ಜಕಣಾಚಾರಿ ಜಗತ್ತಿನ ಅದ್ಭುತ ಶಿಲ್ಪಿಗಳಲ್ಲಿ ಒಬ್ಬರು

KannadaprabhaNewsNetwork |  
Published : Jan 02, 2024, 02:15 AM IST
.....ಕ್ಯಾಪ್ಷನಃ1ಕೆಡಿವಿಜಿ35ಃದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಗಣ್ಯರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. | Kannada Prabha

ಸಾರಾಂಶ

ಅಮರ ಶಿಲ್ಪಿ ಜಕಣಾಚಾರಿ ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಜಗತ್ತಿನ ಅದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ.

* ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಬಣ್ಣನೆ

ಕನ್ನಡಪ್ರಭ ವಾರ್ತೆ ದಾವಣಗೆರೆ

ಅಮರಶಿಲ್ಪಿ ಜಕಣಾಚಾರಿ ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿದ್ದು, ಇವರ ಹೆಸರು ಸರ್ವಕಾಲಕ್ಕೂ ಅಮರವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ತುಂಗಾಭದ್ರಾ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪಕಲೆಗೆ ನೀಡಿದ್ದಾರೆ. ಅವರಲ್ಲಿ ವಿಷ್ಣುವರ್ಧನ ಅರಸನ ಕಾಲದಲ್ಲಿ ಶಿಲ್ಪಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಪತ್ನಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೇಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು.

ಅಮರ ಶಿಲ್ಪಿ ಜಕಣಾಚಾರಿ ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಜಗತ್ತಿನ ಅದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಲಸದಲ್ಲಿ ಜ್ಞಾನ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು. ಅವರ ಗುಣ ಮತ್ತು ಬೆಳೆದು ಬಂದ ಪರಿಶ್ರಮದ ಘಟನೆಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದರು.

ಜಕಣಾಚಾರಿ ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು ಪ್ರೊ.ನಾಗರಾಜ ಉಪನ್ಯಾಸ ನೀಡಿದರು. ಮಹಾನಗರಪಾಲಿಕೆ ಉಪಮಹಾಪೌರರಾದ ಯಶೋಧಾ ಹೆಗ್ಗಪ್ಪ, ಜಿಪಂ ಉಪಕಾರ್ಯದರ್ಶಿ ಕೃಷ್ಣ ನಾಯ್ಕ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಜೇಂದ್ರ ಪ್ರಸಾದ್ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರಿದ್ದರು.

....

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ