿದರು.

ಇಂದು ಜೈನ ಮುನಿಗಳ ಆಶೀರ್ವಾದ ಪಡೆದಿರುವೆ, ಮುನಿಗಳು ಯಾವಾಗಲೂ ನನಗೆ ಮಾರ್ಗದರ್ಶಕರಾಗಿದ್ದಾರೆ. ಅವರ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಾ ಬಂದಿರುವೆ. ಪಂಚಕಲ್ಯಾಣ ಪ್ರಾಣ ಪ್ರತಿಷ್ಠಾ ಮಹಾ ಮಹೋತ್ಸವಕ್ಕೆ ವೈಯಕ್ತಿಕವಾಗಿ ಯಾವುದೇ ನೆರವು ನೀಡುವುದಕ್ಕೆ ಬದ್ಧನಾಗಿದ್ದೇನೆ. ನಾನು ಮತ್ತು ನನ್ನ ಕುಟುಂಬ ಸದಸ್ಯರು ನಿಮ್ಮ ಸೇವೆಗೆ ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.

ಈ ವೇಳೆ ಡಾ.ಬಾಲಾಚಾರ್ಯ ಶ್ರೀ 108 ಸಿದ್ಧಸೇನಾ ಮುನಿ ಮಹಾರಾಜರು, ಕೊಲ್ಹಾಪುರದ ಜಗಭೂಷನ್ ಜಗತ್ವೊಜ್ಜ್ಯ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ, ವರೂರಿನ ಭಟ್ಟಾರಕ ಪಟ್ಟಾಚಾರ್ಯ ಸ್ವಸ್ತಿ ಧರ್ಮಸೇನ ಸ್ವಾಮೀಜಿ ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಬಸವ ಶ್ರೀ ಇಡೀ ಮನುಕುಲ ಪ್ರೀತಿಸುವ ಗುಣದವರು
ಮಕ್ಕಳಲ್ಲಿ ಪರಿಸರ ಜ್ಞಾನ ಮೂಡಿಸುತ್ತಿರುವ ಪ್ರಶಂಸಾರ್ಹ: ಎಂ.ಎನ್.ಪಾಟೀಲ