ಜ.1ರಂದು ಜಕಣಾಚಾರಿ ಸಂಸ್ಮರಣಾ ದಿನ

KannadaprabhaNewsNetwork |  
Published : Dec 21, 2025, 02:00 AM IST
ಚಿತ್ರದುರ್ಗ ಎರಡನೇ ಪುಟಕ್ಕೆ      | Kannada Prabha

ಸಾರಾಂಶ

ಅಮರಶಿಲ್ಬಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲಾಡಳಿತದ ವತಿಯಿಂದ 2026ರ ಜನವರಿ 1ರಂದು ಜಿಲ್ಲಾ ಕೇಂದ್ರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಮಹೆಬೂಬ್ ಜೀಲಾನಿ ಖುರೇಷಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸುವ ಕುರಿತು ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು. ಸರ್ಕಾರದ ಶಿಷ್ಟಾಚಾರ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಕಲಾವಿದರಿಂದ ಗೀತಗಾಯನ ಮತ್ತು ಸಮಾರಂಭದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಅಮರಶಿಲ್ಪಿ ಜಕಣಾಚಾರಿ ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಸಂಸ್ಮರಣಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಮಾಜದವರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಸಮಾಜದ ಇಬ್ಬರು ಸಾಧಕರಿಗೆ ಸನ್ಮಾನ ಹಾಗೂ ಸಮಾಜದ 10 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸಮಾಜದ ಮುಖಂಡರು ಕೋರಿದರು. ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಸಮಾಜದ ಮುಖಂಡರಾದ ಕೆ.ಟಿ.ಸುರೇಶ್, ಎ.ಶಂಕರಾಚಾರ್, ಮಲ್ಲಿಕಾರ್ಜುನಾಚಾರ್, ರವಿಶಂಕರ್, ಸಿ.ಆರ್.ಸುರೇಶ್, ಸುನಿಲ್ ಕುಮಾರ್, ಶಂಕರಮೂರ್ತಿ, ಶಿವಣ್ಣ, ರಾಮಕೃಷ್ಣ ಬಡಿಗೇರ, ಗಾಯಿತ್ರಮ್ಮ, ಪದ್ಮ ಕಾಳಾಚಾರ್, ಹೆಚ್.ಎಸ್.ಟಿ.ಸ್ವಾಮಿ, ಆನಂದಾಚಾರ್ ಸೇರಿದಂತೆ ಮತ್ತಿರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೇವಾ ಕಾರ್ಯಕ್ರಮಗಳೊಂದಿಗೆ ಕೆ. ಮರೀಗೌಡ ಹುಟ್ಟುಹಬ್ಬ
ಶಂಕರರ ಸ್ತೋತ್ರಗಳಿಗೆ ಸಮಾನವಾದ ಸ್ತೋತ್ರ ಇಂದಿಗೂ ರಚನೆಯಾಗಿಲ್ಲ